• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಯುಪಿ ಮಾಜಿ ಸಿಎಂ ಅಖಿಲೇಶ್ ಯಾದವ್​ ಜೊತೆ ನಿಖಿಲ್​ ಕುಮಾರಸ್ವಾಮಿ ಭೇಟಿ

ಪ್ರತಿಧ್ವನಿ by ಪ್ರತಿಧ್ವನಿ
June 15, 2023
in ದೇಶ
0
ಯುಪಿ ಮಾಜಿ ಸಿಎಂ ಅಖಿಲೇಶ್ ಯಾದವ್​ ಜೊತೆ ನಿಖಿಲ್​ ಕುಮಾರಸ್ವಾಮಿ ಭೇಟಿ
Share on WhatsAppShare on FacebookShare on Telegram

ಲಖನೌ : ಉತ್ತರ ಪ್ರದೇಶದ ಮಾಜಿ ಸಿಎಂ ಹಾಗೂ ಸಮಾಜವಾದಿ ಪಕ್ಷದ ವರಿಷ್ಠ ಅಖಿಲೇಶ್​ ಯಾದವ್​ರನ್ನು ಲಖನೌನ ಅವರ ನಿವಾಸಲ್ಲಿ ಜೆಡಿಎಸ್ ನಾಯಕ ನಿಖಿಲ್​ ಕುಮಾರಸ್ವಾಮಿ ಭೇಟಿ ಮಾಡಿದ್ದಾರೆ . ತಮ್ಮ ನಿವಾಸಕ್ಕೆ ಆಗಮಿಸಿದ ನಿಖಿಲ್​ ಕುಮಾರಸ್ವಾಮಿಯನ್ನು ಅಖಿಲೇಶ್​ ಯಾದವ್​ ಅತ್ಯಂತ ಪ್ರೀತಿಯಿಂದ ಬರಮಾಡಿಕೊಂಡಿದ್ದು ಇಬ್ಬರು ದೀರ್ಘಕಾಲ ಮಾತುಕತೆ ನಡೆಸಿದ್ದಾರೆ.

ADVERTISEMENT

ಈ ಬಗ್ಗೆ ಮಾಹಿತಿ ನೀಡಿದ ನಿಖಿಲ್ ಕುಮಾರಸ್ವಾಮಿ ಅವರು; ಅತ್ಯಂತ ವಿಶ್ವಾಸಪೂರ್ವಕ ಹಾಗೂ ಸಹೋದರ ವಾತ್ಸಲ್ಯದೊಂದಿಗೆ ನಡೆದ ಈ ಭೇಟಿಯ ಸಂದರ್ಭದಲ್ಲಿ ಲೋಕಸಭೆ ಚುನಾವಣೆಯೂ ಸೇರಿದಂತೆ ಭವಿಷ್ಯದ ರಾಜಕೀಯ ಬೆಳವಣಿಗೆಗಳ ಕುರಿತಂತೆ ಮಹತ್ವದ ಸಮಾಲೋಚನೆ ನಡೆಸಲಾಯಿತು ಎಂದಿದ್ದಾರೆ.

ಸಮಾಜವಾದಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಹಾಗೂ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡ ಅವರ ಕುಟುಂಬಗಳ ನಡುವಿನ ಬಾಂಧವ್ಯದ ಬಗ್ಗೆ ವಿಶೇಷವಾಗಿ ತಮ್ಮ ನೆನಪುಗಳನ್ನು ಮೆಲುಕು ಹಾಕಿದ ಅಖಿಲೇಶ್ ಯಾದವ್ ಅವರು, ಬಹುಮುಖ್ಯವಾಗಿ ಹೆಚ್.ಡಿ.ದೇವೇಗೌಡರು ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಕ್ಷೇಮವನ್ನು ವಿಚಾರಿಸಿದರು ಎಂದು ನಿಖಿಲ್ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ಹಾಗೂ ರಾಷ್ಟ್ರ ಮಟ್ಟದ ರಾಜಕೀಯ ಬೆಳವಣಿಗೆಗಳ ಬಗ್ಗೆ ಸಾಕಷ್ಟು ವಿಷಯಗಳನ್ನು ಅಖಿಲೇಶ್ ಅವರು ಚರ್ಚೆ ನಡೆಸಿದರು. ಉತ್ತರ ಪ್ರದೇಶ ರಾಜಕಾರಣದ ಹಲವಾರು ಬೆಳವಣಿಗೆಗಳನ್ನು ಅವರು ಹಂಚಿಕೊಂಡರು ಎಂದು ಅವರು ಹೇಳಿದ್ದಾರೆ.

ಲೋಕಸಭೆ ಚುನಾವಣೆ ಬಗ್ಗೆ ಚರ್ಚೆ:

ಅಲ್ಲದೆ, ಮುಂದಿನ ಲೋಕಸಭೆ ಚುನಾವಣೆಯನ್ನು ಎದುರಿಸುವ ಬಗ್ಗೆ ಅಖಿಲೇಶ್ ಅವರು ತಮ್ಮದೇ ಆದ ವಿಶೇಷ ಕಾರ್ಯಸೂಚಿ ರೂಪಿಸಿಕೊಂಡಿದ್ದಾರೆ ಹಾಗೂ ಈಗಿನಿಂದಲೇ ಚುನಾವಣೆಯ ಸಿದ್ಧತೆಗಳನ್ನು ಭರದಿಂದ ನಡೆಸಿದ್ದಾರೆ. ಜತೆಗೆ, ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಸಮೀಕರಣಗಳ ಬಗ್ಗೆ ನನ್ನ ಬಳಿ ಕೂಲಂಕಷವಾಗಿ ಚರ್ಚಿಸಿದರು ಎಂದು ನಿಖಿಲ್ ಅವರು ವಿವರಿಸಿದ್ದಾರೆ.

ಮೂಲತಃ ಮೈಸೂರು ನಗರದಲ್ಲಿ ವಿದ್ಯಾಭ್ಯಾಸ ಮಾಡಿದ್ದ ಅಖಿಲೇಶ್ ಅವರು; ಅಂದಿನ ದಿನಗಳನ್ನು ಸ್ಮರಿಸಿಕೊಂಡರು. ಕರ್ನಾಟಕ, ಕನ್ನಡಿಗರ ಬಗ್ಗೆ ತಮಗಿರುವ ಅಪಾರ ಗೌರವ, ಆದರಾಭಿಮಾನವನ್ನು ಹೃದಯಪೂರ್ವಕವಾಗಿ ವ್ಯಕ್ತಪಡಿಸಿದರು. ಅವರ ವಿಶ್ವಾಸ, ಪ್ರೀತಿಗೆ ನಾನು ಅಭಿನಂದನೆಗಳನ್ನು ಸಲ್ಲಿಸಿದ್ದೇನೆ ಎಂದು ನಿಖಿಲ್ ಅವರು ತಿಳಿಸಿದ್ದಾರೆ.

Tags: JDSNikhil KumaraswamyUP Former CM Akhilesh YadavUttar Pradeshಉತ್ತರ ಪ್ರದೇಶಜೆಡಿಎಸ್​ನಿಖಿಲ್​ ಕುಮಾರಸ್ವಾಮಿಯುಪಿ ಮಾಜಿ ಸಿಎಂ ಅಖಿಲೇಶ್​ ಯಾದವ್​
Previous Post

ಡಿಸಿಎಂ ಆದ ಬಳಿಕ ಮೈಸೂರಿಗೆ ಡಿಕೆಶಿ ಮೊದಲ ವಿಸಿಟ್​ : ಬಿಜೆಪಿ ವಿರುದ್ಧ ರೋಷಾವೇಶ

Next Post

80 ವಂದೇಭಾರತ್​ ರೈಲುಗಳ ಪೂರೈಕೆಗೆ 24 ಸಾವಿರ ಕೋಟಿ ರೂ. ಮೌಲ್ಯದ ಒಡಂಬಡಿಕೆಗೆ ಸಹಿ ಹಾಕಿದ ಟಿಟಾಗಢ್ ವ್ಯಾಗನ್ + BHEL

Related Posts

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..
Top Story

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಸುಸ್ಥಿರ ಅಭಿವೃದ್ಧಿ ಗುರಿಗಳು (SDGs) ರಾಷ್ಟ್ರಗಳಿಗೆ ಬೆಳವಣಿಗೆ ಮತ್ತು ಸಸ್ಥಿರತೆಯನ್ನು ಸಮನ್ವಯಗೊಳಿಸುವ ಜಾಗತಿಕ ಚೌಕಟ್ಟನ್ನು ಒದಗಿಸುತ್ತವೆ. ಆದ್ದರಿಂದ ಅಭಿವೃದ್ಧಿ ಮತ್ತು ಸುಸ್ಥಿರತೆ ಹಾಗೂ ಒಳಗೊಳ್ಳುವಿಕೆಯ ಗುರಿಯ...

Read moreDetails
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

April 18, 2026
Next Post
80 ವಂದೇಭಾರತ್​ ರೈಲುಗಳ ಪೂರೈಕೆಗೆ 24 ಸಾವಿರ ಕೋಟಿ ರೂ. ಮೌಲ್ಯದ ಒಡಂಬಡಿಕೆಗೆ ಸಹಿ ಹಾಕಿದ ಟಿಟಾಗಢ್ ವ್ಯಾಗನ್ + BHEL

80 ವಂದೇಭಾರತ್​ ರೈಲುಗಳ ಪೂರೈಕೆಗೆ 24 ಸಾವಿರ ಕೋಟಿ ರೂ. ಮೌಲ್ಯದ ಒಡಂಬಡಿಕೆಗೆ ಸಹಿ ಹಾಕಿದ ಟಿಟಾಗಢ್ ವ್ಯಾಗನ್ + BHEL

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!