ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಕುರಿತಂತೆ ಇಂದು NIA ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಬೆಳ್ಳಾರೆ ಗ್ರಾಮಕ್ಕೆ `NIA’ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಇಂದು NIA ಅಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಗ್ರಾಮಕ್ಕೆ ಭೇಟಿ ನೀಡಿದ್ದು, ಪ್ರವೀಣ್ ನೆಟ್ಟಾರು ಕೊಲೆಯಾದ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಬಳಿಕ ಪ್ರವೀಣ್ ನೆಟ್ಟಾರು ಕೊಲೆಗೆ ಸಂಬಂಧಿಸಿದಂತೆ ಅನೇಕ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದಕ್ಷಿಣ ಕನ್ನಡ ನಡೆದ ಬಿಜೆಪಿ ಯುವ ಮೊರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ತನಿಖೆಯನ್ನು ಎನ್ಐಎಗೆ ವಹಿಸಿತ್ತು.