ಹುಬ್ಬಳ್ಳಿ: ಬಿವಿಬಿ ಕಾಲೇಜಿನಲ್ಲಿ ನಡೆದಿದ್ದ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣದ (Neha Hiremath Murder) ಚಾರ್ಜ್ ಶೀಟ್ ಸಲ್ಲಿಸಲು ಸಿಐಡಿ ತಂಡ (CID Investigation) ಸಿದ್ಧತೆ ಮಾಡಿಕೊಂಡಿದೆ.
ಮುಂದಿನ ಒಂದು ವಾರದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಲಿದೆ ಎಂದು ಉನ್ನತ ಮೂಲಗಳು ಹೇಳಿವೆ. ಪಾಲಿಕೆ ಕಾಂಗ್ರೆಸ್ (congress) ಸದಸ್ಯ ನಿರಂಜನ್ ಹಿರೇಮಠ ಅವರ ಪುತ್ರಿ ನೇಹಾಳ ಭೀಕರ ಕೊಲೆಯಾಗಿತ್ತು. ನಿರಂಜನ್ ಅವರು ಈ ಪ್ರಕರಣದಲ್ಲಿ ಹಂತಕ ಫಯಾಜ್ ಅಷ್ಟೇ ಅಲ್ಲ ಕೆಲವರು ಶಾಮೀಲಾಗಿದ್ದಾರೆ ಎಂದು ಆರೋಪ ಮಾಡಿದ್ದರು.
ಲವ್ ಜಿಹಾದ್ ಇರಬಹುದು ಎಂದು ಸಂಶಯ ವ್ಯಕ್ತಪಡಿಸಿದ್ದರು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ, ತನಿಖೆ ನಡೆಸಲು ಸಿಐಡಿಗೆ ವಹಿಸಿತ್ತು. ಬಳಿಕ ತನಿಖೆ ಚುರುಕುಗೊಳಿಸಿದ್ದ ಸಿಐಡಿ ಅಧಿಕಾರಿಗಳ ತಂಡ ಫಯಾಜ್ ಪೋಷಕರು ಹಾಗೂ ಇತರೇ 10 ಜನರನ್ನು ತನಿಖೆಗೆ ಒಳಪಡಿಸಿತ್ತು. ಸಿಐಡಿ ತಂಡ ಚಾರ್ಜ್ ಶೀಟ್ ಸಲ್ಲಿಸಲು ಸಕಲ ತಯಾರಿ ಮಾಡಿಕೊಂಡಿದೆ.