• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪ್ರಜಾಪ್ರಭುತ್ವ-ಸಮಾಜವಾದ-ಜಾತ್ಯತೀತತೆ ನೆಹರೂ ಬದುಕಿನ ಮೌಲ್ಯಗಳು: ಸಿಎಂ ಸಿದ್ದರಾಮಯ್ಯ

Any Mind by Any Mind
November 14, 2023
in ಕರ್ನಾಟಕ
0
ಕುಮಾರಸ್ವಾಮಿಯವರೇ, ನಿಮಗೆ ಯಾಕೆ ರಾಜ್ಯದ ಬಡವರ ಮೇಲೆ ಈ ಪರಿಯ ದ್ವೇಷ? : ಸಿಎಂ ಸಿದ್ದರಾಮಯ್ಯ ಪ್ರಶ್ನೆ
Share on WhatsAppShare on FacebookShare on Telegram

ADVERTISEMENT

ಆಧುನಿಕ ಭಾರತ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದವರು ಜವಾಹರಲಾಲ್ ನೆಹರೂ. ಅವರ ದೂರದೃಷ್ಟಿಯ ಫಲವನ್ನು ಆಗಿನ-ಈಗಿನ ಪೀಳಿಗೆಯವರೂ ಅನುಭವಿಸುತ್ತಿದ್ದಾರೆ. ಮುಂದಿನ ಪೀಳಿಗೆಯವರೂ ಅನುಭವಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ 134 ನೇ ಜನ್ಮ ದಿನೋತ್ಸವದ ಅಂಗವಾಗಿ ವಿಧಾನಸೌಧದಲ್ಲಿರುವ ಪ್ರತಿಮೆಗೆ ಹೂಮಾಲೆ ಹಾಕಿ ಗೌರವ ಸಲ್ಲಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಪ್ರಜಾಪ್ರಭುತ್ವ-ಸಮಾಜವಾದ-ಜಾತ್ಯತೀತತೆ ನೆಹರೂ ಬದುಕಿನ ಮೌಲ್ಯಗಳು. ಈ ಮೌಲ್ಯಗಳನ್ನು ಪ್ರಧಾನಮಂತ್ರಿಯಾಗಿ ಭಾರತದಲ್ಲಿ ನೆಲೆಯೂರಿಸಲು ಶ್ರಮಿಸಿದರು. ಈ ಮೌಲ್ಯಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವುದೇ ನೆಹರೂ ಅವರಿಗೆ ನಾವು ಸಲ್ಲಿಸುವ ಅರ್ಥಪೂರ್ಣ ಶ್ರದ್ಧಾಂಜಲಿ ಎಂದರು.

ಮಕ್ಕಳ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಕಾರಣಕ್ಕೇ ದೇಶದ ಮಕ್ಕಳ ಪಾಲಿಗೆ ಚಾಚಾ ನೆಹರೂ ಆದರು. ಸ್ವಾತಂತ್ರ್ಯ ಹೋರಾಟದಲ್ಲಿ 9 ವರ್ಷಗಳ ಕಾಲ ಜೈಲುವಾಸ ಅನುಭಸಿದ್ದರು. ಸ್ವಾತಂತ್ರ್ಯಾ ನಂತರದಲ್ಲಿ ದೇಶದ ಪ್ರಧಾನಿಯಾಗಿ ಆಧುನಿಕ ಭಾರತದ ಶಿಲ್ಪಿ ಎನ್ನಿಸಿಕೊಂಡರು ಎಂದು ವಿವರಿಸಿದರು.

ನೆಹರೂ ಅವರು ಪ್ರಧಾನಿ ಆಗಿ ವಿರೋಧ ಪಕ್ಷದವರು ಮಾತಾಡುವಾಗ ಸಹನೆಯಿಂದ ಕೇಳಿಸಿಕೊಳ್ಳುತ್ತಿದ್ದರು. ವಿರೋಧ ಪಕ್ಷದವರ ಮಾತಿಗೆ ಗೌರವ ಕೊಡುತ್ತಿದ್ದ ಘನತೆಯ ವ್ಯಕ್ತಿತ್ವ ಅವರದ್ದಾಗಿತ್ತು ಎಂದು ಸ್ಮರಿಸಿದರು.

ಯೋಜನಾ ಆಯೋಗ ರಚಿಸಿದರು. ಪಂಚವಾರ್ಷಿಕ ಯೋಜನೆ ಜಾರಿಗೆ ತಙದರು. ಕೊನೆ ಕ್ಷಣದವರೆಗೂ ಪ್ರಜಾಪ್ರಭುತ್ವ, ಜಾತ್ಯತೀತ ತತ್ವ, ಸಮಾಜವಾದದ ಮೌಲ್ಯಗಳನ್ನು ಜನಮಾನಸಕ್ಕೆ ವಿಸ್ತರಿಸಲು ಶ್ರಮಿಸಿದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಹೆಚ್ ಡಿ ಕೆಗೆ ಹೊಟ್ಟೆಕಿಚ್ಚು

ಒಂದು ಕೋಟಿಗೂ ಅಧಿಕ ಮಹಿಳೆಯರು ಬಸ್ ಗಳಲ್ಲಿ ಉಚಿತ ಪ್ರಯಾಣ ಮಾಡಿದ್ದಾರೆ. ಇದು ಸಾಧನೆ ಅಲ್ವಾ ? ಈ ಸಾಧನೆಗಳನ್ನು ಹೆಚ್ ಡಿ ಕೆಗೆ ಸಹಿಸಲು ಆಗುತ್ತಿಲ್ಲ. ಈ ಕಾರಣಕ್ಕೇ ಪರದಾಡುತ್ತಿದ್ದಾರೆ ಎಂದು ಇದೇ ವೇಳೆ ಸಿಎಂ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

ಮನವೊಲಿಕೆ ಕಸರತ್ತು.. ಕರಗುತ್ತಾ ಕೋಪ.. ಗೆಲ್ಲುತ್ತಾ ಕೇಸರಿ..?

Next Post

ಕುಟುಕಿದ ಕುಮಾರಸ್ವಾಮಿ.. ಸರ್ಕಾರದ ವಿರುದ್ಧ ಕಿಡಿಕಾರಿದ್ದಕ್ಕೆ ತಿರುಗೇಟು..!

Related Posts

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!
ಕರ್ನಾಟಕ

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

by ಪ್ರತಿಧ್ವನಿ
May 25, 2026
0

ಪ್ರಧಾನಿ ನರೇಂದ್ರ ಮೋದಿ ಅವರು ಮೇ 10ರಂದು ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಭೇಟಿ ನೀಡಿದ್ದ ವೇಳೆ, ಅವರ ಸಂಚಾರ ಮಾರ್ಗದ ಸಮೀಪ ಸ್ಫೋಟಕ ಪತ್ತೆಯಾಗಿದ್ದ...

Read moreDetails
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
Next Post
ಬರಕ್ಕಿಂತ ಜೆಡಿಎಸ್ – ಬಿಜೆಪಿ ಮೈತ್ರಿಯೇ ನಿಮಗೆ ದೊಡ್ಡ ಸಂಕಷ್ಟವಾಗಿದೆ: ಹೆಚ್.ಡಿ.ಕುಮಾರಸ್ವಾಮಿ

ಕುಟುಕಿದ ಕುಮಾರಸ್ವಾಮಿ.. ಸರ್ಕಾರದ ವಿರುದ್ಧ ಕಿಡಿಕಾರಿದ್ದಕ್ಕೆ ತಿರುಗೇಟು..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada