ನಿತೀಶ್ ಕುಮಾರ್ (Nitish Kumar) ಅವರು 9 ಬಾರಿಗೆ ಬಿಹಾರ (Bihar) ಮುಖ್ಯಮಂತ್ರಿಯಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಿತೀಶ್ ಕುಮಾರ್ ತಮ್ಮ ಪಕ್ಷದೊಂದಿಗೆ ಬಿಜೆಪಿ ನೇತೃತ್ವದ ಎನ್ಡಿಎ ಸೇರಿ ಸರ್ಕಾರ ರಚಿಸಿದ್ದಾರೆ.
![](https://pratidhvani.com/wp-content/uploads/2024/01/nitish-kumar-on-shushil-modi-2-jpg.webp)
ಬಿಹಾರದ ರಾಜಭವನದಲ್ಲಿ ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರು ಪ್ರಮಾಣ ವಚನ ಬೋಧಿಸಿದರು. ಬಿಹಾರದ ಸಂಪುಟ ದರ್ಜೆಯ ಸಚಿವರಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ, ವಿಜಯ್ ಕುಮಾರ್ ಸಿನ್ಹಾ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
![](https://pratidhvani.com/wp-content/uploads/2024/01/Nitish-Kumar-3-1-1024x576.webp)
ನಿತೀಶ್ ಕುಮಾರ್ ಅವರು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ದಾಖಲೆಯ ಒಂಬತ್ತನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಿತೀಶ್ ಕುಮಾರ್ ನೇತೃತ್ವದ ಹೊಸ ಸರ್ಕಾರದಲ್ಲಿ ಒಟ್ಟು 8 ನಾಯಕರು ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.