ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಸ್ಥಳೀಯ ಪಕ್ಷವನ್ನು ಸೋಲಿಸಿ ಅಧಿಕಾರಕ್ಕೆ ಏರಿರುವ ಕಾಂಗ್ರೆಸ್ ನಲ್ಲಿ ಈಗ ಸಿಎಂ ಕುರ್ಚಿಗಾಗಿ ದೊಡ್ಡ ಫೈಟ್ ಏರ್ಪಟ್ಟಿತು. ಈಗ ಈ ಫೈಪೋಟಿಗೆಲ್ಲ ತೆರೆ ಬಿದಿದ್ದು, ಕಾಂಗ್ರೆಸ್ ಹೈಕಮಾಂಡ್ ರೇವಂತ್ ರೆಡ್ಡಿ ಅವರನ್ನೇ ಮುಖ್ಯಮಂತ್ರಿ ಮಾಡಲು ನಿರ್ಧರಿಸಿದೆ.
ತೆಲಂಗಾಣ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಆಯ್ಕೆ ಮಾಡಲಾಗಿದ್ದು, ಡಿಸೆಂಬರ್ 7ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಕಾಂಗ್ರೆಸ್ ಘೋಷಿಸಿದೆ.
ತೆಲಂಗಾಣ ಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಿದ್ದ ರೇವಂತ್ ರೆಡ್ಡಿ ಈಗ ನೂತನ ಮುಖ್ಯಮಂತ್ರಿಯಾಗಲಿದ್ದಾರೆ.

ಕಾಂಗ್ರೆಸ್ ನಲ್ಲಿ ಹಿರಿಯ ನಾಯಕ ಉತ್ತಮ್ ಕುಮಾರ್ ರೆಡ್ಡಿ ಮತ್ತು ಭಟ್ಟಿ ವಿಕ್ರಮಾಕ್ ಕೂಡ ಸಿಎಂ ಸ್ಥಾನದ ಆಕಾಂಕ್ಷಿಯಾಗಿದ್ದರು ಆದರೆ ಆಲೋಚಿಸಿ ರೇವಂತ್ ರೆಡ್ಡಿಗೆ ಪಟ್ಟ ಕಟ್ಟಿದ್ದಾರೆ.












