ಪಿಎಫ್ ಖಾತೆಗೆ ಹೊಸ ನಿಯಮ: ಆಧಾರ್ ಲಿಂಕ್ ಇಲ್ಲ ಅಂದ್ರೆ ಸೌಲಭ್ಯ ಸಿಗಲ್ಲ..!

ಪ್ರಾವಿಡೆಂಟ್ ಫಂಡ್ ಖಾತೆದಾರರಿಗಾಗಿ (PF)ಗೆ ಸಂಬಂಧಿಸಿದಂತೆ ನೌಕರರ ಭವಿಷ್ಯ ನಿಧಿ ಸಂಸ್ಥೆ EPFO ಮಹತ್ವದ ನಿರ್ಧಾರ ಕೈಗೊಂಡಿದೆ. ಪಿಎಫ್ ಖಾತೆಗೆ ಆಧಾರ್ ಜೋಡಣೆ ಮಾಡುವುದು ಕಡ್ಡಾಯವಾಗಿದೆ. ಒಂದು ವೇಳೆ ಮಾಡದಿದ್ದಲ್ಲಿ ಉದ್ಯೋಗದಾತರ ಪಿಎಫ್ ಕೊಡುಗೆ ಖಾತೆಗೆ ಜಮೆ ಆಗುವುದಿಲ್ಲ ಎಂದು ತಿಳಿಸಿದೆ.

ಜೂನ್ 1 ರಿಂದ ನಿಮ್ಮ PF ಖಾತೆಗೆ ಈ ಹೊಸ ನಿಯಮ ಅನ್ವಯವಾಗಲಿದೆ. PF ಖಾತೆಗಳನ್ನು ಆಧಾರ್ ನೊಂದಿಗೆ ದೃಡಪಡಿಸುವಂತೆ ಆದೇಶಿಸಲಾಗಿದೆ. ಇಪಿಎಫ್ಒ ಸೋಸಿಯಲ್ ಸೆಕ್ಯೂರಿಟಿ ಕೋಡ್ 2020ರ ಸೆಕ್ಷನ್ 142 ಅಡಿ ಈ ಹೊಸ ನಿರ್ಧಾರ ಕೈಗೊಂಡಿದೆ. ಈ ನಿಯಮವನ್ನು ಪಾಲಿಸದೆ ಇದ್ದರೆ ಸೌಲಭ್ಯದಿಂದ ವಂಚಿತರಾಗುತ್ತೀರಿ.

ಹೇಗೆ ಪಿಎಫ್ ಖಾತೆಗೆ ಆಧಾರ್ ಲಿಂಕ್ ಮಾಡುವುದು..?

PFನ ಅಧಿಕೃತ ವೆಬ್ ಸೈಟ್ www.epfindia.gov.in ಗೆ ಭೇಟಿ ನೀಡಿ

ನಂತರ Online Services >> e-KYC Portal>> link UAN aadhar ಲಿಂಕ್ ಮೇಲೆ ಕ್ಲಿಕ್ ಮಾಡಿ UAN ಸಂಖ್ಯೆ ಮತ್ತು UAN ಖಾತೆಗೆ ಜೋಡಿಸಲಾಗಿರುವ ಮೊಬೈಲ್ ಸಂಖ್ಯೆಯನ್ನು ನಮೂದಿಸಿ.

ಮೊಬೈಲ್ ಸಂಖ್ಯೆಗೆ ಬರುವ OTP ಹಾಕಿ, ಕೆಳಗಿನ ಬಾಕ್ಸ್ ನಲ್ಲಿ ಆಧಾರ್ ಸಂಖ್ಯೆಯನ್ನು ನಮೂದಿಸಿ.

ಫಾರ್ಮ್ ಸಬ್ಮಿಟ್ ಮಾಡಿ

ಪ್ರೋಸೀಡ್ ಟು OTP ವೆರಿಫಿಕೇಶನ್ ಆಪ್ಶನ್ ಮೇಲೆ ಕ್ಲಿಕ್ ಮಾಡಿ

ಇನ್ನೊಮ್ಮೆ ಆಧಾರ್ ಡಿಟೇಲ್ ಗಳನ್ನು ಪರಿಶೀಲನೆಗೆ ಒಳಪಡಿಸಿ,

ಆಧಾರ್ ಜೊತೆಗೆ ಲಿಂಕ್ ಮಾಡಲಾಗಿರುವ ಮೊಬೈಲ್ ಸಂಖ್ಯೆಗೆ OTP ಜನರೇಟ್ ಮಾಡಬೇಕು.

ಈ ಎಲ್ಲಾ ವೆರಿಫಿಕೇಶನ್ ಪೂರ್ಣಗೊಂಡ ನಂತರ ಆಧಾರ್ ಸಂಖ್ಯೆ ನಿಮ್ಮ PF ಖಾತೆ ಜೊತೆಗೆ ಲಿಂಕ್ ಆಗುತ್ತದೆ.

Related posts

Latest posts

ಕುಂಭ ಮೇಳ ಸಂದರ್ಭದಲ್ಲಿ ಮಾಡಿದ 1 ಲಕ್ಷ ಕೋವಿಡ್-19 ಪರೀಕ್ಷೆಗಳು ನಕಲಿ: ತನಿಖಾ ವರದಿ

ಹರಿದ್ವಾರದ ಕುಂಭ ಮೇಳ ಸಂದರ್ಭದಲ್ಲಿ ಮಾಡಲಾಗಿದ ನಾಲ್ಕು ಲಕ್ಷ ಕೋವಿಡ್ ಟೆಸ್ಟ್ ಫಲಿತಾಂಶಗಳಲ್ಲಿ ಹಲವು ನಕಲಿ ಎಂದು ಉತ್ತರಾಖಂಡ ಆರೋಗ್ಯ ಇಲಾಖೆ ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ. ವಿವರವಾದ ತನಿಖೆಯ 1,600 ಪುಟಗಳಲ್ಲಿ...

ನನ್ನ ಹೇಳಿಕೆಯಿಂದ ನಾನು ಹಿಂದೆ ಸರಿಯಲ್ಲ : ನಟ ಚೇತನ್ ಸ್ಪಷ್ಟನೆ

ಬ್ರಾಹ್ಮಣ್ಯ ವಿರೋಧಿ ಹೇಳಿಕೆ ಎಂಬ ಆರೋಪದ ಅಡಿ ಇಂದು ಬಸವನಗುಡಿ ಪೊಲೀಸರ ಮುಂದೆ ಹಾಜರಾದ ನಟ ಚೇತನ್ ತನ್ನ ಹೇಳಿಕೆಯ ಬಗ್ಗೆ ಪೊಲೀಸರ ಮುಂದೆ ಸ್ಪಷ್ಟನೆ ದಾಖಲಿಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ...

ಚಿಕ್ಕಬಳ್ಳಾಪುರ: ಅರ್ಹ ಫಲಾನುಭವಿಗಳನ್ನು ಗುರುತಿಸುವಲ್ಲಿ ವಿಫಲ: ರೈತರಿಗೆ ಸಿಗುತ್ತಿಲ್ಲ ಪರಿಹಾರ ಧನ

ಕೊರೋನಾ ಲಾಕ್ಡೌನ್ ಸಮಯದಲ್ಲಿ ಸಂಕಷ್ಟಕ್ಕೊಳಗಾದ ರೈತರಿಗೆ ಸರ್ಕಾರ ಪರಿಹಾರದ ಅಭಯ ಕೊಟ್ಟಿತು. ಆದರೆ ಅರ್ಹ ಫಲಾನುಭವಿಗಳನ್ನ ಗುರುತಿಸುವಲ್ಲಿ ವಿಫಲವಾದ ಪರಿಣಾಮ ನಿಜವಾದ ರೈತರಿಗೆ ಪರಿಹಾರ ಸಿಗದಂತಾಗಿದೆ. ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ರೈತರು ತಮ್ಮ...