• Home
  • About Us
  • ಕರ್ನಾಟಕ
Thursday, July 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಇಂಧನ ಉಳಿತಾಯಕ್ಕೆ ‘ನೆಟ್‌ ಜೀರೋ’ ಕಟ್ಟಡಗಳು ಅನಿವಾರ್ಯ: ಕ್ರೆಡಲ್‌ ಎಂಡಿ ರುದ್ರಪ್ಪಯ್ಯ

ಪ್ರತಿಧ್ವನಿ by ಪ್ರತಿಧ್ವನಿ
April 5, 2025
in Top Story, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಕರ್ನಾಟಕ ಇಂಧನ ಸಂರಕ್ಷಣೆ ಕಟ್ಟಡ ಸಂಹಿತೆ (K-ECBC) ಕುರಿತು ಕ್ರೆಡಲ್‌ನಿಂದ ಕಾರ್ಯಾಗಾರ, ಯುಡಿಡಿ(UDD), ಯುಎಲ್‌ಬಿಗಳು(ULB), ಡಿಎಂಎ(DMA), ಬಿಬಿಎಂಪಿ(BBMP) ಸೇರಿ 200ಕ್ಕೂ ಹೆಚ್ಚು ಅಧಿಕಾರಿಗಳು ಭಾಗಿ.

ADVERTISEMENT

ಇಂಧನ ಸಂರಕ್ಷಣೆ ಮತ್ತು ಪಂಚಾಮೃತ ಗುರಿಗಳನ್ನು ಸಾಧಿಸಲು ‘ನೆಟ್‌ ಜೀರೋ’ (Net Zero) ಕಟ್ಟಡಗಳು ಅನಿರ್ವಾಯ ಎಂದು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪ್ಪಯ್ಯ (Managing Director KP Rudrappaiah) ಹೇಳಿದ್ದಾರೆ.

ನಾಗರಬಾವಿಯ ಕ್ರೆಡಲ್‌ ಕಚೇರಿಯಲ್ಲಿ (KREDL Office Nagarbhavi) ಆಯೋಜಿಸಿದ್ದ ಇಂಧನ ಸಂರಕ್ಷಣೆ ಕಟ್ಟಡ ಸಂಹಿತೆ ಕುರಿತ ಎರಡು ದಿನಗಳ (April.3-4) ಕಾರ್ಯಾಗಾರವನ್ನು ಉದ್ಘಾಟಿಸಿದ ಅವರು, ಇಸಿಬಿಸಿ (ECBC) ನಿಯಮಗಳ ಜಾರಿಗೆ ರಾಜ್ಯದ ಬದ್ಧತೆಯನ್ನು ವಿವರಿಸಿದರು.

“ಬಿಇಇಯ ಇಂಧನ ಸಂರಕ್ಷಣಾ ಕಟ್ಟಡ ಸಂಹಿತೆ 100 ಕಿ.ವ್ಯಾ ಅಥವಾ ಹೆಚ್ಚಿನ ಸಂಪರ್ಕಿತ ಲೋಡ್ ಹೊಂದಿರುವ ಹೊಸ ವಾಣಿಜ್ಯ ಕಟ್ಟಡಗಳಿಗೆ ಇಂಧನ ದಕ್ಷತೆಯ ನಿರ್ದಿಷ್ಟ ನಿಯಮಗಳನ್ನು ನಿಗದಿಪಡಿಸಿದೆ. ಪರಿಸರ ಸ್ನೇಹಿ ‘ನೆಟ್‌ ಜೀರೋ’ ಕಟ್ಟಡಗಳ ನಿರ್ಮಾಣವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಇದು ಅತ್ಯಂತ ಮಹತ್ವದ್ದಾಗಿದ್ದು, ಈ ನಿಯಮಗಳ ಅಳವಡಿಕೆಯಿಂದ ಸಾಂಪ್ರದಾಯಿಕ ಇಂಧನದ ಬಳಕೆ ತಗ್ಗವುದು,” ಎಂದರು.

“ಇಂಧನ ಉಳಿತಾಯದ ಗುರಿ ಸಾಧಿಸುವ ನಿಟ್ಟಿನಲ್ಲಿ ಶೇ.100ರಷ್ಟು ನವೀಕರಿಸಬಹುದಾದದ ಇಂಧನ ಬಳಕೆ ಮಾಡುವ ‘ನೆಟ್‌ ಜೀರೋ’ ಕಟ್ಟಡಗಳು ಅತ್ಯಂತ ನಿರ್ಣಾಯಕವಾಗಿದೆ. ಈ ಕಾರ್ಯಾಗಾರವು ಕರ್ನಾಟಕದಲ್ಲಿ ಇಂಧನ-ಸಮರ್ಥ ಕಟ್ಟಡ ನಿರ್ಮಾಣ ಹಾಗೂ ಅದಕ್ಕೆ ಪೂರಕವಾದ ಅನುಸರಣೆಯನ್ನು ಉತ್ತೇಜಿಸುವುದಲ್ಲದೇ, ರಾಜ್ಯ ಅನುಮೋದನಾ ಪ್ರಾಧಿಕಾರಗಳಾದ ಅಧಿಕಾರಿಗಳಿಗೆ ಅಗತ್ಯ ಪರಿಣಿತಿ ನೀಡುತ್ತದೆ,”ಎಂದರು.

“ದೇಶದಲ್ಲಿ ವಾರ್ಷಿಕವಾಗಿ ಉತ್ಪಾದನೆಯಾಗುವ ಒಟ್ಟು ವಿದ್ಯುತ್ತಿನಲ್ಲಿ ಮೂರನೇ ಒಂದರಷ್ಟು ಭಾಗ ಕಟ್ಟಡಗಳಿಗೆ ಬಳಕೆಯಾಗುತ್ತಿದ್ದು, ಹಸಿರುಮನೆ ಅನಿಲ ಹೊರಸೂಸುವಿಕೆಯ ಅತಿದೊಡ್ಡ ಕಾರಣಗಳಲ್ಲಿ ಇದು ಒಂದಾಗಿದೆ. 2030ರ ವೇಳೆಗೆ ಅಗತ್ಯವಾಗಲಿರುವ ಕಟ್ಟಡಗಳಲ್ಲಿ ಶೇ.70ರಷ್ಟು ಇನ್ನೂ ನಿರ್ಮಾಣವಾಗಬೇಕಿರುವುದರಿಂದ ನೆಟ್ ಜೀರೋ ಕಟ್ಟಡಗಳಿಗೆ ಆದ್ಯತೆ ನೀಡುವುದು ಮುಖ್ಯವಾಗಿದೆ,” ಎಂದು ತಿಳಿಸಿದರು.

ರಾಜ್ಯದಲ್ಲಿ ಇಂಧನ ಸಂರಕ್ಷಣೆ ಕಟ್ಟಡ ಸಂಹಿತೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಅಗತ್ಯ ತಿಳಿವಳಿಕೆ ಹಾಗೂ ಇಸಿಬಿಸಿ ಅನುಸರಣಾ ಕಾರ್ಯವಿಧಾನಗಳು, ತಾಂತ್ರಿಕ ಮಾಹಿತಿ ಹಾಗೂ ಸೌರ, ಪವನ ಮುಂತಾದ ನವೀಕರಿಸಬಹುದಾದ ಇಂಧನದ ಏಕೀಕೃತ ಬಳಕೆಗೆ ಪೂರಕ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ಈ ಕಾರ್ಯಾಗಾರ ಆಯೋಜಿಸಲಾಗಿತ್ತು.

ರಾಜ್ಯಾದ್ಯಂತ ಸುಸ್ಥಿರ ನಿರ್ಮಾಣ ಅಭ್ಯಾಸಗಳನ್ನು ಉತ್ತೇಜಿಸುವ ಈ ಕಾರ್ಯಾಗರದಲ್ಲಿ ಇಸಿಬಿಸಿ ಮಾಸ್ಟರ್ ತರಬೇತುದಾರರಾದ ಕನಕರಾಜ್ ಗಣೇಶನ್ ಮತ್ತು ಕುಲದೀಪ್ ಕುಮಾರ್ ಸಾದೇವಿ ಅವರು ವಾಣಿಜ್ಯ ಕಟ್ಟಡಗಳಲ್ಲಿ ಇಂಧನ ದಕ್ಷತೆಯ ಮಾನದಂಡಗಳ ಅನುಸರಣೆಯ ಕುರಿತು ವಿವರಿಸಿದರು.

ರಾಜ್ಯ ಅನುಮೋದನಾ ಪ್ರಾಧಿಕಾರಗಳಾದ ನಗರಾಭಿವೃದ್ಧಿ ಇಲಾಖೆ (UDD), ಜಿಲ್ಲಾ ಮುನ್ಸಿಪಲ್ ಪ್ರಾಧಿಕಾರಗಳ (DMA) ಅಡಿಯಲ್ಲಿ ಕಾರ್ಯನಿರ್ವಹಿಸುವ ನಗರ ಸ್ಥಳೀಯ ಸಂಸ್ಥೆಗಳು (ULB), ಬಿಬಿಎಂಪಿಯೂ ಸೇರಿ ಸುಮಾರು 200 ಅಧಿಕಾರಿಗಳು ಈ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

ಇಂಧನ ಸಂರಕ್ಷಣೆ ಕಟ್ಟಡ ಸಂಹಿತೆ

ಸುಸ್ಥಿರ ನಗರ ಮೂಲಸೌಕರ್ಯಕ್ಕೆ ಆದ್ಯತೆ ನೀಡುವ ಸ್ಮಾರ್ಟ್ ಸಿಟಿ ಮಿಷನ್, ಇಂಧನ-ಸಮರ್ಥ ಕಟ್ಟಡಗಳಿಗೆ ಒತ್ತು ನೀಡುತ್ತದೆ. ಇಂಧನ ದಕ್ಷತೆ ಬ್ಯೂರೋ ಪ್ರಾರಂಭಿಸಿದ ಇಂಧನ ಸಂರಕ್ಷಣೆ ಕಟ್ಟಡ ಸಂಹಿತೆ (ಇಸಿಬಿಸಿ) ವಾಣಿಜ್ಯ ಕಟ್ಟಡಗಳಿಗೆ ಇಂಧನ ಕಾರ್ಯಕ್ಷಮತೆಯ ಮಾನದಂಡಗಳನ್ನು ನಿಗದಿಪಡಿಸುತ್ತದೆ. ರಾಜ್ಯದಲ್ಲಿ ವಾಣಿಜ್ಯ ಕಟ್ಟಡಗಳಿಗೆ ಇಸಿಬಿಸಿ ಪಾಲನೆ ಕಡ್ಡಾಯವಾಗಿದ್ದು, ನಗರಾಭಿವೃದ್ಧಿ ಇಲಾಖೆಯು ಸ್ಥಳೀಯ ಬೈಲಾಗಳು ಮತ್ತು ಅಸ್ತಿತ್ವದಲ್ಲಿರುವ ಆನ್‌ಲೈನ್ ಅನುಮೋದನೆ ವ್ಯವಸ್ಥೆಯ ಮೂಲಕ ಅದನ್ನು ಜಾರಿಗೊಳಿಸುತ್ತದೆ. ಜತೆಗೆ, ಪಿಡಬ್ಲ್ಯೂಡಿ, ಯುಡಿಡಿ ಮತ್ತು ಡಿಸ್ಕಾಂಗಳಂತಹ ಇಲಾಖೆಗಳ ನಡುವಿನ ಸಮನ್ವಯವನ್ನು ಖಚಿತಪಡಿಸುತ್ತದೆ.

“ಸುಸ್ಥಿರ ಕಟ್ಟಡಗಳ ನಿರ್ಮಾಣದಲ್ಲಿ ಇಸಿಬಿಸಿ ನಿರ್ಣಾಯಕ ಹೆಜ್ಜೆಯಾಗಿದೆ. ವಾಣಿಜ್ಯ ಕಟ್ಟಡಗಳಲ್ಲಿ ಇಂಧನ ದಕ್ಷತೆಯ ಕ್ರಮಗಳನ್ನು ಅನುಷ್ಠಾನಗೊಳಿಸುವ ಮೂಲಕ, ಸಾಂಪ್ರದಾಯಿಕ ಇಂಧನದ ಬೇಡಿಕೆಯನ್ನು ಗಮನಾರ್ಹವಾಗಿ ಕಡಿಮೆ ಮಾಡಬಹುದು ಮತ್ತು ಹಸಿರು ಭವಿಷ್ಯಕ್ಕೆ ದಾರಿ ಮಾಡಿಕೊಡಬಹುದು”.

ಪ್ರವತನಾಲಿನಿ ಸಮಲ್, ಕೇಂದ್ರದ ಇಂಧನ ದಕ್ಷತೆ ಬ್ಯೂರೋ(BEE) ನಿರ್ದೇಶಕಿ

Tags: BBMPBEEBJPCm of KarnatakaCongress PartyDCM DK ShivakumarDMAEnergy MinisterK-ECBCKJ GeorgeKP RudrappaiahKREDLPravatanalinisamalsiddaramaiahUDDULB
Previous Post

ಬೆಲೆ ಏರಿಕೆ ಪ್ರಾರಂಭ ಮಾಡಿದ್ದೇ ಬಿಜೆಪಿ: ಡಿಸಿಎಂ ಡಿ.ಕೆ.ಶಿವಕುಮಾರ್

Next Post

ಕನ್ನಡದ ಸೃಜನಶೀಲ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ನಿರ್ದೇಶನದ ಯಕ್ಷಗಾನ ಕಲೆ ಆಧಾರಿತ “ವೀರ ಚಂದ್ರಹಾಸ” ಸಿನಿಮಾದ ಟ್ರೇಲರ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಬಿಡುಗಡೆಗೊಳಿಸಿದರು.

Related Posts

Top Story

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

by ಪ್ರತಿಧ್ವನಿ
July 30, 2025
0

ನಮ್ಮ ಮತ, ನಮ್ಮ ಹಕ್ಕು ರಕ್ಷಣೆ ಮಾಡಿಕೊಳ್ಳಲು ಸಿದ್ಧರಾಗಬೇಕು, ಪಕ್ಷದ ಕಾರ್ಯಕರ್ತರು, ಮುಖಂಡರಿಗೆ ಕರೆ “ನಮ್ಮ ರಾಜ್ಯದ ಚುನಾವಣೆಯಲ್ಲಿ ಆಗಿರುವ ಅಕ್ರಮ, ಚುನಾವಣಾ ಆಯೋಗದಿಂದ ಆಗಿರುವ ಅನ್ಯಾಯವನ್ನು...

Read moreDetails

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

July 30, 2025

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

July 30, 2025

Australia:16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸದಂತೆ ನೀಷೇದಿಸಿದ ಆಸ್ಟ್ರೇಲಿಯಾ ಸರ್ಕಾರ..!!

July 30, 2025

Lakshmi Hebbalkar: ಗೃಹಲಕ್ಷ್ಮೀ ಯೋಜನೆಯ ಜಂಟಿ ಹೊಣೆಗಾರಿಕೆ ಗುಂಪುಗಳ ಕುರಿತು ಸಭೆ

July 30, 2025
Next Post

ಕನ್ನಡದ ಸೃಜನಶೀಲ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ನಿರ್ದೇಶನದ ಯಕ್ಷಗಾನ ಕಲೆ ಆಧಾರಿತ "ವೀರ ಚಂದ್ರಹಾಸ" ಸಿನಿಮಾದ ಟ್ರೇಲರ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಬಿಡುಗಡೆಗೊಳಿಸಿದರು.

Please login to join discussion

Recent News

Top Story

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

by ಪ್ರತಿಧ್ವನಿ
July 30, 2025
Top Story

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

by ಪ್ರತಿಧ್ವನಿ
July 30, 2025
Top Story

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

by ಪ್ರತಿಧ್ವನಿ
July 30, 2025
Top Story

Australia:16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸದಂತೆ ನೀಷೇದಿಸಿದ ಆಸ್ಟ್ರೇಲಿಯಾ ಸರ್ಕಾರ..!!

by ಪ್ರತಿಧ್ವನಿ
July 30, 2025
Top Story

Lakshmi Hebbalkar: ಗೃಹಲಕ್ಷ್ಮೀ ಯೋಜನೆಯ ಜಂಟಿ ಹೊಣೆಗಾರಿಕೆ ಗುಂಪುಗಳ ಕುರಿತು ಸಭೆ

by ಪ್ರತಿಧ್ವನಿ
July 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

July 30, 2025

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

July 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada