
ನೇಹಾ ಹಿರೇಮಠ್ ಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಿದ್ದೇವೆ ಎಂದು ಸಿಎಂ ಸಿದ್ಧರಾಮಯ್ಯ ಅಧಿಕೃತವಾಗಿ ಘೋಷಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತಾಡಿದ ಸಿಎಂ, ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಸದ್ದು ಮಾಡುತ್ತಿರುವ ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಿದ್ದು, ಪ್ರಕರಣದ ಸತ್ಯಾಸತ್ಯತೆ ತಿಳಿಯಲು ಪ್ರಕರಣವನ್ನು ಸಿಐಡಿಗೆ ವಹಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಹತ್ಯೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಆರೋಪಿ ಫಯಾಜ್‌ಗೆ ಗಲ್ಲು ಶಿಕ್ಷೆಯೇ ಆಗಬೇಕು. ನೇಹಾ ಸಾವಿಗೆ ಸರ್ಕಾರದಿಂದ ನ್ಯಾಯ ಸಿಗಬೇಕು ಎಂದು ರಾಜ್ಯಾದ್ಯಂತ ಪ್ರತಿಭಟನೆಗಳು ಮುಂದುವರಿದಿದೆ. ಈ ಬೆಳವಣಿಗೆಯ ಮಧ್ಯೆ ಸಿಎಂ ಸಿದ್ದರಾಮಯ್ಯ ನೇಹಾ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುತ್ತೇವೆ ಎಂದು ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿರುವ ಸಿದ್ದರಾಮಯ್ಯ, ನೇಹಾ ಕೊಲೆ ಪ್ರಕರಣದ ತನಿಖೆಯನ್ನು ಸಿಐಗೆ ವಹಿಸುತ್ತೇವೆ ಎಂದಿದ್ದಾರೆ.ನೇಹಾ ಹಿರೇಮಠ ಹತ್ಯೆ ಖಂಡಿಸಿ ಇವತ್ತು ಹುಬ್ಬಳ್ಳಿ-ಧಾರವಾಡ ನಗರಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗಿದೆ. ಅಂಜುಮನ್ ಸಂಸ್ಥೆಯಿಂದ ಪ್ರತಿಭಟನೆ ನಡೆಸಲಾಗುತ್ತಿದ್ದು, ಹುಬ್ಬಳ್ಳಿ ಶಾಹಾಬಜಾರ ಸೇರಿ ಪ್ರಮುಖ ಮಾರ್ಕೆಟ್‌ಗಳನ್ನು ಬಂದ್ ಮಾಡಲಾಗಿದೆ. ಮುಸ್ಲಿಂ ವ್ಯಾಪಾರಿಗಳಿಂದ ಜಸ್ಟೀಸ್ ಟು ನೇಹಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಆರೋಪಿ ಫಯಾಜ್‌ಗೆ ಗಲ್ಲು ಶಿಕ್ಷೆ ಆಗಬೇಕು ಎಂದು ಆಗ್ರಹಿಸಲಾಗಿದೆ. ಹುಬ್ಬಳ್ಳಿ-ಧಾರವಾಡದ ಅವಳಿ ನಗರದಲ್ಲಿ ವ್ಯಾಪಾರ ವಹಿವಾಟು ಸಂಪೂರ್ಣ ಸ್ಥಗಿತವಾಗಿದೆ. ಧಾರವಾಡದ ಅಂಜುಮನ್ ಸಂಸ್ಥೆಯಿಂದ ಧಾರವಾಡದ ಡಿಸಿ ಕಚೇರಿವರೆಗೆ ಮೌನ ಮೆರವಣಿಗೆ ನಡೆಸಲಾಗಿದೆ.