ಬೆಂಗಳೂರು : ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದ ನಿಖಿಲ್ ಕುಮಾರಸ್ವಾಮಿ ಈ ಬಾರಿ ರಾಮನಗರ ಕ್ಷೇತ್ರದ ಮೂಲಕ ವಿಧಾನಸಭಾ ಮೆಟ್ಟಿಲೇರುವ ಕನಸು ಕಾಣ್ತಿದ್ದಾರೆ. ಇಂದು ರಾಮನಗರ ಕ್ಷೇತ್ರಕ್ಕೆ ನಿಖಿಲ್ ಕುಮಾರಸ್ವಾಮಿ ಹಾಗೂ ಚನ್ನಪಟ್ಟಣ ಕ್ಷೇತ್ರಕ್ಕೆ ಹೆಚ್.ಡಿ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಲು ದೇವೇಗೌಡರಿಂದ ಬಿ ಫಾರಂ ಪಡೆದುಕೊಂಡಿದ್ದಾರೆ.
ರಾಮನಗರ ಕ್ಷೇತ್ರದ ಅಭ್ಯರ್ಥಿಯಾಗಿರುವ ನಿಖಿಲ್ ಕುಮಾರಸ್ವಾಮಿ ತಾತನಿಂದ ಬಿ ಫಾರಂ ಸ್ವೀಕರಿಸುವ ಸಂದರ್ಭದಲ್ಲಿ ಕಣ್ಣೀರು ಹಾಕಿದ್ದಾರೆ.
ಪತ್ನಿ ರೇವತಿ, ತಾಯಿ ಅನಿತಾ ಕುಮಾರಸ್ವಾಮಿ ಹಾಗೂ ತಂದೆ ಹೆಚ್ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಬಿ ಫಾರಂ ಪಡೆದ ನಿಖಿಲ್ ಕುಮಾರಸ್ವಾಮಿ ಬಳಿಕ ಅಜ್ಜಿ ಚೆನ್ನಮ್ಮ ಕಾಲಿಗೆರಗಿ ಆಶೀರ್ವಾದ ಪಡೆದರು.