ರಾಜಸ್ಥಾನದ ಉದಯ್ಪುರದಲ್ಲಿ ಟೈಲರ್ ಕನ್ಹಯ್ಯಾ ಲಾಲ್ ಹತ್ಯೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯವು ರಾಷ್ಟ್ರೀಯ ತನಿಖಾ ದಳ (NIA)ಗೆ ತನಿಖೆ ನಡೆಸುವಂತೆ ಆದೇಶಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಗೃಹ ಸಚಿವಾಲಯದ ವಕ್ತಾರರು ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯಾ ಲಾಲ್ ತೇಲಿ ಹತ್ಯೆ ಪ್ರಕರಣವನ್ನ ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸುಕೊಳ್ಳುವಂತೆ ಸೂಚಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
ಘಟನೆಯಲ್ಲಿ ಯಾವುದಾದರು ನಿಷೇಧಿತ ಸಂಘಟನೆ ಹಾಗು ಅಂತರಾಷ್ಟ್ರೀಯ ಸಂಪರ್ಕವಿರುವ ಬಗ್ಗೆ ತಿಳಿಯಲು ಕೂಲಂಕುಷವಾಗಿ ತನಿಖೆ ನಡೆಸಲಾಗುವುದು ಎಂದು ಹೇಳಿದೆ.