ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ್ದು, ಇದೀಗ ಹೊಸ ಸರ್ಕಾರ ರಚನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಸತತ 10ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಉಪ ಮುಖ್ಯಮಂತ್ರಿಯಾಗಿ ವಿಜಯ್ ಕುಮಾರ್ ಸಿನ್ಹಾ ಹಾಗೂ ಸಾಮ್ರಾಟ್ ಚೌಧರಿ ಪ್ರಮಾಣ ವಚನ ಸ್ವೀಕರಿಸಿದ್ದು, ಹೊಸ ಸರ್ಕಾರದ ಭಾಗವಾಗಿ ಇಂದು ಇಪ್ಪತ್ತಾರು ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಎನ್‌ಡಿಎ ಮೈತ್ರಿಕೂಟದ ಉನ್ನತ ನಾಯಕರು ಭಾಗಿಯಾಗಿದ್ದಾರೆ.











