ಪಾಪ್ಯೂಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯ ಕಚೇರಿ ಹಾಗೂ ಮುಖಂಡರ ಮನೆ ಮೇಲೆ ದಾಳಿ ಮುಂದುವರೆಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಮಂಗಳವಾರ ದೇಶಾದ್ಯಂತ ದಾಳಿ ನಡೆಸಿದ್ದು ನೂರಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದಿದೆ.
ದೇಶದ ಒಟ್ಟು 8 ರಾಜ್ಯಗಳಲ್ಲಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ಮಾಡಿದ್ದು ದೆಹಲಿಯಲ್ಲಿ 30 ಮಂದಿ, ಅಸ್ಸಾಂನಲ್ಲಿ 25ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದಿದೆ. ಕರ್ನಾಟಕದ ಬೆಳಗಾವಿಯಲ್ಲಿ 7ಕ್ಕೂ ಹೆಚ್ಚು ಮುಖಂಡರನ್ನು NIA ವಶಕ್ಕೆ ಪಡೆದಿದೆ.
ಇನ್ನುಳಿದಂತೆ ಗುಜರಾತ್ ಸೇರಿದಂತೆ ಅನೇಕ ಕಡೆ ದಾಳಿ ನಡೆಸಿದೆ. ಕರ್ನಾಟಕದ ಬೆಳಗಾವಿ, ಉಡುಪಿ, ಶಿವಮೊಗ್ಗ, ಕೋಲಾರ, ಚಿತ್ರದುರ್ಗ, ಚಾಮರಾಜನಗರ, ರಾಯಚೂರು, ಬೀದರ್ ಜಿಲ್ಲೆಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬಾಗಲಕೋಟೆಯಲ್ಲಿ 7 ಮಂದಿ, ವಿಜಯಪುರ ಹಾಗೂ ಚಿತ್ರದುರ್ಗದಲ್ಲಿ ತಲಾ ಒಬ್ಬರನ್ನು ಬಂಧಿಸಲಾಗಿದೆ.