ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಎನ್ ಐಎ ಅಧಿಕಾರಿಗಳು ಶಂಕಿತ ಉಗ್ರ ಅಜೀಜ್ ಅಹ್ಮದ್ ನನ್ನು ಬಂಧಿಸಿದ್ದಾರೆ.
ಇಮಿಗ್ರೇಷನ್ ಅಧಿಕಾರಿಗಳು ನೀಡಿದ ಮಾಹಿತಿ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶಂಕಿತ ಉಗ್ರ ಅಜೀಜ್ ಅಹ್ಮದ್ ನನ್ನು ಎನ್ ಐಎ ಅಧಿಕಾರಿಗಳು ಬಂಧಿಸಿದ್ದಾರೆ.
ಏರ್ ಪೋರ್ಟ್ ನಿಂದ ಸೌದಿಯಾ ಜಿದ್ದಾಗೆ ಪರಾರಿಯಾಗುವಾಗ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಎನ್ ಐ ಎ ಅಧಿಕಾರಿಗಳು ಅಜೀಜ್ ಅಹ್ಮದ್ ನನ್ನು ಬಂಧಿಸಿದ್ದಾರೆ.ತಮಿಳುನಾಡಿನ ಹಿಜ್ಬುತ್ ಥರೀರ್ ಪ್ರಕರಣದ ಆರೋಪಿ, ಶಂಕಿತ ಉಗ್ರ ಅಜೀಜ್ ಅಹ್ಮದ್ ಸೌ ಬಗ್ಗೆ ನಿನ್ನೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಬಂಧಿಸಿದ್ದಾರೆ.