• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ನೆಹರೂ ಸ್ಮಾರಕ ಮ್ಯೂಸಿಯಂ ಇನ್ನು ಪ್ರಧಾನ ಮಂತ್ರಿ ಮ್ಯೂಸಿಯಂ | ರಾಷ್ಟ್ರಪತಿ ಮುರ್ಮು ಅನುಮೋದನೆ

ಪ್ರತಿಧ್ವನಿ by ಪ್ರತಿಧ್ವನಿ
September 1, 2023
in ಇದೀಗ, ದೇಶ, ರಾಜಕೀಯ
0
ನೆಹರೂ ಸ್ಮಾರಕ ಮ್ಯೂಸಿಯಂ

ನೆಹರೂ ಸ್ಮಾರಕ ಮ್ಯೂಸಿಯಂ

Share on WhatsAppShare on FacebookShare on Telegram

ದೆಹಲಿಯ ತೀನ್ ಮೂರ್ತಿ ಭವನ ಆವರಣದಲ್ಲಿರುವ ನೆಹರೂ ಸ್ಮಾರಕ ಮ್ಯೂಸಿಯಂ ಹೆಸರಾದ ನೆಹರೂ ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸಂಸ್ಥೆಯನ್ನು (ಎನ್ಎಂಎಂಎಲ್) ಪ್ರಧಾನ ಮಂತ್ರಿಗಳ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸಂಸ್ಥೆ ಎಂದು ಅಧಿಕೃತವಾಗಿ ಮರುನಾಮಕರಣ ಮಾಡಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅನುಮೋದನೆ ನೀಡಿದ್ದಾರೆ ಎಂದು ಶುಕ್ರವಾರ (ಸೆಪ್ಟೆಂಬರ್‌ 1) ವರದಿಯಾಗಿದೆ.

ADVERTISEMENT

ಈ ಕುರಿತು ರಾಷ್ಟ್ರಪತಿ ಭವನ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದೆ ಎಂದು ಸುದ್ದಿಸಂಸ್ಥೆ ಎಎನ್ಐ ವರದಿ ಮಾಡಿದೆ.

ದೆಹಲಿಯ ತೀನ್ ಮೂರ್ತಿ ಭವನ ಆವರಣದಲ್ಲಿರುವ ನೆಹರೂ ಸ್ಮಾರಕ ಮ್ಯೂಸಿಯಂ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದ್ದು ಈಗ ಅದು ಪ್ರಧಾನ ಮಂತ್ರಿಗಳ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸಂಸ್ಥೆ ಎಂಬುದಾಗಿ ಅಧಿಕೃತವಾಗಿ ಮರುನಾಮಕರಣಗೊಂಡಿದೆ.

ಅ.14ರಿಂದ ಅಧಿಕೃತವಾಗಿ ನೆಹರೂ ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸಂಸ್ಥೆಯು ಪ್ರಧಾನ ಮಂತ್ರಿಗಳ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸಂಸ್ಥೆ ಆಗಿ ಬದಲಾಗಿದೆ. ಪ್ರಜಾಪ್ರಭುತ್ವಿಕರಣ ಮತ್ತು ವೈವಿಧೀಕರಣಕ್ಕೆ ಅನುಗುಣವಾಗಿ ಹೆಸರನ್ನು ಬದಲಾಯಿಸಲಾಗಿದೆ ಎಂದು ಪಿಎಂಎಂಎಲ್ ಉಪಾಧ್ಯಕ್ಷ ಎ. ಸೂರ್ಯ ಪ್ರಕಾಶ್ ತಿಳಿಸಿದ್ದರು.

ಎನ್ಎಂಎಂಎಲ್ನ ಉಪಾಧ್ಯಕ್ಷರೂ ಆಗಿರುವ ರಕ್ಷಣಾ ಸಚಿವ ರಾಜನಾಥ ಸಿಂಗ್ ಅಧ್ಯಕ್ಷತೆಯಲ್ಲಿ ಜೂನ್ 17ರಂದು ನಡೆದ ವಿಶೇಷ ಸಭೆಯಲ್ಲಿ ಸಂಸ್ಥೆಯ ಹೆಸರನ್ನು ಬದಲಾಯಿಸುವ ಕುರಿತು ನಿರ್ಣಯ ಕೈಗೊಳ್ಳಲಾಗಿತ್ತು.

ಬ್ರಿಟಿಷರ ಆಳ್ವಿಕೆ ವೇಳೆ ನಿರ್ಮಿಸಲಾಗಿರುವ ತೀನ್ ಮೂರ್ತಿ ಭವನ, ದೇಶ ಸ್ವಾತಂತ್ರ್ಯ ಪಡೆದ ನಂತರ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಅಧಿಕೃತ ನಿವಾಸವಾಗಿತ್ತು. ನೆಹರೂ ಅವರು ಈ ನಿವಾಸದಲ್ಲಿ 16 ವರ್ಷಗಳಿಗೂ ಹೆಚ್ಚು ಕಾಲ ವಾಸವಾಗಿದ್ದರು. ನೆಹರೂ ಅವರ 75ನೇ ಜನ್ಮದಿನದ ನೆನಪಿಗಾಗಿ 1964ರಲ್ಲಿ ಈ ಭವನದಲ್ಲಿ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ ಸ್ಥಾಪಿಸಿ, ಸಮರ್ಪಿಸಲಾಯಿತು. ನಂತರ ಇದಕ್ಕೆ ಸ್ವಾಯತ್ತ ಸ್ಥಾನಮಾನ ನೀಡಲಾಯಿತು. ಇದರ ಅಂಗವಾಗಿ 1966ರ ಏಪ್ರಿಲ್ 1ರಂದು ನೆಹರೂ ಸ್ಮಾರಕ ಮ್ಯೂಸಿಯಂ ಅಥವಾ ನೆಹರೂ ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ ಸಂಸ್ಥೆಯನ್ನು ಸ್ಥಾಪಿಸಲಾಯಿತು.

Tags: Nehru Memorial Museum and LibraryNehru Memorial MusiumPradhan Mantri MusiumPresident Droupadi Murmuನೆಹರೂ ಸ್ಮಾರಕ ಮ್ಯೂಸಿಯಂನೆಹರೂ ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯಪ್ರಧಾನ ಮಂತ್ರಿಗಳ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯರಾಷ್ಟ್ರಪತಿ ದ್ರೌಪದಿ ಮುರ್ಮು
Previous Post

ಒಂದು ದೇಶ, ಒಂದು ಚುನಾವಣೆ | ಪರಿಶೀಲನೆಗೆ ಕೋವಿಂದ್‌ ನೇತೃತ್ವದಲ್ಲಿ ಸಮಿತಿ

Next Post

ರೈಲ್ವೆ ಮಂಡಳಿ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಜಯಾ ವರ್ಮಾ ಸಿನ್ಹಾ ನೇಮಕ

Related Posts

ಕೋಗಿಲು ಒತ್ತುವರಿ ತೆರವು ವಿವಾದ: ಸಿಎಂ ಸಿದ್ದರಾಮಯ್ಯಗೆ ಸುದೀರ್ಘ ಪತ್ರ ಬರೆದ ಎನ್.ಆರ್ ರಮೇಶ್
Top Story

GBA Election 2026: ಟಿಕೆಟ್ ಆಕಾಂಕ್ಷಿಗಳ ದಿಕ್ಕು ತಪ್ಪಿಸದಿರಿ: ಸಿಎಂಗೆ ಎನ್‌.ಆರ್ ರಮೇಶ್‌ ಪತ್ರ

by ಪ್ರತಿಧ್ವನಿ
February 11, 2026
0

ಬೆಂಗಳೂರು :  ಬೆಂಗಳೂರು ಮಹಾನಗರ ಪಾಲಿಕೆಗಳ ಆಡಳಿತ ವ್ಯವಸ್ಥೆಗೆ ಅತ್ಯವಶ್ಯಕವಿರುವ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಟ್ಟ ನಂತರವಷ್ಟೇ ಮಹಾನಗರದ ಐದು ಪಾಲಿಕೆಗಳಿಗೆ ಚುನಾವಣೆ ನಡೆಸಲು ಸಾಧ್ಯ...

Read moreDetails
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಆಯ್ಕೆ

ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಆಯ್ಕೆ

February 11, 2026
ICC-BCCI: ಅಣ್ತಮ್ಮಾಸ್‌ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..?

ICC-BCCI: ಅಣ್ತಮ್ಮಾಸ್‌ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..?

February 11, 2026
ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

February 10, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
Next Post
ಜಯಾ ವರ್ಮಾ ಸಿನ್ಹಾ

ರೈಲ್ವೆ ಮಂಡಳಿ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಜಯಾ ವರ್ಮಾ ಸಿನ್ಹಾ ನೇಮಕ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada