• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

MB Patil: ₹882 ಕೋಟಿ ವೆಚ್ಚದಲ್ಲಿ ಹೊಸೊಡಾದ ಸೌರಕೋಶ ತಯಾರಿಕಾ ಘಟಕ: ಎಂ. ಬಿ. ಪಾಟೀಲ

ಪ್ರತಿಧ್ವನಿ by ಪ್ರತಿಧ್ವನಿ
September 12, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಇನಾಬತಾ ಕಂಪನಿಯ ಕ್ರೀಡಾ ಉತ್ಪನ್ನ ತಯಾರಿಕಾ ಘಟಕ 2027ರಲ್ಲಿ ಕಾರ್ಯಾರಂಭ

ADVERTISEMENT

ʼರಾಜ್ಯದಲ್ಲಿ ಅಂದಾಜು ₹ 882 ಕೋಟಿ ವೆಚ್ಚದಲ್ಲಿ ಸೌರ ಕೋಶ ತಯಾರಿಸುವ ಘಟಕ ಸಾಪಿಸುವುದನ್ನು ಜಪಾನಿನ ಹೊಸೊಡಾ ಹೋಲ್ಡಿಂಗ್ಸ್‌ ಖಚಿತಪಡಿಸಿದೆʼ ಎಂದು ಬೃಹತ್ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು ತಿಳಿಸಿದ್ದಾರೆ.

ʼತೋಂಗ್‌ ತರ್‌ ಎನರ್ಜಿ ಸೊಲುಷನ್ಸ್‌ (ಟಿಟಿಇಎಸ್‌) ಸಹಯೋಗದಲ್ಲಿ ಈ ಯೋಜನೆ ಕಾರ್ಯಗತಗೊಳ್ಳಲಿದೆ. ಆರಂಭದಲ್ಲಿ ಟಿಟಿಇಎಸ್‌ ಈ ಯೋಜನೆಗೆ ₹490 ಕೋಟಿ ವೆಚ್ಚ ಮಾಡಲು ನಿರ್ಧರಿಸಿತ್ತು. ಫೆಬ್ರುವರಿಯಲ್ಲಿ ನಡೆದಿದ್ದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಈ ಯೋಜನೆಯ ಒಪ್ಪಂದಕ್ಕೆ ಅಂಕಿತ ಹಾಕಲಾಗಿತ್ತು. ಟಿಟಿಇಎಸ್‌ ಜೊತೆಗಿನ ಪಾಲುದಾರಿಕೆ ಫಲವಾಗಿ ಈ ಯೋಜನೆಯ ಹೂಡಿಕೆ ಮೊತ್ತವನ್ನು ಹೊಸೊಡಾ ಹೋಲ್ಡಿಂಗ್ಸ್‌ ಹೆಚ್ಚಿಸಿದೆ. ಇದರಿಂದ ರಾಜ್ಯದಲ್ಲಿ 500 ಜನರಿಗೆ ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆʼ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಜಪಾನ್‌ಗೆ ಭೇಟಿ ನೀಡಿರುವ ರಾಜ್ಯದ ಉನ್ನತ ಮಟ್ಟದ ನಿಯೋಗದ ನೇತೃತ್ವವಹಿಸಿರುವ ಸಚಿವರು, ಶುಕ್ರವಾರ ಹೊಸೊಡಾ ಹೋಲ್ಡಿಂಗ್ಸ್‌ನ ಅಧ್ಯಕ್ಷ ನಕಾಮುರಾ ಸ್ಯಾನ್‌ ಅವರ ಜೊತೆಗೆ ನಡೆಸಿದ ಸಮಾಲೋಚನೆಯಲ್ಲಿ ಕಂಪನಿಯು ಈ ಹೂಡಿಕೆ ಹೆಚ್ಚಳವನ್ನು ಖಚಿತಪಡಿಸಿದೆ.

ʼಬಂಡವಾಳ ಹೂಡಿಕೆ ಹೆಚ್ಚಿಸುವ ಕಂಪನಿಯ ನಿರ್ಧಾರವು ಸ್ವಾಗತಾರ್ಹವಾಗಿದ್ದು, ಸೌರಶಕ್ತಿ ಉತ್ಪಾದನೆಗೆ ರಾಜ್ಯ ಸರ್ಕಾರ ನೀಡುತ್ತಿರುವ ಆದ್ಯತೆಯನ್ನು ಈ ನಿರ್ಧಾರವು ಸಮರ್ಥಿಸುತ್ತದೆʼ ಎಂದು ಸಚಿವರು ಸಂತಸ ವ್ಯಕ್ತಪಡಿಸಿದ್ದಾರೆ. ಕ್ರೀಡಾ ಪರಿಕರಗಳನ್ನು ತಯಾರಿಸುವ ಕರ್ನಾಟಕದಲ್ಲಿನ ತನ್ನ ಘಟಕವು 2027ರ ವೇಳೆಗೆ ಕಾರ್ಯಾರಂಭ ಮಾಡಲಿದೆ ಎಂದು ಜಪಾನಿನ ಇನಾಬತಾ ಕಂಪನಿಯು ಕರ್ನಾಟಕದ ನಿಯೋಗಕ್ಕೆ ಭರವಸೆ ನೀಡಿದೆ.

ತಯಾರಿಕಾ ಘಟಕ ಸ್ಥಾಪನೆಗೆ ಅಗತ್ಯವಾದ ಭೂಮಿ ಸ್ವಾಧೀನ ಹಾಗೂ ಸಂಬಂಧಿತ ಅನುಮೋದನೆಗಳನ್ನು ತ್ವರಿತವಾಗಿ ಒದಗಿಸಲಾಗುವುದು ಎಂದು ನಿಯೋಗವು ಭರವಸೆ ನೀಡಿದೆ.

ಲೋಹದ ಉಪಕರಣ ಬಳಸಿ ನಿರ್ದಿಷ್ಟ ಆಕಾರದಲ್ಲಿ ನಿಖರವಾಗಿ ಕತ್ತರಿಸುವ ತಂತ್ರಜ್ಞಾನದಲ್ಲಿ ಪರಿಣತಿ ಹೊಂದಿರುವ (ಎನ್‌ಗ್ರೇವಿಂಗ್‌ ಮತ್ತು ಡೈಕಟಿಂಗ್‌ ಟೆಕ್ನಾಲಜಿ) ಟೆತ್ಸುಜಿಕವಾ ಕಂಪನಿಯು ರಾಜ್ಯದಲ್ಲಿ ತನ್ನ ತಯಾರಿಕಾ ಚಟುವಟಿಕೆ ವಿಸ್ತರಿಸುವ ಮಾಹಿತಿಯನ್ನು ರಾಜ್ಯದ ನಿಯೋಗದ ಜೊತೆ ಹಂಚಿಕೊಂಡಿದೆ.

ಉನ್ನತ ಮಟ್ಟದ ನಿಯೋಗದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್ ಸೆಲ್ವಕುಮಾರ್‌, ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ, ಮತ್ತಿತರರು ಇದ್ದಾರೆ.

Tags: HK PatilM B Patilm b patil exclusive talksm b patil newsm b patil son engagementm b patil vs shivananda patilmb patil​MB Patilmb patil bhashanmb patil bijapurmb patil congressmb patil familymb patil fansmb patil housemb patil latestmb patil latest newsmb patil livemb patil meetingmb patil mlamb patil newsmb patil oathmb patil sonmb patil son basanmb patil songmb patil speechmb patil statementmb patil today newsmb patil videomb patil videosmbpatilMinister MB Patil
Previous Post

“31 DAYS” ಚಿತ್ರದ ಗೆಲುವು. ಇದೇ ಸಂದರ್ಭದಲ್ಲಿ N- STAR ENTERPRISES ನ ಮುಂದಿನ ಚಿತ್ರಗಳ ಬಗ್ಗೆ ಮಾಹಿತಿ ನೀಡಿದ ನಿರಂಜನ್ ಶೆಟ್ಟಿ.

Next Post

DK Shivakumar: ಹೇಮಾವತಿ ಲಿಂಕ್ ಕೆನಾಲ್ ಯೋಜನೆಯಲ್ಲಿ ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

March 3, 2026
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
ಖಮೇನಿ ಹತ್ಯೆಗೆ ಮಹಿಳೆಯರ ಸಂಭ್ರಮ: ಅಲ್ಲಿ ಮಹಿಳಾ ಕಾನೂನು ಎಷ್ಟು ಕಠಿಣವಾಗಿದೆ ಗೊತ್ತೆ ?

ಖಮೇನಿ ಹತ್ಯೆಗೆ ಮಹಿಳೆಯರ ಸಂಭ್ರಮ: ಅಲ್ಲಿ ಮಹಿಳಾ ಕಾನೂನು ಎಷ್ಟು ಕಠಿಣವಾಗಿದೆ ಗೊತ್ತೆ ?

March 3, 2026
Next Post

DK Shivakumar: ಹೇಮಾವತಿ ಲಿಂಕ್ ಕೆನಾಲ್ ಯೋಜನೆಯಲ್ಲಿ ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada