ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿದ್ದು ನಾಲ್ಕನೇ ಅಲೆಯ ಮುನ್ಸೂಚನೆ ನೀಡಿದೆ. ಈ ಮಧ್ಯೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ರೂಪಾಂತರಿಯ ಓಮಿಕ್ರಾನ್ನ ಉಪತಳಿ BA.3, 4 ಹಾಗು 5 ಪ್ರಕರಣಗಳು ಪತ್ತೆಯಾಗಿವೆ.
ಈ ಕುರಿತು ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಜೀನೋಮ್ ಸೀಕ್ವೆನ್ಸಿಂಗ್ ಮಾಹಿತಿಯನ್ನ ಹಂಚಿಕೊಂಡಿದ್ದಾರೆ. ಸದ್ಯ ಆರೋಗ್ಯ ಇಲಾಖೆಯ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು ವಿದೇಶದಿಂದ ಬರುವ ಪ್ರಯಾಣಿಕರನ್ನು ಕಠಿಣ ತಪಾಸಣೆಗೆ ಒಳಪಡಿಸುತ್ತಿದ್ದಾರೆ.
ಈ ಕುರಿತು ಮಾಹಿತಿ ಹಂಚಿಕೊಂಡಿರುವ ಬ್ತಹೃ ಬೆಂಗಳೂರು ಮಹಾನಹರ ಪಾಲಿಕೆ ಮಹದೇವಪುರದಲ್ಲಿ 25, ರಾಜರಾಜೇಶ್ವರಿನಗರದಲ್ಲಿ 3, ಯಲಹಂಕದಲ್ಲಿ 1 ಕೋವಿಡ್ ಕ್ಲಸ್ಟರ್ಗಳು ವರದಿಯಾಗುತ್ತಿವೆ ಎಂದು ತಿಳಿಸಿದೆ.