• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ಪ್ರತಿಧ್ವನಿ by ಪ್ರತಿಧ್ವನಿ
April 11, 2026
in Top Story
0
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Share on WhatsAppShare on FacebookShare on Telegram

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ ಈ ಘಟನೆ ಇದೀಗ ಆತ್ಮಹತ್ಯೆ ಶಂಕೆಯತ್ತ ತಿರುಗಿದ್ದು, ತನಿಖೆ ಗಂಭೀರ ಹಂತಕ್ಕೆ ತಲುಪಿದೆ.

ADVERTISEMENT
ಕಣ್ಣೀರಾಕಿದ Prof.Krishne Gowda : ನನ್ನ ಮಗಳಿಗೂಸ್ಕರ ನಮ್ಮ ಬೀಗರಿಗೆ ಪತ್ರ ಬರೆದೆ..! #pratidhvani #Prfsor

ವಿಮಲ್ ಪ್ರಜಾಪತಿ ಮತ್ತು ಭಾವನಾ ಪ್ರಜಾಪತಿ ದಂಪತಿಗಳು ಸ್ಥಳೀಯ ಡೈರಿಯಿಂದ ದೋಸೆ ಹಿಟ್ಟು ಖರೀದಿಸಿ ಮನೆಗೆ ತಂದಿದ್ದರು. ಇದನ್ನು ಸೇವಿಸಿದ ಬಳಿಕ ಕುಟುಂಬದ ಎಲ್ಲರೂ ತೀವ್ರ ಅಸ್ವಸ್ಥರಾಗಿದ್ದು, ವಾಂತಿ-ಭೇದಿ ಲಕ್ಷಣಗಳು ಕಾಣಿಸಿಕೊಂಡಿವೆ. ಈ ಘಟನೆಯಲ್ಲಿ ಮೂರು ತಿಂಗಳ ಶಿಶು ರಾಹಾ ಹಾಗೂ ನಾಲ್ಕು ವರ್ಷದ ಮಗಳು ಮಿಶ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ದಂಪತಿಗಳು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

DR Rajkumar | ಅಣ್ಣಾವ್ರ ನೆನಪಿನಲ್ಲಿ.  ಪ್ರೊಫೆಸರ್    ಕೃಷ್ಣೇಗೌಡ| Special interview | Pratidhvani |

ಮೂರು ತಿಂಗಳ ಶಿಶುವಿಗೆ ದೋಸೆಹಿಟ್ಟಿನಂತಹ ಆಹಾರ ನೀಡಲಾಗುವುದಿಲ್ಲ ಎಂಬ ವಿಚಾರ ಹಿನ್ನೆಲೆ, ಈ ಸಾವಿನ ಬಗ್ಗೆ ಮೊದಲಿನಿಂದಲೇ ಅನುಮಾನಗಳು ವ್ಯಕ್ತವಾಗಿದ್ದವು. ತಾಯಿ ವಿಷಾಹಾರಕ್ಕೆ ಒಳಗಾದ ಬಳಿಕ ಮಗುವಿಗೆ ಸ್ತನ್ಯಪಾನ ಮಾಡಿಸಿದ್ದರಿಂದ ಪರಿಣಾಮವಾಗಿರಬಹುದು ಎಂಬ ಶಂಕೆಯೂ ವ್ಯಕ್ತವಾಗಿತ್ತು.ಆದರೆ ತನಿಖೆಯಲ್ಲಿ ಮಹತ್ವದ ಮಾಹಿತಿ ಹೊರಬಿದ್ದಿದ್ದು, ದಂಪತಿಗಳ ರಕ್ತದ ಮಾದರಿಗಳಲ್ಲಿ ಅಪಾಯಕಾರಿ ಕೀಟನಾಶಕವಾದ ಅಲ್ಯೂಮಿನಿಯಂ ಫಾಸ್ಫೈಡ್ ಪತ್ತೆಯಾಗಿದೆ ಎಂದು ವಿಧಿವಿಜ್ಞಾನ ಪ್ರಯೋಗಾಲಯದ ಪ್ರಾಥಮಿಕ ವರದಿ ತಿಳಿಸಿದೆ. ಇದರಿಂದ ದೋಸೆ ಹಿಟ್ಟಿನಲ್ಲಿ ವಿಷ ಮಿಶ್ರಣದ ಬಗ್ಗೆ ಪ್ರಶ್ನೆಗಳು ಎದ್ದಿದ್ದು, ಪ್ರಕರಣಕ್ಕೆ ಹೊಸ ಆಯಾಮ ಸಿಕ್ಕಿದೆ.

Pranesh Comedy: ಗಗನಚುಕ್ಕಿ ಜಲಪಾತೋತ್ಸವದಲ್ಲಿ ಪ್ರಾಣೇಶ್ ಹಾಸ್ಯಕ್ಕೆ ಜನರಿಗೆ ನಗುವೋ ನಗು  #pratidhvani #cm

ಇನ್ನೊಂದೆಡೆ, ದಂಪತಿಗಳು ಘಟನೆಗೆ ಸಂಬಂಧಿಸಿದಂತೆ ನೀಡುತ್ತಿರುವ ಹೇಳಿಕೆಗಳಲ್ಲಿ ವ್ಯತ್ಯಾಸ ಕಂಡುಬಂದಿದ್ದು, ಪೊಲೀಸರಲ್ಲಿ ಮತ್ತಷ್ಟು ಅನುಮಾನಕ್ಕೆ ಕಾರಣವಾಗಿದೆ. ಸುಮಾರು 200ಕ್ಕೂ ಹೆಚ್ಚು ಜನರಿಗೆ ಮಾರಾಟವಾದ ದೋಸೆ ಹಿಟ್ಟು ಒಂದೇ ಕುಟುಂಬಕ್ಕೆ ಮಾತ್ರ ಹಾನಿ ಉಂಟು ಮಾಡಿರುವುದು ಕೂಡ ಸಂಶಯಕ್ಕೆ ಕಾರಣವಾಗಿದೆ.

Zameer Ahmed: ಅಂಬೇಡ್ಕರ್ ಬಗ್ಗೆ ಅದ್ಭುತ ಭಾಷಣ ಮಾಡಿದ‌ಸಚಿವ ಜಮೀರ್..! #ambedkar #speech

ಮೂರು ತಿಂಗಳ ಮಗುವಿನ ಅಂತ್ಯಕ್ರಿಯೆಯನ್ನು ಕುಟುಂಬವು ರಹಸ್ಯವಾಗಿ ನಡೆಸಿರುವ ವಿಚಾರವೂ ಬೆಳಕಿಗೆ ಬಂದಿದೆ. ನಂತರ ನಾಲ್ಕು ವರ್ಷದ ಮಗಳು ಸಾವನ್ನಪ್ಪಿದ ಬಳಿಕವೇ ಪ್ರಕರಣ ಬಹಿರಂಗವಾಗಿದೆ. ಈ ಹಿನ್ನೆಲೆ, ಇಡೀ ಕುಟುಂಬ ಆತ್ಮಹತ್ಯೆಗೆ ಯತ್ನಿಸಿತ್ತೇ ಎಂಬ ಪ್ರಶ್ನೆ ಉದ್ಭವಿಸಿದೆ.

ಪ್ರಕರಣದ ನಿಖರ ಕಾರಣ ತಿಳಿಯಲು ಅಂತಿಮ ಫೋರೆನ್ಸಿಕ್ ವರದಿ ನಿರೀಕ್ಷಿಸಲಾಗುತ್ತಿದೆ. ಮಕ್ಕಳ ದೇಹದಲ್ಲಿ ಪತ್ತೆಯಾದ ವಿಷಕಾರಿ ಅಂಶಗಳು ದೋಸೆ ಹಿಟ್ಟಿನಿಂದಲೇ ಬಂದವೆಯೋ ಅಥವಾ ಬೇರೆ ಮೂಲದಿಂದಲೋ ಎಂಬುದು ವರದಿ ಬಳಿಕ ಸ್ಪಷ್ಟವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Tags: #indianewsAhmedabadcrimenewsDosaBatterFoodPoisoninginvestigationMysteryDeathPoisonCasepratidavani
Previous Post

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

Related Posts

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ
Top Story

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

by ಪ್ರತಿಧ್ವನಿ
April 11, 2026
0

ಭೂಮಿಯ ಮೇಲೆ ಹೆಚ್ಚುತ್ತಿರುವ ಮಾನವ ಜನಸಂಖ್ಯೆ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂಬುದು ಇತ್ತೀಚಿನ ಅಧ್ಯಯನವೊಂದರಿಂದ ಬೆಳಕಿಗೆ ಬಂದಿದೆ. ಪ್ರತಿ ವ್ಯವಸ್ಥೆಗೆ ಒಂದು ಮಿತಿ ಇರುವಂತೆ,...

Read moreDetails
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada