ಸಿಎಂ ಸಿದ್ದರಾಮಯ್ಯ ತಮ್ಮ ಸಿಎಂ ಕುರ್ಚಿಯನ್ನು ಬಲಪಡಿಸಿಕೊಳ್ಳಲು, ಭದ್ರ ಪಡಿಸಿಕೊಳ್ಳಲು ಸಮಾವೇಶ ಆಯೋಜನೆ ಮಾಡ್ತಿದ್ದಾರೆ ಎಂದು ಜೆಡಿಎಸ್ ಯುವ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ .
ಡಿಸೆಂಬರ್ 5ರಂದು ಹಾಸನದಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಕಾಂಗ್ರೆಸ್ ಸಮಾವೇಶದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ,ಸಿದ್ದರಾಮಯ್ಯ ಶಕ್ತಿ ಪ್ರದರ್ಶನ ಮಾಡಿ ಹೈಕಮಾಂಡ್ ಗೆ ಸಂದೇಶ ರವಾನೆ ಮಾಡಲು ಮುಂದಾಗಿದ್ದಾರೆ ಎಂದು ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಹಾಸನದಲ್ಲಿ ಯಾವ ಪುರುಷಾರ್ಥಕ್ಕೆ ಸಮಾವೇಶ ಮಾಡ್ತಿದ್ದಾರೆ. ಸರ್ಕಾರದ ವೈಫಲ್ಯ ಮುಂದೆ ಇಟ್ಟುಕೊಂಡು ಸಮಾವೇಶ ಮಾಡ್ತಿದ್ದಾರಾ ಎಂದು ಕಿಡಿಕಾರಿದ್ರು.