• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪತ್ರಿಕಾ ವಿತರಕರು-ಏಜೆಂಟರು ಪತ್ರಿಕೋದ್ಯಮದ ಬೆನ್ನುಮೂಳೆ: ಕೆ.ವಿ.ಪ್ರಭಾಕರ್

ಪ್ರತಿಧ್ವನಿ by ಪ್ರತಿಧ್ವನಿ
August 28, 2025
in Top Story, ಕರ್ನಾಟಕ, ರಾಜಕೀಯ
0
ಪತ್ರಿಕಾ ವಿತರಕರು-ಏಜೆಂಟರು ಪತ್ರಿಕೋದ್ಯಮದ ಬೆನ್ನುಮೂಳೆ: ಕೆ.ವಿ.ಪ್ರಭಾಕರ್
Share on WhatsAppShare on FacebookShare on Telegram

ಕೊಳೆಗೇರಿಗಳಿಂದ ವಿಧಾನಸೌಧದವರೆಗೂ ವ್ಯಾಪಿಸಿರುವ ನರಮಂಡಲ: ಕೆ.ವಿ.ಪಿ

ADVERTISEMENT

ಏಕ ಕಾಲಕ್ಕೆ ಸಂಸ್ಥೆಯ ಮತ್ತು ರಾಜ್ಯದ ಆರ್ಥಿಕತೆಗೆ ಕೊಡುಗೆ ನೀಡುತ್ತಾರೆ: ಕೆ.ವಿ.ಪ್ರಭಾಕರ್ ವಿಶ್ಲೇಷಣೆ

ಮೈಸೂರು ಆ 28: ಪತ್ರಿಕಾ ವಿತರಕರು ಪತ್ರಿಕೆಗಳನ್ನು ವಿತರಿಸುವ ಜೊತೆಗೆ ಚಂದಾ ಹಣ ಸಂಗ್ರಹಿಸುವ ಕೆಲಸವನ್ನೂ ಮಾಡುತ್ತಾ ತಮ್ಮ ಆದಾಯದ ಜೊತೆಗೆ‌ ಸಂಸ್ಥೆಗೂ ಆದಾಯ ತಂದುಕೊಡುವ ಮೂಲಕ ರಾಜ್ಯದ ಆರ್ಥಿಕತೆಯಲ್ಲೂ ತೊಡಗಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಪ್ರಾಯಪಟ್ಟರು.

ವಿಶ್ವ ಪತ್ರಿಕಾ ವಿತರಕರ ದಿನದ ಅಂಗವಾಗಿ ಏರ್ಪಡಿಸಿದ್ದ ಪತ್ರಿಕಾ ವಿತರಕರ ಸಮ್ಮೇಳನ‌ ಉದ್ಘಾಟಿಸಿ ಮಾತನಾಡಿದರು.

Nikhil Kumaraswamy: ಡಿಕೆಶಿ ಹೇಳಿಕೆಗೆ ನಿಖಿಲ್‌ ಕುಮಾರಸ್ವಾಮಿ ಸಖತ್‌ ಟಾಂಗ್‌..! #dkshivakumar #jds

ಕೊಳಚೆ ಪ್ರದೇಶಗಳಿಂದ ವಿಧಾನಸೌಧದವರೆಗೂ ವ್ಯಾಪಿಸಿರುವ ಪತ್ರಿಕಾ ವಿತರಕರು ಮುದ್ರಣ ಮಾಧ್ಯಮದ ಬೆನ್ನುಮೂಳೆ ಮತ್ತು ಪತ್ರಿಕಾ ಸಂಸ್ಥೆಗಳ ನರಮಂಡಲ ಆಗಿ ಕಲಸ ಮಾಡುತ್ತಾರೆ. ಪತ್ರಿಕೆಯ ಚಂದಾ ಹಣ ಸಂಗ್ರಹಿಸುವ ಜೊತೆಗೆ ಸಣ್ಣ ಜಾಹಿರಾತುದಾರರನ್ನೂ ಸಂಸ್ಥೆಯ ಜೊತೆ ಬೆಸೆಯುತ್ತಾರೆ. (ಪತ್ರಿಕೆಗಳ ಒಳಗೆ ಜಾಹಿರಾತು ಕರಪತ್ರ ಹಾಕುವ insertion) ಎಂದರು.

ಸುದ್ದಿಗಳು, ಪತ್ರಿಕೆಗಳು ಹಳತಾಗುವ ಮೊದಲು, ಓದುಗರ ಕೈಗೆ ಕಾಫಿ ಲೋಟ ಬರುವ ಮೊದಲು ಪತ್ರಿಕಾ ವಿತರಕರು ಓದುಗರ ಮನೆ ಬಾಗಿಲಿಗೆ ತಲುಪುತ್ತಾರೆ. ಇದಕ್ಕಾಗಿ ಕೋಳಿ ಕೂಗುವ ಮೊದಲೇ ಮನೆಯಿಂದ ಎದ್ದು ಹೊರಡುತ್ತಾರೆ. ನಾವು ಪತ್ರಕರ್ತರು ಬೆಚ್ಚಗೆ ಮಲಗಿರುವಾಗ ಮಳೆ, ಚಳಿ ಮತ್ತು ಪ್ರತೀಕೂಲ ವಾತಾವರಣ ಲೆಕ್ಕಿಸದೆ ಸೈಕಲ್ ತುಳಿಯಬೇಕಿದೆ ಎಂದರು

.

ಒಬ್ಬ ಪತ್ರಿಕಾ ವಿತರಕನಿಗೆ ತಿಂಗಳಿಗೆ ಸಿಗುವುದು ಕೆಲವೇ ಸಾವಿರ ರೂಪಾಯಿ ಇರಬಹುದು. ಆದರೆ, ಸಾವಿರಾರು ಪತ್ರಿಕಾ ವಿತರಕರು ಸಂಗ್ರಹಿಸುವ ಚಂದಾ ಹಣ ಮತ್ತು ಸಣ್ಣ ಪ್ರಮಾಣದ ಜಾಹಿರಾತು ಹಣ ಎಲ್ಲಾ ಒಟ್ಟು ಲೆಕ್ಕ ಹಾಕಿದರೆ ಹತ್ತಾರು ಕೋಟಿ‌ ಆಗುತ್ತದೆ. ಹೀಗಾಗಿ ಪತ್ರಿಕೋದ್ಯಮದ ಮತ್ತು ರಾಜ್ಯದ ಆರ್ಥಿಕ ಚಟುವಟಿಕೆಯಲ್ಲೂ ತೊಡಗಿಸಿಕೊಂಡಿರುವ ಸಮುದಾಯವಾಗಿದೆ ಎನ್ನುವುದನ್ನು ನಾವು ಮರೆಯಬಾರದು ಎಂದರು.

ಅಸಂಘಟಿತವಾಗಿಯೇ ಉಳಿದಿದ್ದ ವಿತರಕ‌ ಸಮುದಾಯ ಒಟ್ಟಿಗೇ ಸಂಘಟಿತರಾಗುವ ಅನಿವಾರ್ಯತೆ ಸೃಷ್ಟಿಯಾಗಿದ್ದು ಕೋವಿಡ್ ಸಮಯದಲ್ಲಿ.

ಸದಾ ಪತ್ರಿಕಾ ಸಂಸ್ಥೆಗಳ ಪಾಲಿಗೆ ಅನಾಥ ರಕ್ಷಕರಾಗುವ ವಿತರಕರು, ಕೋವಿಡ್ ಸಂದರ್ಭದಲ್ಲಿ ತಾವೇ ಸ್ವತಃ ಅನಾಥರಾದರು. ಈ ಹೊತ್ತಲ್ಲಿ ಶಂಬುಲಿಂಗ ಅವರು ವಿತರಕರ ಸಂಘ ಮತ್ತು ಸಂಘಟನೆಗೆ ಜೀವ ತುಂಬಿದರು ಎಂದು ಮೆಚ್ಚುಗೆ ಸೂಚಿಸಿದರು.

ಸಂಘಟನೆ ಮೊದಲ ಹೆಜ್ಜೆ. ಸಂಘಟನೆ ಬೆನ್ನ ಹಿಂದೆಯೇ ನಿಮ್ಮ ಹಕ್ಕುಗಳಿಗೂ ಜೀವ ಬರುತ್ತದೆ. ಬಳಿಕ ಸರ್ಕಾರದ ಸವಲತ್ತುಗಳು ನಿಮ್ಮ ಹಕ್ಕು ಆಗಿ ಒಂದೊಂದಾಗಿ ಜಾರಿ ಆಗುತ್ತವೆ. ಜೊತೆಗೆ ಕೆಲಸದ ಅಭದ್ರತೆಯೂ ಕಡಿಮೆ ಆಗುತ್ತದೆ ಎಂದರು.

ವಿತರಕ ಸಮುದಾಯದ ಪರವಾಗಿ ಈ ಸಮ್ಮೇಳನದಲ್ಲಿ ಕೆಲವೊಂದು ಬೇಡಿಕೆಗಳನ್ನು ಇಡಲಾಗಿದೆ. ಅವೆಲ್ಲವನ್ನೂ ಪರಿಶೀಲಿಸಿ, ಹಂತ ಹಂತವಾಗಿ ಕ್ರಮ ಕೈಗೊಳ್ಳುವ ಸಾಧ್ಯತೆಗಳ ಬಗ್ಗೆ ಚರ್ಚಿಸುತ್ತೇನೆ.

ಪತ್ರಿಕಾ ವಿತರಕರಿಗೆ ಸರ್ಕಾರದ ಸವಲತ್ತುಗಳು ಸಿಗಬೇಕು ಎನ್ನುವುದು ಒಂದು‌ ಕಡೆ ಇರಲಿ. ಜೊತೆಗೆ ಪತ್ರಿಕಾ ಸಂಸ್ಥೆಗಳೂ, ಇನ್ನಿತರೆ ಉದ್ಯಮಿಗಳ ಮೂಲಕ CSR ನಿಧಿಯಿಂದ ಈ ಸಮುದಾಯಕ್ಕೆ ಅನುಕೂಲ ಕಲ್ಪಿಸುವ ಅವಕಾಶಗಳೂ ಇವೆ. ಈ ದಿಕ್ಕಿನಲ್ಲೂ‌ ಗಮನ ಹರಿಸುವ ಅಗತ್ಯವಿದೆ ಎಂದರು.‌

ಸುತ್ತೂರು ಶ್ರೀ ಮಠದ ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ KUWJ ಅಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಪತ್ರಿಕಾ ವಿತರಕರ ಮಹಾ ಸಂಘದ ಅಧ್ಯಕ್ಷರಾದ ಶಂಬುಲಿಂಗ ಅವರು ಸೇರಿ ಹಲವು ಮಹನೀಯರು ಉಪಸ್ಥಿತರಿದ್ದರು.

Tags: cm ಮಾಧ್ಯಮ ಸಲಹೆಗಾರ kv prabhakard r prabhakar raojayamala prabhakark e prabhakark e prabhakar in ycpk e prabhakar joins ycpke prabhakarkv prabhakar​​​KV Prabhakarkv prabhakar bytekv prabhakar media advisor contact numberkv prabhakar newskv prabhakar on journalistkv prabhakar presskv prabhakar specchmedia advisor kv prabhakarmlc prabhakarParakala PrabhakarPrabhakarsenior journalist kv prabhakartiger prabhakartiger prabhakar lifetiger prabhakar wife
Previous Post

ಪ್ರಜ್ಞೆ ಸತ್ತ ಸಮಾಜದಲ್ಲಿ ದೌರ್ಜನ್ಯ ಅಪರಾಧ ಧರ್ಮ

Next Post

ಡಿ.ಕೆ. ಶಿವಕುಮಾರ್ ತಮ್ಮ ಹೇಳಿಕೆಯನ್ನು ತಕ್ಷಣ ಹಿಂಪಡೆಯಲಿ- ವಿಜಯೇಂದ್ರ ಆಗ್ರಹ

Related Posts

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿನೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..
Top Story

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿನೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

by ಪ್ರತಿಧ್ವನಿ
April 16, 2026
0

ಬೆಂಗಳೂರು :  ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ  ಮುಖ್ಯಮಂತ್ರಿ...

Read moreDetails
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

April 16, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

April 16, 2026
Next Post
ಡಿ.ಕೆ. ಶಿವಕುಮಾರ್ ತಮ್ಮ ಹೇಳಿಕೆಯನ್ನು ತಕ್ಷಣ ಹಿಂಪಡೆಯಲಿ- ವಿಜಯೇಂದ್ರ ಆಗ್ರಹ

ಡಿ.ಕೆ. ಶಿವಕುಮಾರ್ ತಮ್ಮ ಹೇಳಿಕೆಯನ್ನು ತಕ್ಷಣ ಹಿಂಪಡೆಯಲಿ- ವಿಜಯೇಂದ್ರ ಆಗ್ರಹ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada