ನವದೆಹಲಿ: ದರೋಡೆಕೋರರ ಪ್ರಕರಣಗಳಿಗೆ ಸಂಬಂಧಿಸಿದಂತೆ ಉತ್ತರ ಭಾರತದ 8 ರಾಜ್ಯಗಳ 70ಕ್ಕೂ ಹೆಚ್ಚು ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್’ಐಎ) ಶೋಧ ನಡೆಸುತ್ತಿದೆ.
ದೆಹಲಿಯ ಎನ್’ಸಿಆರ್ (ರಾಷ್ಟ್ರ ರಾಜಧಾನಿ ಪ್ರದೇಶ), ಪಂಜಾಬ್, ರಾಜಸ್ಥಾನ, ಹರಿಯಾಣ, ಮಧ್ಯಪ್ರದೇಶ, ಗುಜರಾತ್, ಚಂಡೀಗಢ ಮತ್ತು ಉತ್ತರ ಪ್ರದೇಶದಲ್ಲಿ ಇಂದು (ಮಂಗಳವಾರ ಫೆ.21) ಮುಂಜಾನೆಯೇ ಶೋಧ ಕಾರ್ಯಾಚರಣೆ ಆರಂಭವಾಗಿದೆ.
ಉತ್ತರ ಪ್ರದೇಶದ ಪಿಲಿಭಿತ್’ನಲ್ಲಿ ಶಸ್ತ್ರಾಸ್ತ್ರ ಪೂರೈಕೆದಾರರೊಬ್ಬರ ಮನೆ ಮೇಲೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸುತ್ತಿದ್ದಾರೆ. ದಾಳಿಯ ವೇಳೆ ಪಾಕಿಸ್ತಾನದಿಂದ ಸರಬರಾಜು ಮಾಡಲಾದ ಈ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ ಎಂದು ಎನ್ ಐಎ ಮೂಲಗಳು ತಿಳಿಸಿವೆ.
ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಪ್ರಮುಖ ಸಂಚುಕೋರ ಲಾರೆನ್ಸ್ ಬಿಷ್ಣೋಯಿ, ನೀರಜ್ ಬವಾನ ಹಾಗೂ ಅವರ ಸಹಚರರನ್ನು ಎನ್ಐಎ ವಿಚಾರಣೆ ನಡೆಸಿದೆ. ವಿಚಾರಣೆಯ ಸಮಯದಲ್ಲಿ ಸಂಗ್ರಹಿಸಿದ ಮಾಹಿತಿಯ ಆಧಾರದ ಮೇಲೆ ದಾಳಿಗಳನ್ನು ಪ್ರಾರಂಭಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.