ಕಾಶ್ಮೀರ ಸಮಸ್ಯೆ ಬಗೆಹರಿಸದೇ ಭಾರತದ ಜೊತೆ ಸೌಹಾರ್ದ ಮಾತುಕತೆ ಸಾಧ್ಯವಿಲ್ಲ ಎಂದು ಪಾಕಿಸ್ತಾನದ ನೂತನ ಪ್ರಧಾನಿ ಶಹಬಾಜ್ ಷರೀಫ್ ಹೇಳಿದ್ದಾರೆ.
ಪಾಕಿಸ್ತಾನದ ಪ್ರಧಾನಿ ಹುದ್ದೆ ಅಲಂಕರಿಸಿದ ಬೆನ್ನಲ್ಲೇ ಸಂಸತ್ ಉದ್ದೇಶಿಸಿ ಮಾತನಾಡಿದ ಅವರು, ಭಾರತದ ಜೊತೆ ಉತ್ತಮ ಬಾಂಧವ್ಯ ಹೊಂದಲು ಬಯಸುತ್ತೇವೆ. ಒಂದೇ ಬಾರಿ ಎರಡು ಚರ್ಚೆ ಅಸಾಧ್ಯ. ಆದ್ದರಿಂದ ಕಾಶ್ಮೀರ ಸಮಸ್ಯೆ ಬಗ್ಗೆ ಮೊದಲು ಚರ್ಚೆ ಆಗಬೇಕು ಎಂದರು.