ರಾಜ್ಯದ ಹಲವೆಡೆ ಮಳೆ ಆರ್ಭಟ ಮುಂದುವರಿದಿದೆ. ಮುಂದಿನ ಐದು ದಿನಗಳ ಕಾಲ ಮಳೆ ಅಬ್ಬರ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿ ಕರ್ನಾಟಕದ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇಂದಿನಿಂದ ಆಗಸ್ಟ್ 26ರ ವರೆಗೆ ಕರಾವಳಿ ಕರ್ನಾಟಕಕ್ಕೆ ಭಾರೀ ಮಳೆ ಆಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ಉಳಿದಂತೆ ಬಹುತೇಕ ಕಡೆಗಳಲ್ಲಿ ಯಾವುದೇ ರೀತಿಯ ಅಲರ್ಟ್ ಇಲ್ಲ. ಆದರೂ ಮಳೆ ಮುಂದುವರಿಯುವ ಸಾಧ್ಯತೆ ಎಂದಿದೆ ಹವಾಮಾನ ಇಲಾಖೆ.
ಬೆಂಗಳೂರಿನಲ್ಲೂ ಮಧ್ಯಾಹ್ನದ ಬಳಿಕ ಮಳೆಯಾಗುವ ಸಂಭವ ಇದೆ. ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ಮಳೆಯಾಗುತ್ತಿದ್ದು, ಜೋರು ಮಳೆಯಾಗುವ ವಾತಾವರಣ ಇದೆ ಎಂದಿದೆ ಹವಾಮಾನ ಇಲಾಖೆ.