ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ.

ಬಿಹಾರದಲ್ಲಿ ಹೊಸ ಸರ್ಕಾರ ರಚಿಸುವ ಪ್ರಕ್ರಿಯೆ ಆರಂಭವಾಗಿದ್ದು, ನಿರ್ಗಮಿತ ಸಚಿವ ಸಂಪುಟ ಇಂದು ತನ್ನ ಕೊನೆಯ ಸಭೆಯನ್ನು ನಡೆಸಿದೆ. ಅಂತಿಮ ಸಚಿವ ಸಂಪುಟ ಸಭೆಯ ನಂತರ ನಿತೀಶ್ ಕುಮಾರ್ ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನೀಡಿರುವ ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ನೀಡಿದ್ದಾರೆ.

ಇನ್ನು ನವೆಂಬರ್ 20ರಂದು ಬಿಹಾರದಲ್ಲಿ ಹೊಸ ಸರ್ಕಾರ ರಚನೆಯಾಗಲಿದ್ದು, ಚುನಾವಣೆಯಲ್ಲಿ ಭರ್ಜರಿ ಬಹುಮತ ಪಡೆದ ಎನ್‌ಡಿಎ ಮೈತ್ರಿಕೂಟದ ನಾಯಕ ನಿತೀಶ್ ಕುಮಾರ್ ಮತ್ತೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಹಿರಿಯ ಜೆಡಿಯು ನಾಯಕರು ಹೇಳಿದ್ದಾರೆ.













