• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ನೆಹರೂ ಸ್ಮಾರಕ ಮ್ಯೂಸಿಯಂ ಇನ್ನು ಪ್ರಧಾನ ಮಂತ್ರಿ ಮ್ಯೂಸಿಯಂ | ಅಧಿಕೃತ ಮರುನಾಮಕರಣ

ಪ್ರತಿಧ್ವನಿ by ಪ್ರತಿಧ್ವನಿ
August 16, 2023
in ಇದೀಗ, ದೇಶ, ರಾಜಕೀಯ
0
ನೆಹರೂ ಸ್ಮಾರಕ ಮ್ಯೂಸಿಯಂ
Share on WhatsAppShare on FacebookShare on Telegram

ದೇಶದ ರಾಜಧಾನಿ ದೆಹಲಿಯ ತೀನ್ ಮೂರ್ತಿ ಭವನ ಆವರಣದಲ್ಲಿರುವ ನೆಹರೂ ಸ್ಮಾರಕ ಮ್ಯೂಸಿಯಂ ಎಂದೇ ಕರೆಯಲಾಗುವ ನೆಹರೂ ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸಂಸ್ಥೆ (ಎನ್ಎಂಎಂಎಲ್) ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದ್ದು ʼಪ್ರಧಾನ ಮಂತ್ರಿಗಳ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸಂಸ್ಥೆʼ (ಪಿಎಂಎಂಎಲ್) ಎಂಬುದಾಗಿ ಅಧಿಕೃತವಾಗಿ ಮರುನಾಮಕರಣಗೊಂಡಿದೆ ಎಂದು ಬುಧವಾರ (ಆಗಸ್ಟ್ 16) ವರದಿಯಾಗಿದೆ.

ADVERTISEMENT

ಅ.14ರಿಂದ ಅಧಿಕೃತವಾಗಿ ನೆಹರೂ ಮ್ಯೂಸಿಯಂ ಇನ್ನು ಮುಂದೆ ʼಪ್ರಧಾನ ಮಂತ್ರಿಗಳ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸಂಸ್ಥೆʼಯಾಗಿ ಬದಲಾಗಿದೆ. ಪ್ರಜಾಪ್ರಭುತ್ವಿಕರಣ ಮತ್ತು ವೈವಿದ್ದೀಕರಣಕ್ಕೆ ಅನುಗುಣವಾಗಿ ಹೆಸರನ್ನು ಬದಲಾಯಿಸಲಾಗಿದೆ ಎಂದು ಪಿಎಂಎಂಎಲ್ ಉಪಾಧ್ಯಕ್ಷ ಎ. ಸೂರ್ಯ ಪ್ರಕಾಶ್ ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ (ಟ್ವಿಟರ್) ಬರೆದುಕೊಂಡಿದ್ದಾರೆ.

Nehru Memorial Museum and Library (NMML) is now Prime Ministers Museum and Library (PMML) Society w.e.f August 14, 2023- in tune with the democratisation and diversification of the remit of the society. Happy Independence Day ! @narendramodi, @rajnathsingh @MinOfCultureGoI pic.twitter.com/V7vJ4OVEIN

— A. Surya Prakash (@mediasurya) August 15, 2023

ಎನ್ಎಂಎಂಎಲ್ನ ಉಪಾಧ್ಯಕ್ಷರೂ ಆಗಿರುವ ರಕ್ಷಣಾ ಸಚಿವ ರಾಜನಾಥ ಸಿಂಗ್ ಅಧ್ಯಕ್ಷತೆಯಲ್ಲಿ ಜೂನ್ 17ರಂದು ನಡೆದ ವಿಶೇಷ ಸಭೆಯಲ್ಲಿ ನೆಹರೂ ಸ್ಮಾರಕ ಮ್ಯೂಸಿಯಂ ಸಂಸ್ಥೆಯ ಹೆಸರನ್ನು ಬದಲಾಯಿಸುವ ಕುರಿತು ನಿರ್ಣಯ ಕೈಗೊಳ್ಳಲಾಗಿತ್ತು.

ವಿಶೇಷ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ರಾಜನಾಥ ಸಿಂಗ್, “ಈ ಸಂಸ್ಥೆಗೆ ಹೊಸ ರೂಪ ನೀಡಲಾಗಿದೆ. ಜವಾಹರಲಾಲ್ ನೆಹರೂ ಅವರಿಂದ ಹಿಡಿದು ನರೇಂದ್ರ ಮೋದಿ ತನಕ ಎಲ್ಲ ಪ್ರಧಾನಿಗಳ ಕೊಡುಗೆಗಳನ್ನು ಈ ಸಂಸ್ಥೆ ಪ್ರದರ್ಶಿಸುತ್ತದೆ. ಹೀಗಾಗಿ ನೆಹರೂ ಮ್ಯೂಸಿಯಂ ಸಂಸ್ಥೆಯ ಹೆಸರನ್ನು ಬದಲಾಯಿಸುವ ಪ್ರಸ್ತಾವ ಮಂಡಿಸಿದ್ದು ಸ್ವಾಗತಾರ್ಹ” ಎಂದು ಹೇಳಿದ್ದರು.

ಈ ಸುದ್ದಿ ಓದಿದ್ದೀರಾ? 77ನೇ ಸ್ವಾತಂತ್ರ್ಯೋತ್ಸವ | ಸರ್ಕಾರದ ಸಾಧನೆ ಬಗ್ಗೆ ಪ್ರಧಾನಿ ಮೋದಿ ಸುದೀರ್ಘ ಮಾತು ; ಮಣಿಪುರ ಸೇರಿ ಹಲವು ವಿಷಯ ಚರ್ಚೆ

“ದೇಶದ ಪ್ರಧಾನಿಯೇ ಒಂದು ಸಂಸ್ಥೆ ಇದ್ದಂತೆ. ಅಧಿಕಾರದಲ್ಲಿದ್ದ ಅವಧಿಯ ಅವರ ಪಯಣವನ್ನು ಕಾಮನಬಿಲ್ಲಿನಲ್ಲಿರುವ ಒಂದೊಂದು ಬಣ್ಣಕ್ಕೆ ಹೋಲಿಸಬಹುದು. ಕಾಮನಬಿಲ್ಲು ಕಣ್ಮನ ಸೆಳೆಯಬೇಕು ಎಂದಾದಲ್ಲಿ ಅದರಲ್ಲಿನ ಎಲ್ಲ ಬಣ್ಣಗಳಿಗೆ ಸಮಾನ ಪ್ರಾತಿನಿಧ್ಯ ಇರಬೇಕು. ಅದೇ ರೀತಿ ಎಲ್ಲ ಪ್ರಧಾನಿಗಳ ಕೊಡುಗೆಗಳಿಗೂ ಸರಿಯಾದ ಪ್ರಾತಿನಿಧ್ಯ ಸಿಗಬೇಕು” ಎಂದು ತಿಳಿಸಿದ್ದರು.

“ನೆಹರೂ ಸ್ಮಾರಕ ಮ್ಯೂಸಿಯಂ ಸಂಸ್ಥೆಯ ಹೆಸರು ಬದಲಾವಣೆ ಮಾಡುವ ಮೂಲಕ ಹಿಂದಿನ ಎಲ್ಲ ಪ್ರಧಾನಿಗಳಿಗೆ ಗೌರವ ನೀಡಿದಂತಾಗಿದೆ. ಈ ನಿರ್ಣಯವು ಪ್ರಜಾಸತ್ತಾತ್ಮಕವಾಗಿಯೂ ಇದೆ” ಎಂದು ರಾಜನಾಥ್ ಸಿಂಗ್ ಹೇಳಿದ್ದರು.

Tags: DelhiJawaharlal NehruNehru Memorial Museum and LibraryNehru Memorial MusiumNMMLPM Narendra ModiPMMLPrime Ministers’ Museum and Libraryದೆಹಲಿನೆಹರೂ ಸ್ಮಾರಕ ಮ್ಯೂಸಿಯಂನೆಹರೂ ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯಪ್ರಧಾನ ಮಂತ್ರಿಗಳ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯಪ್ರಧಾನಿ ನರೇಂದ್ರ ಮೋದಿರಾಜನಾಥ್ ಸಿಂಗ್
Previous Post

ಉತ್ತರಾಖಂಡ | ಭಾರೀ ಮಳೆಗೆ ಜೋಶಿಮಠ ಬಳಿ ಕಟ್ಟಡ ಕುಸಿತ, ಅವಶೇಷಗಳಡಿ ಸಿಲುಕಿರುವ ಹಲವರು

Next Post

ಬೆಂಗಳೂರಿನಲ್ಲಿ ನಾಳೆಯಿಂದ ಬ್ಯಾನರ್​ ಬಟ್ಟಿಂಗ್ಸ್​​ ಹಾಕುವಂತಿಲ್ಲ..! ದಂಡ ಎಷ್ಟು ಗೊತ್ತಾ..?

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
Top Story

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

by ಪ್ರತಿಧ್ವನಿ
May 27, 2026
0

ಬೆಂಗಳೂರು : ಕಾಂಗ್ರೆಸ್ ನಾಯಕತ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ನಡುವಿನ ದೀರ್ಘಕಾಲದ ಶೀತಲ ಸಮರ ಪರಿಹರಿಸುವಲ್ಲಿ ಯಶಸ್ವಿಯಾದಂತೆ ಕಂಡು ಬರುತ್ತಿದೆ. ಈ ಮೂಲಕ ಸಿದ್ದರಾಮಯ್ಯ ವಿದಾಯಕ್ಕೆ...

Read moreDetails
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ದೆಹಲಿ ಸಭೆ ಬಳಿಕ ಕಾಂಗ್ರೆಸ್‌ನಲ್ಲಿ ಕುತೂಹಲ

ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ದೆಹಲಿ ಸಭೆ ಬಳಿಕ ಕಾಂಗ್ರೆಸ್‌ನಲ್ಲಿ ಕುತೂಹಲ

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
Next Post
ಬೆಂಗಳೂರಿನಲ್ಲಿ ನಾಳೆಯಿಂದ ಬ್ಯಾನರ್​ ಬಟ್ಟಿಂಗ್ಸ್​​ ಹಾಕುವಂತಿಲ್ಲ..! ದಂಡ ಎಷ್ಟು ಗೊತ್ತಾ..?

ಬೆಂಗಳೂರಿನಲ್ಲಿ ನಾಳೆಯಿಂದ ಬ್ಯಾನರ್​ ಬಟ್ಟಿಂಗ್ಸ್​​ ಹಾಕುವಂತಿಲ್ಲ..! ದಂಡ ಎಷ್ಟು ಗೊತ್ತಾ..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada