ಚನ್ನಪಟ್ಟಣ ಉಪ ಚುನಾವಣೆ (Channapattana bypoll) ಅಖಾಡದ ಫಲಿತಾಂಶ ನಿನ್ನೆ ಪ್ರಕಟಗೊಂಡಿದ್ದು, ಈ ಬಾರಿ ಗೆಲುವಿನ ನಿರೀಕ್ಷೆಯಲ್ಲಿದ್ದ ಎನ್‌ಡಿಎ (NDA) ಅಭ್ಯರ್ಥಿಯಾಗಿ ಕಣದಲ್ಲಿದ್ದ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಮೂರನೇ ಬಾರಿಗೆ ಮತ್ತೆ ಪರಾಭವಗೊಂಡಿದ್ದಾರೆ. ನಿಖಿಲ್ ಸೋತಿದ್ದಕ್ಕೆ ಮನನೊಂದ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಚನ್ನಪಟ್ಟಣದ ಕೂಡೂರಿನ ಶ್ರೀರಾಂಪುರ ಗ್ರಾಮದ ನಿವಾಸಿ ಮಂಜುನಾಥ್ (Manjunath) ಎಂಬ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈ ಬಗ್ಗೆ ಪತ್ರ ಬರೆದಿಟ್ಟಿರುವ ಆತ ನಾನು ನಿಖಿಲ್ ಕುಮಾರಸ್ವಾಮಿ ಅಭಿಮಾನಿ. ನನ್ನ ಸಾವಿಗೆ ನಾನೇ ಕಾರಣ. ಜೈ ಜೆಡಿಎಸ್ ಎಂದು ಪತ್ರ ಬರೆದಿಟ್ಟು, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಸದ್ಯ ಈ ವ್ಯಕ್ತಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಭಾರೀ ಪೈಪೋಟಿಯಿದ್ದ ಹಿನ್ನಲೆ ಬೆಟ್ಟಿಂಗ್ (Betting) ಕೂಡ ಜೋರಾಗಿತ್ತು.