ಬಿಹಾರ್: ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಬಿಹಾರ(Bihar) ಮುಖ್ಯಮಂತ್ರಿ(Chief Minister) ನಿತೀಶ್ ಕುಮಾರ್(Nitish Kumar) ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಆ ಮೂಲಕ ಕಳೆದ ಮೂರ್ನಾಲ್ಕು ದಿನಗಳಿಂದ ನಡೆಯುತ್ತಿದ್ದ ರಾಜಕೀಯ ವದಂತಿಗಳಿಗೆ ತೆರೆ ಎಳೆದಿದ್ದಾರೆ.
ʻಇಂಡಿಯಾʼ ಮೈತ್ರಿಕೂಟದಿಂದ ಹೊರಬಂದಿದ್ದ ನಿತೀಶ್ ಕುಮಾರ್, ನಿರೀಕ್ಷೆಯಂತೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ತಮ್ಮ ನಿವಾಸದಲ್ಲಿ ಜೆಡಿಯು ಶಾಸಕರ ಸಭೆ ನಡೆಸಿದ ನಿತೀಶ್, ಆ ಬಳಿಕ ಹಿರಿಯ ಸಚಿವ ಬಿಜೇಂದ್ರ ಯಾದವ್ ಅವರೊಂದಿಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲ ವಿಶ್ವನಾಥ್ ಅರ್ಲೇಕರ್ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದರು.
ಇಂಡಿಯಾ ಮೈತ್ರಿಕೂಟಕ್ಕೆ ಗುಡ್ಬೈ ಹೇಳಿರುವ ನಿತೀಶ್ ಕುಮಾರ್, ಎನ್ಡಿಎ ಜೊತೆಗೂಡಿ ಹೊಸ ಸರ್ಕಾರ ರಚಿಸಿವ ಸಾಧ್ಯತೆ ಇದೆ.