ರಾಮನಗರ : ಲೋಕಸಭಾ ಚುನಾವಣೆ ಬಳಿಕ ವಿಧಾನಸಭಾ ಚುನಾವಣೆಯಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಈ ಬಾರಿಯೂ ಸೋಲನ್ನು ಕಂಡಿದ್ದಾರೆ. ಪುತ್ರನಿಗಾಗಿ ಹಾಲಿ ಶಾಸಕಿ ಅನಿತಾ ಕುಮಾರಸ್ವಾಮಿ ಕ್ಷೇತ್ರ ತ್ಯಾಗ ಮಾಡಿದ್ದರು.
ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ರಾಮನಗರ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಈ ಮೂಲಕ ಜೆಡಿಎಸ್ ಭದ್ರಕೋಟೆ ಎನಿಸಿದ್ದ ರಾಮನಗರ ಕೈ ಪಾಲಾದಂತಾಗಿದೆ. ಬಿಜೆಪಿಯಿಂದ ರಾಮನಗರದಲ್ಲಿ ಗೌತಮ್ ಗೌಡ ಕಣಕ್ಕಿಳಿದಿದ್ದರು.