SUV ಕಾರೊಂದು ಬಸ್ ಒಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ಭೀಕರವಾಗಿ ಮೃತಪಟ್ಟಿರುವ ಘಟನೆ ಗುಜರಾತಿನ ನವಸಾರಿ ಜಿಲ್ಲೆಯಲ್ಲಿ ನಡೆದಿದೆ.
ಸದ್ಯ ಅಪಘಾತಕ್ಕಿಡಾಗಿರುವ ಕಾರು ವೆಸ್ಮಾ ಗ್ರಾಮದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ವಿರುದ್ದ ದಿಕ್ಕಿನಿಂದ ಬಂದ ಕಾರಣ ಅಪಘಾತ ಸಂಭವಿಸಿದೆ SUVಯಲ್ಲಿ ಪ್ರಯಾಣಿಸುತ್ತಿದ್ದ 9 ಮಂದಿ ಪೈಕಿ 8ಮಂದಿ ಹಾಗೂ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು 15ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ನವಸಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಉಪಾಧ್ಯಾಯ ತಿಳಿಸಿದ್ದಾರೆ.
ಮೃತ ದುರ್ದೈವಿಗಳು ಅಂಕಲೇಶ್ವರದ ನಿವಾಸಿಗಳಾಗಿದ್ದು ವಲ್ಸದ್‌ನಿಂದ ತಮ್ಮ ಮನೆಗೆ ವಾಪಸ್ಸಾಗುವ ವೇಳೆ ಘಟನೆ ಸಂಭವಿಸಿದೆ ಎಂದು ಮಾಹಿತಿ ನೀಡಿದ್ದಾರೆ.






