ಬೀದರ್: ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿಗೆ ಉಗ್ರ ಶಿಕ್ಷೆ ಕೊಡಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹತ್ಯೆ ಪ್ರಕರಣವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಈ ಪ್ರಕರಣದ ತನಿಖೆಯನ್ನು ಈಗಾಗಲೇ ಸಿಐಡಿಗೆ ನೀಡಿದ್ದೇವೆ. ಇದಕ್ಕಾಗಿ ವಿಶೇಷ ನ್ಯಾಯಾಲಯ ಮಾಡಬೇಕು. ಕೊಲೆ ಆರೋಪಿಗೆ ಕಠಿಣವಾದ ಶಿಕ್ಷೆ ಕೊಡಿಸಬೇಕು. ನಾನು ಈಗಾಗಲೇ ಪಬ್ಲಿಕ್ ಪ್ಯಾಸಿಕ್ಯೂಟರ್ ಜೊತೆ ಮಾತನಾಡಿದ್ದೇನೆ. ಆರೋಪಿಗೆ ಘೋರ ಶಿಕ್ಷೆ ಕೊಡಿಸುವುದು ಗ್ಯಾರಂಟಿ ಎಂದು ಭರವಸೆ ನೀಡಿದ್ದಾರೆ.
ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಹೇಳುತ್ತಿರುವ ಬಿಜೆಪಿ ನಾಯಕರ ಮನವಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸಿಎಂ, ಬಿಜೆಪಿ ಯಾವ ಕೇಸ್ ನ್ನಾದರೂ ಸಿಬಿಐಗೆ ವಹಿಸಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಇಂತಹ ವಿಷಯದಲ್ಲಿ ಬಿಜೆಪಿ ರಾಜಕಾರಣ ಮಾಡುವುದನ್ನು ಬಿಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಜನರ ಆಸ್ತಿ ಕಿತ್ತುಕೊಳ್ಳುತ್ತಿದೆ ಎಂಬ ಮೋದಿ ಹೇಳಿಕೆಗೆ 15 ಲಕ್ಷ ಅಕೌಂಟ್‍ಗೆ ಹಾಕಿದ್ದಾರಾ.? 2 ಕೋಟಿ ಉದ್ಯೋಗ ಕೊಟ್ರಾ? ರೈತರ ಆದಾಯ ದುಪ್ಪಟ್ಟು ಮಾಡಿದ್ರಾ..? ಡಾಲರ್ ಬೆಲೆ, ಅಗತ್ಯ ವಸ್ತುಗಳ ಬೆಲೆ ಕಡಿಮೆ ಮಾಡಿದ್ರಾ? ಎಂದು ವ್ಯಂಗ್ಯವಾಗಿ ಪ್ರಶ್ನೆ ಕೇಳಿದ್ದಾರೆ.