ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ – ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ -2023ರ ಕಾರ್ಯಚಟುವಟಿಕೆಗೆ ನೀಡಿದ್ದ ಅನುಮತಿಯನ್ನು ದುರುಪಯೋಗಗೊಂಡಿರುವ ಬಗ್ಗೆ ಹಾಗೂ ಚಿಲುಮೆ ಸಂಸ್ಥೆ ಮತದಾರರ ದತ್ತಾಂಶವನ್ನು ಅನಧಿಕೃತವಾಗಿ ಕದ್ದಿರುವ ಬಗ್ಗೆ ಪ್ರತಿಧ್ವನಿ ಮತ್ತು TheNewsMinute ಜಂಟಿ ತನಿಖಾ ವರದಿ ಪ್ರಕಟಿಸಿದ ಬೆನ್ನಲ್ಲೇ ಬಿಬಿಎಂಪಿ ಆಯುಕ್ತ ಹಾಗೂ ಬೆಂಗಳೂರು ಜಿಲ್ಲಾಧಿಕಾರಿಯನ್ನು ಸೇವೆಯಿಂದ ಅಮಾನತ್ತು ಮಾಡಲಾಗಿತ್ತು.
ಇನ್ನು ತೆರವಾಗಿದ್ದ ಎರಡು ಹುದ್ದೆಗಳಿಗೆ ಅಧಿಕಾರಿಗಳನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಂಗಪ್ಪ ಅಮಾನತಿನಿಂದ ತೆರವಾಗಿದ್ದ ಸ್ಥಾನಕ್ಕೆ ಬಿಬಿಎಂಪಿ SWM ಆಯುಕ್ತರಾದ ಡಾ. ಹರೀಶ್ ಕುಮಾರ್.ಕೆ ಬಿಬಿಎಂಪಿ ಆಡಳಿತ ವಿಭಾಗದ ವಿಶೇಷ ಆಯುಕ್ತರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಬೆಂ. ನಗರ ಜಿಲ್ಲಾಧಿಕಾರಿ ಕೆ ಶ್ರೀನಿವಾಸ್ ಅಮಾನತ್ತಿಂದ ತೆರವಾಗಿದ್ದ ಜಾಗಕ್ಕೆ ಬೆಂ. ನಗರ ಜಿಲ್ಲಾ ಪಂಚಾಯತ್ CEO ಆಗಿದ್ದ ಸಂಗಪ್ಪ IAS ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.