ಬೆಂಗಳೂರು : ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಹಿರಿಯ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರನ್ನು ನಿನ್ನೆ ಶುಕ್ರವಾರ ಆಯ್ಕೆ ಮಾಡಲಾಗಿದ್ದು, ಇಂದು ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗುವ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಕೋಲ್ಕತ್ತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ನಡೆದ ಬೃಹತ್ ಸಮಾರಂಭಲ್ಲಿ ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಅಧಿಕಾರ ಪಡೆದುಕೊಂಡಿದ್ದಾರೆ. ರಾಜ್ಯಪಾಲ ಆರ್.ಎನ್. ರವಿ ಅಧಿಕಾರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ. ಅಲ್ಲದೆ ಉಪಮುಖ್ಯಮಂತ್ರಿಯಾಗಿ ಅಗ್ನಿಮಿತ್ರಾ ಪೌಲ್ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.
ಇನ್ನೂ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಹೆದ್ದಾರಿ ವ್ಯವಹಾರಗಳ ಸಚಿವ ನಿತಿನ್ ಗಡ್ಕರಿ ಸೇರಿದಂತೆ ಬಿಜೆಪಿ ಆಡಳಿತವಿರುವ ಮುಖ್ಯಮಂತ್ರಿಗಳು, ಬಿಜೆಪಿ ಹಾಗೂ ಎನ್ಡಿಎ ಮೈತ್ರಿಕೂಟದ ಘಟಾನುಘಟಿ ನಾಯಕರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ. ದಶಕಗಳ ಕಾಯುವಿಕೆಯ ನಂತರ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಶಕೆ ಆರಂಭವಾಗಿದೆ.
ಇದೇ ವೇಳೆ ಸಿಶಿತ್ ಪ್ರಮಾಣಿಕ್, ದಿಲೀಪ್ ಘೋಷ್, ಕ್ಸುದಿರಾಮ್ ಟುಡು ಹಾಗೂ ಅಶೋಕ್ ಕೀರ್ತನಿಯಾ ಸೇರಿ ಒಟ್ಟು 5 ಜನರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.






