• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, September 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Dr. Sharan Prakash Patil: ಮಂಗಳವಾರ ಬೆಳಗ್ಗೆ ನೂತನ ತಂತ್ರಜ್ಞಾನದ ಲೋಕಾರ್ಪಣೆ..

ಪ್ರತಿಧ್ವನಿ by ಪ್ರತಿಧ್ವನಿ
July 14, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿದೇಶ, ವಿಶೇಷ, ಶೋಧ
0
Share on WhatsAppShare on FacebookShare on Telegram

ಶುಶ್ರೂಷಕರ ನೋಂದಣಿಗಾಗಿ ವಿಶೇಷ ಡಿಜಿ ಲಾಕರ್‌ ತಂತ್ರಜ್ಞಾನ: ದೇಶದಲ್ಲೇ ಮೊದಲು.

ADVERTISEMENT

ದೇಶದಲ್ಲೇ ಮೊದಲ ಬಾರಿಗೆ ಶುಶ್ರೂಷಕರ ನೊಂದಣಿಗಾಗಿ, ಕರ್ನಾಟಕ ರಾಜ್ಯ ಶುಶ್ರೂಷ ಪರಿಷತ್‌ ಅಭಿವೃದ್ಧಿಪಡಿಸಿರುವ ವಿಶೇಷ ಡಿಜಿ ಲಾಕರ್‌ ತಂತ್ರಜ್ಞಾನ ಜಾರಿಗೆ ಬಂದಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್‌ ತಿಳಿಸಿದರು.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವರು, ಆಧಾರ್‌, ಡಿಜಿ ಲಾಕರ್‌ ಇ-ಕೆವೈಸಿ ಮೂಲಕ ನೋಂದಣಿ ಪ್ರಮಾಣ ಪತ್ರಗಳನ್ನು ವಿತರಿಸುವ ತಂತ್ರಜ್ಞಾನದ ಲೋಕಾರ್ಪಣೆ ಜುಲೈ 15 ಮಂಗಳವಾರ ನಡೆಯಲಿದೆ ಎಂದರು.

ಯುಐಡಿಎಐ (UIDAI), ಸಿ-ಇಜಿ (C-eG), ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ ಹಾಗೂ ಕರ್ನಾಟಕ ರಾಜ್ಯ ಶುಶ್ರೂಷ ಪರೀಕ್ಷಾ ಮಂಡಳಿ ಸಹಯೋಗದೊಂದಿಗೆ ಈ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಈ ತಂತ್ರಜ್ಞಾನದ ನೆರವಿನಿಂದ ಆಧಾರ್‌ ಇ-ಕೆವೈಸಿ (E-Kyc)ಯಿಂದ ಶುಶ್ರೂಷಕರ ವೈಯಕ್ತಿಕ ಡಾಟಾ, ವಿಳಾಸ, ಫೋಟೋ, ಹಾಗೂ ಇತರೆ ಮಾಹಿತಿಗಳನ್ನು ಆಧಾರ್‌ ಸರ್ವರ್‌ ನಿಂದ ನೇರವಾಗಿ ಕರ್ನಾಟಕ ಶುಶ್ರೂಷ ಪರಿಷತ್‌ ಪಡೆದುಕೊಳ್ಳಬಹುದಾಗಿದೆ. ಈ ಹಿಂದೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ನೋಂದಣಿಗಾಗಿ ಕರ್ನಾಟಕ ರಾಜ್ಯ ಶುಶ್ರೂಷ ಪರಿಷತ್ತಿನ ಬೆಂಗಳೂರಿನ ಕೇಂದ್ರ ಕಚೇರಿಗೆ ಬರಬೇಕಾಗಿತ್ತು ಎಂದರು.

ತೊಂದರೆ ತಪ್ಪಿಸಲು ನೂತನ ತಂತ್ರಜ್ಞಾನ
ರಾಜ್ಯ ಮತ್ತು ಹೊರ ರಾಜ್ಯದ ಶುಶ್ರೂಷ ಸಮೂಹ ಕೇವಲ ನೋಂದಣಿಯ ಉದ್ದೇಶದಿಂದ ಊಟ, ವಸತಿಗಾಗಿ ಸಾವಿರಾರು ರೂಪಾಯಿ ವ್ಯಯಿಸಿ ಪರದಾಡುವ ಪರಿಸ್ಥಿತಿ ಇತ್ತು. ಜೊತೆಗೆ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ನೋಂದಣಿಗಾಗಿ ಸರತಿಯಲ್ಲಿ ನಿಂತು ಕಾಯಬೇಕಾಗಿತ್ತು. ಮಹಿಳೆಯರು, ಗರ್ಭಿಣಿಯರು, ಹಸುಗೂಸುಗಳ ತಾಯಂದಿರು ಸಾಕಷ್ಟು ತೊಂದರೆ ಅನುಭವಿಸಬೇಕಾಗಿತ್ತು. ನೂತನ ತಂತ್ರಜ್ಞಾನದ ಅಳವಡಿಕೆಯಿಂದ ಈ ಎಲ್ಲಾ ಸಮಸ್ಯೆಗಳಿಗೆ ಮುಕ್ತಿ ದೊರಕಿದಂತಾಗಿದೆ ಎಂದು ಡಾ. ಪಾಟೀಲ್‌ ತಿಳಿಸಿದರು.

ಕರ್ನಾಟಕ ರಾಜ್ಯ ಶುಶ್ರೂಷ ಪರಿಷತ್ತಿಗೆ ನೋಂದಣಿ ಉದ್ದೇಶದಿಂದ ನಾಡಿನ ನಾನಾ ಮೂಲೆಗಳಿಂದ ಮತ್ತು ವಿವಿಧ ಹೊರರಾಜ್ಯಗಳಿಂದ ಬರುತ್ತಿದ್ದ ಶುಶ್ರೂಷಕರ ತೊಂದರೆಗಳನ್ನು ತಪ್ಪಿಸಲು ದೇಶದಲ್ಲೇ ಪ್ರಥಮ ಬಾರಿಗೆ ಆಧಾರ್‌ ಮತ್ತು ಡಿಜಿ ಲಾಕರ್‌ ಇ-ಕೆವೈಸಿ ಮೂಲಕ ಅವಕಾಶ ಮಾಡಿಕೊಡಲಾಗುತ್ತಿದೆ. ವ್ಯಾಪಕವಾಗಿ ಅಭಿವೃದ್ಧಿಗೊಳ್ಳುತ್ತಿರುವ ಡಿಜಿಟಲ್‌ ತಂತ್ರಜ್ಞಾನ ಹಾಗೂ ಕೃತಕ ಬುದ್ದಿಮತ್ತೆಯ ನೆರವಿನಿಂದ ನಮ್ಮ ಸರ್ಕಾರ ಅಳವಡಿಸಿಕೊಂಡಿರುವ ಈ ನೂತನ ತಂತ್ರಜ್ಞಾನ ಲಕ್ಷಾಂತರ ಶುಶ್ರೂಷಕರ ತೊಂದರೆ ತಾಪತ್ರಯಗಳಿಗೆ ಅಂತ್ಯ ಹಾಡಲಿದೆ ಎಂದು ಸಚಿವರು ಹೇಳಿದರು.

ನಕಲಿ ಹಾವಳಿ ತಡೆಗಟ್ಟಲು ಸಹಕಾರಿ
ಹೊಸ ಡಿಜಿ ಲಾಕರ್‌ (Digi Locker-Requester) ತಂತ್ರಜ್ಞಾನದಿಂದ ಶುಶ್ರೂಷಕರ ಆಧಾರ್‌ ಕಾರ್ಡ್‌, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಅಂಕಪಟ್ಟಿ ಮತ್ತಿತರ ಪ್ರಮಾಣಪತ್ರಗಳನ್ನು ಸಂಬಂಧಪಟ್ಟ ಆಯಾ ಪರೀಕ್ಷಾ ಬೋರ್ಡ್‌ಗಳಿಂದ ನೇರವಾಗಿ ಪಡೆದುಕೊಳ್ಳಬಹುದು. ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ ಹಾಗೂ ಕರ್ನಾಟಕ ರಾಜ್ಯ ಶುಶ್ರೂಷ ಪರೀಕ್ಷಾ ಮಂಡಳಿಗಳು ಅಳವಡಿಸಿಕೊಂಡಿರುವ ಈ ತಂತ್ರಜ್ಞಾನದಿಂದ ಪರೀಕ್ಷಾ ಫಲಿತಾಂಶವನ್ನು ನೇರವಾಗಿ ಕರ್ನಾಟಕ ರಾಜ್ಯ ಶುಶ್ರೂಷ ಪರಿಷತ್‌ ಪಡೆದುಕೊಳ್ಳಲಿದೆ. ನಂತರ ಡಿಜಿ ಲಾಕರ್‌ ತಂತ್ರಜ್ಞಾನ (Digi Locker-Issuer)ದಿಂದ ಶುಶ್ರೂಷಕರಿಗೆ ನೇರವಾಗಿ ನೋಂದಣಿ ಪತ್ರವನ್ನು ವಿತರಿಸಬಹುದಾಗಿದೆ ಎಂದು ಶುಶ್ರೂಷ ಪರಿಷತ್ತಿನ ಕುಲಸಚಿವರಾದ
ಡಾ.ಕೆ.ಮಲ್ಲು ತಿಳಿಸಿದರು.

ಈ ತಂತ್ರಜ್ಞಾನದ ಮತ್ತೊಂದು ಪ್ರಮುಖವಾದ ಅಂಶ ಎಂದರೆ, ನಕಲಿ ನೋಂದಣಿ ಪ್ರಮಾಣ ಪತ್ರಗಳ ಹಾವಳಿಯನ್ನೂ ತಡೆಗಟ್ಟಬಹುದಾಗಿದೆ ಎಂದು ‌ಡಾ.ಕೆ.ಮಲ್ಲು ಮಾಹಿತಿ ನೀಡಿದರು.

Tags: dr sharan prakash patildr sharan prakash patil mladr sharan prakash patil wifeDr. Sharan Prakash Patilmla sharan prakash patilsharan prakash patilsharan prakash patil agesharan prakash patil bytesharan prakash patil latestsharan prakash patil newssharan prakash patil on rsssharan prakash patil pasharan prakash patil sedamsharan prakash patil specchsharan prakash patil udagisharan prakash patil videossharan prakash patil wins
Previous Post

Dr. Shivaraj Kumar: ಅನಾವರಣವಾಯಿತು ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ ವಿಶೇಷ ಪೋಸ್ಟರ್. .

Next Post

DK Shivakumar: ಶಕ್ತಿ ಯೋಜನೆ ದೇಶಕ್ಕೆ ಮಾದರಿ; ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ..

Related Posts

ಸೆ. 28 ರಿಂದ 30ರವರೆಗೆ ಬ್ಯಾಂಕ್ ಮುಷ್ಕರ : ಗ್ರಾಹಕರು ಮುಂಚಿತವಾಗಿ ಮಾಡಬೇಕಾದ 3 ಮುಖ್ಯ ಕೆಲಸಗಳು
Top Story

ಸೆ. 28 ರಿಂದ 30ರವರೆಗೆ ಬ್ಯಾಂಕ್ ಮುಷ್ಕರ : ಗ್ರಾಹಕರು ಮುಂಚಿತವಾಗಿ ಮಾಡಬೇಕಾದ 3 ಮುಖ್ಯ ಕೆಲಸಗಳು

by ಪ್ರತಿಧ್ವನಿ
September 23, 2026
0

ನವದೆಹಲಿ : ದೇಶಾದ್ಯಂತ ಬ್ಯಾಂಕಿಂಗ್ ಸೇವೆಗಳಲ್ಲಿ ಸತತ ಮೂರು ದಿನಗಳ ಕಾಲ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ. ವಾರಕ್ಕೆ 5 ದಿನಗಳ ಕೆಲಸ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ...

Read moreDetails
`ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದಂತೆ’ : KPSC ಮುಚ್ಚುವೆ ಎಂದ ಸಿಎಂ ಡಿಕೆಶಿಗೆ ಹೆಚ್.ಡಿ. ಕುಮಾರಸ್ವಾಮಿ ತರಾಟೆ

`ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದಂತೆ’ : KPSC ಮುಚ್ಚುವೆ ಎಂದ ಸಿಎಂ ಡಿಕೆಶಿಗೆ ಹೆಚ್.ಡಿ. ಕುಮಾರಸ್ವಾಮಿ ತರಾಟೆ

September 23, 2026
BREAKING : ಏಷ್ಯನ್ ಗೇಮ್ಸ್ ಭಾರತದ ಮೀರಾಬಾಯಿ ಚಾನುಗೆ ಬೆಳ್ಳಿ ಪದಕ

BREAKING : ಏಷ್ಯನ್ ಗೇಮ್ಸ್ ಭಾರತದ ಮೀರಾಬಾಯಿ ಚಾನುಗೆ ಬೆಳ್ಳಿ ಪದಕ

September 23, 2026
ವಿಧಾನಸಭೆಯಲ್ಲಿ ಸಚಿವ ಕೆ.ಜೆ. ಜಾರ್ಜ್ ಕಾರ್ಯವೈಖರಿಗೆ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಶ್ಲಾಘನೆ.!

ವಿಧಾನಸಭೆಯಲ್ಲಿ ಸಚಿವ ಕೆ.ಜೆ. ಜಾರ್ಜ್ ಕಾರ್ಯವೈಖರಿಗೆ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಶ್ಲಾಘನೆ.!

September 23, 2026
ಲೋಡ್ ಶೆಡ್ಡಿಂಗ್ : ಸದನದಲ್ಲಿ ಆರ್. ಅಶೋಕ್‌ಗೆ ಸಚಿವ ಕೆ.ಜೆ. ಜಾರ್ಜ್ ಖಡಕ್ ಕೌಂಟರ್.!

ಲೋಡ್ ಶೆಡ್ಡಿಂಗ್ : ಸದನದಲ್ಲಿ ಆರ್. ಅಶೋಕ್‌ಗೆ ಸಚಿವ ಕೆ.ಜೆ. ಜಾರ್ಜ್ ಖಡಕ್ ಕೌಂಟರ್.!

September 23, 2026
Next Post

DK Shivakumar: ಶಕ್ತಿ ಯೋಜನೆ ದೇಶಕ್ಕೆ ಮಾದರಿ; ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada