ಭಾರತ-ನ್ಯೂಜಿಲ್ಯಾಂಡ್ ನಡುವಿನ ಅಂತಿಮ ಏಕದಿನ ಪಂದ್ಯವು ಮಳೆಯಿಂದಾಗಿ ರದ್ದುಗೊಂಡಿದ್ದು ಈ ಮೂಲಕ ಕಿವೀಸ್ ಮೂರು ಪಂದ್ಯಗಳ ಏಕದಿನ ಸರಣಿಯನ್ನು 1-0 ಅಂತರದಲ್ಲಿ ವಶಪಡಿಸಿಕೊಂಡಿತ್ತು.
ಕ್ರೈಸ್ಟ್‌ಚರ್ಚ್‌ನ ಹ್ಯಾಗಲೇ ಓವಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ವಾಷಿಂಗ್ಟನ್ ಸುಂದರ್ (51 ರನ್, 34 ಎಸೆತ, 5 ಬೌಂಡರಿ, 1 ಸಿಕ್ಸರ್), ಶ್ರೇಯಸ್ ಅಯ್ಯರ್ (49 ರನ್, 59 ಎಸೆತ, 8 ಬೌಂಡರಿ) ಅರ್ಧಶತಕಗಳ ಫಲವಾಗಿ 47.3 ಓವರ್‌ಗಳಲ್ಲಿ 219 ರನ್‌ಗಳಿಗೆ ಸರ್ವಪತನವಾಯಿತು.
ಗುಡಿ ಬೆನ್ನತ್ತಿದ ನ್ಯೂಜಿಲ್ಯಾಂಡ್ ತಂಡವು 18 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 104 ರನ್ ಗಳಿಸಿ ಸುಳಬವಾಗಿ ಜಯ ಗಳಿಸುವ ನಿರೀಕ್ಷೆಯಲ್ಲಿತ್ತು. ಈ ವೇಳೆ ಮಳೆಯ ಅಡಚಣೆಯಿಂದಾಗಿ ಪ<ದ್ಯವು ರದ್ದುಗೊಂಡಿತು ಮತ್ತು ಸರಣಿಯನ್ನು ವಶಪಡಿಸಿಕೊಂಡಿತ್ತು.






