• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರನ್ಯಾ ಪ್ರಕರಣಕ್ಕೆ ಹೊಸ ಟ್ವೀಸ್ಟ್‌ ಕೊಟ್ಟ ಎಂ. ಬಿ. ಪಾಟೀಲ್‌

ಕೃಷ್ಣ ಮಣಿ by ಕೃಷ್ಣ ಮಣಿ
March 10, 2025
in ಕರ್ನಾಟಕ, ರಾಜಕೀಯ, ಶೋಧ, ಸಿನಿಮಾ
0
ರನ್ಯಾ ಪ್ರಕರಣಕ್ಕೆ ಹೊಸ ಟ್ವೀಸ್ಟ್‌ ಕೊಟ್ಟ ಎಂ. ಬಿ. ಪಾಟೀಲ್‌
Share on WhatsAppShare on FacebookShare on Telegram

ಬೆಂಗಳೂರು: ನಟಿ ರನ್ಯಾ ರಾವ್ ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ಜೈಲು ಸೇರಿದ ಸುದ್ದಿ ಜೋರಾಗಿ ಸದ್ದು ಮಾಡುತ್ತಿದೆ. ಅವರು ದುಬೈಯಿಂದ ಸುಮಾರು ₹12.56 ಕೋಟಿ ಮೌಲ್ಯದ 14.2 ಕಿಲೋಗ್ರಾಂ ಚಿನ್ನವನ್ನು ಅಕ್ರಮವಾಗಿ ಭಾರತಕ್ಕೆ ತರಲು ಯತ್ನಿಸಿದ್ದ ಪ್ರಕರಣ ಮನೆ ಮಾತಾಗಿದೆ.

ADVERTISEMENT

ಇದೀಗ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಇದೀಗ ಸಚಿವ ಎಂ.ಬಿ ಪಾಟೀಲ್‌ ಹೊಸ ಟ್ವೀಸ್ಟ್‌ ಕೊಟ್ಟಿದ್ದಾರೆ.. ಬಿಜೆಪಿ ಸರ್ಕಾರದಲ್ಲಿ ರನ್ಯಾ ಯೋಜನೆಗೆ ಮಂಜೂರು ಮಾಡಿದ್ರು, ಆದರೆ ಯೋಜನೆಗೆ ಹಣ ಕೊಟ್ಟಿಲ್ಲ ಎಂದು ಸಚಿವ ಎಂ.ಬಿ ಪಾಟೀಲ್‌ ಹೊಸ ಬಾಂಬ್‌ ಸಿಡಿಸಿದ್ದಾರೆ.. ವಿಧಾನಸೌಧದಲ್ಲಿ ಮಾತನಾಡಿದ ಅವರು,
ನಟಿ ರನ್ಯಾ ರಾವ್ ಅವರ ಟಿಎಂಟಿ ಸರಳು ತಯಾರಿಸುವ ಯೋಜನೆಗೆ ಹಿಂದಿನ ಬಿಜೆಪಿ ಸರ್ಕಾರ ಅನುಮೋದನೆ ನೀಡಿತ್ತು. ಇದಕ್ಕೆ ಶಿರಾ ಕೈಗಾರಿಕಾ ಪ್ರದೇಶದಲ್ಲಿ 12 ಎಕರೆ ಜಮೀನು ಮಂಜೂರು ಮಾಡಲು 2023ರ ಜನವರಿ 2ರಂದು ನಡೆದಿದ್ದ ಉನ್ನತ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ ತೀರ್ಮಾನಿಸಿತ್ತು. ಆದರೆ ರನ್ಯಾ ಅವರು‌ ನಿಗದಿತ ಅವಧಿಯಲ್ಲಿ ಹಣ ಪಾವತಿಸದ ಕಾರಣ ಅವರಿಗೆ ಜಮೀನಿನ ಹಂಚಿಕೆ ಮಾಡಿಲ್ಲ‌ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸ್ಪಷ್ಟಪಡಿಸಿದ್ದಾರೆ.

Basavaraj Bommai : ರನ್ಯಾಗೆ ಭೂಮಿ ಮಂಜೂರು ಬಗ್ಗೆ ಬೊಮ್ಮಾಯಿ ಹೇಳಿದ್ದೇನು..! #ranya #gold #case #bjp

ಯೋಜನೆ ಏನೆಂದರೇ : ನಟಿ ರನ್ಯಾ ರಾವ್ ಅವರ Ksiroda India Pvt Ltd ಕಂಪನಿಗೆ, ಫೆಬ್ರವರಿ 22, 2023ರಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಭೂಮಿ ಮಂಜೂರು ಮಾಡಿತ್ತು ಎಂಬ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ. ಈ ಮಾಹಿತಿಯನ್ನು ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ ಮಾಹಿತಿ ಹಂಚಿಕೊಂಡಿದೆ.

2023ರ ಫೆಬ್ರವರಿ ತಿಂಗಳಲ್ಲಿ ಉಕ್ಕಿನ ಉತ್ಪಾದನಾ ಘಟಕ ಸ್ಥಾಪನೆಗಾಗಿ 12 ಎಕರೆ ಕೈಗಾರಿಕಾ ಭೂಮಿ ಮಂಜೂರು ಮಾಡಲಾಗಿತ್ತು. ಈ ಭೂಮಿ ತುಮಕೂರು ಜಿಲ್ಲೆಯ ಶಿರಾ ಕೈಗಾರಿಕಾ ಪ್ರದೇಶದಲ್ಲಿ ಗುರುತಿಸಲಾಗಿತ್ತು ಎನ್ನಲಾಗಿದೆ. 137ನೇ ರಾಜ್ಯ ಮಟ್ಟದ ಏಕಜಾಲರಿ ಅನುಮೋದನಾ ಸಮಿತಿಯ ಸಭೆಯಲ್ಲಿ ಈ ಭೂಮಿ ಹಂಚಿಕೆ ಮಂಜೂರಾಗಿತ್ತು. ಅಲ್ಲದೇ ಈ ಯೋಜನೆಯಡಿ ₹138 ಕೋಟಿ ಹೂಡಿಕೆ ಮಾಡಲಾಗುವುದು ಎಂಬ ಮಾತು ಕೇಳಿ ಬಂದಿದ್ದಲ್ಲದೇ, 160 ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ತೀರ್ಮಾನಿಸಲಾಗಿತ್ತು.

ಇನ್ನು KIADB ಬಿಡುಗಡೆ ಮಾಡಿದ ಈ ಒಂದೇ ಒಂದು ಹೇಳಿಕೆ ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದ ಅಲೆಯನ್ನೇ ಸೃಷ್ಟಿಸಿದೆ. ಏಕೆಂದರೆ ಈಗ ಆಡಳಿತದಲ್ಲಿ ಇರುವ ಕಾಂಗ್ರೆಸ್ ಸರ್ಕಾರಕ್ಕೆ, ಬಿಜೆಪಿ ವಿರುದ್ಧ ತಿರುಗಿಬೀಳಲು ಹೊಸ ಪುಷ್ಠಿ ಸಿಕ್ಕಂತಾಗಿದೆ. ಕಾಂಗ್ರೆಸ್ ವಿರುದ್ಧ ಉರಿದು ಬೀಳುತ್ತಿರುವ ಕೇಸರಿಪಡೆ ಬಾಯಿ ಮುಚ್ಚಿಸಲು, ರನ್ಯಾ ರಾವ್ ಅವರ ಭೂ ವಿವಾದವೇ ದೊಡ್ಡ ಅಸ್ತ್ರವಾಗಿದೆ. ನಿಮ್ಮ ಸರ್ಕಾರವಿದ್ದಾಗಲೇ ಇಂಥ ಕೆಲಸಗಳು ನಡೆಯುವುದು ಎಂದು ತಿವಿಯಲು, ಚೂರಿ ಸಿಕ್ಕಂತಾಗಿದೆ. ನಟಿ ರನ್ಯಾ ರಾವ್ ದುಬೈನಿಂದ ಸುಮಾರು ₹12.56 ಕೋಟಿ ಮೌಲ್ಯದ 14.2 ಕಿಲೋಗ್ರಾಂ ಚಿನ್ನವನ್ನು ಅಕ್ರಮವಾಗಿ ಭಾರತಕ್ಕೆ ತರಲು ಯತ್ನಿಸಿದ್ದರು ಎಂಬ ಆರೋಪ ಕೇಳಿಬಂದಿರುವ ಸುದ್ದಿ ಜಗಜ್ಜಾಹೀರಾಗಿದೆ. ಇದರ ನಡುವೆಯೇ 2023ರಲ್ಲಿ ಕೈಗಾರಿಕಾ ಘಟಕ ಸ್ಥಾಪನೆಗಾಗಿ ಭೂಮಿಯನ್ನು ಮಂಜೂರು ಮಾಡಿತ್ತು ಎಂಬ ವಿಷಯ ಬೆಳಕಿಗೆ ಬಂದಿದ್ದು, ರಾಜಕೀಯ ಲೇಪನ ಮೆತ್ತಿಕೊಂಡಂತಾಗಿದೆ.

Tags: actress ranya raoactress ranya rao arrest in gold smugglingactress ranya rao arresteddri team arrest ranya raogold smugglinggold smuggling casekannada actress ranya rao arrestedranya raoranya rao accused of gold smugglingranya rao arrestranya rao arrestedranya rao arrested in gold smuggling caseranya rao goldranya rao gold smugglingranya rao gold smuggling caseranya rao gold smuglingranya rao smuggling gold
Previous Post

ಗೋಲ್ಡ್​​ ಸ್ಮಗ್ಲಿಂಗ್​ ಹಿಂದೆ ಇರುವ ಮಿನಿಸ್ಟರ್​ ಯಾರು..? ಜಯಚಂದ್ರ ಬಿಚ್ಚಿಟ್ಟ ಕಹಾನಿ..

Next Post

ಬಿಸ್ಕೆಟ್‌ ಬ್ಯೂಟಿ ನಟಿ ರನ್ಯಾಗೆ, ಮಾರ್ಚ್‌ 24ರವರೆಗೆ ನ್ಯಾಯಾಂಗ ಬಂಧನ..!

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
Next Post
ಬಿಸ್ಕೆಟ್‌ ಬ್ಯೂಟಿ ನಟಿ ರನ್ಯಾಗೆ, ಮಾರ್ಚ್‌ 24ರವರೆಗೆ ನ್ಯಾಯಾಂಗ ಬಂಧನ..!

ಬಿಸ್ಕೆಟ್‌ ಬ್ಯೂಟಿ ನಟಿ ರನ್ಯಾಗೆ, ಮಾರ್ಚ್‌ 24ರವರೆಗೆ ನ್ಯಾಯಾಂಗ ಬಂಧನ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada