ವಿಶ್ವದ ಅತ್ಯಂತ ಶಕ್ತಿಶಾಲಿ ಮಹಿಳೆಯರ ಪಟ್ಟಿಯಲ್ಲಿ ಸತತ ನಾಲ್ಕನೇ ಬಾರಿ ನಿರ್ಮಲಾ ಸೀತಾರಾಮನ್
ವಿಶ್ವದ 100 ಶಕ್ತಿಶಾಲಿ ಮಹಿಳೆಯರ ಪಟ್ಟಿಯನ್ನು ಫೋರ್ಬ್ಸ್ ಬಿಡುಗಡೆ ಮಾಡಿದ್ದು, ಆ ಪಟ್ಟಿಯಲ್ಲಿ ಭಾರತದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ವರ್ಷ ಕೂಡ ಸ್ಥಾನ ಪಡೆದಿದ್ದಾರೆ.
ವಿಶ್ವದ ಅತ್ಯಂತ ಶಕ್ತಿಶಾಲಿ ಮಹಿಳೆಯರ ಪಟ್ಟಿಯಲ್ಲಿ ಸತತ ನಾಲ್ಕನೇ ಬಾರಿ ನಿರ್ಮಲಾ ಸೀತಾರಾಮನ್ ಸ್ಥಾನ ಪಡೆದಿದ್ದು, ಈ ವರ್ಷ 36ನೇ ಸ್ಥಾನವನ್ನು ಪಡೆದಿದ್ದಾರೆ.
ಹಿಂದಿನ ವರ್ಷ ಅವರು 37ನೇ ಸ್ಥಾನದಲ್ಲಿದ್ದರು.
ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾಗಿಯೂ ಸೇವೆ ಸಲ್ಲಿಸಿರುವ ನಿರ್ಮಲಾ ಸೀತಾರಾಮನ್, ರಾಜಕೀಯ ಸೇರುವ ಮೊದಲು ಯುಕೆ ಮೂಲದ ಅಗ್ರಿಕಲ್ಚರಲ್ ಇಂಜಿನಿಯರ್ಸ್ ಅಸೋಸಿಯೇಷನ್ ಮತ್ತು ಬಿಬಿಸಿ ವರ್ಲ್ಡ್ ಸರ್ವೀಸ್‌ನಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.
EU ಕಮಿಷನ್ ಅಧ್ಯಕ್ಷೆ ವ್ಯಾನ್ ಡೇರ್, EU ಸೆಂಟ್ರಲ್ ಬ್ಯಾಂಕ್ ಅಧ್ಯಕ್ಷೆ ಕ್ರಿಸ್ಟಿನ್ ಲಗಾರ್ಡೆ ಮತ್ತು US ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಮೊದಲ ಮೂರು ಸ್ಥಾನ ಪಡೆದಿದ್ದಾರೆ.