• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ದಿವಂಗತ ಮನಗೂಳಿ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಪ್ರಯತ್ನ ಬೇಡ: ಹೆಚ್.ಡಿ.ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
October 9, 2021
in ಕರ್ನಾಟಕ, ರಾಜಕೀಯ
0
ದಿವಂಗತ ಮನಗೂಳಿ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಪ್ರಯತ್ನ ಬೇಡ: ಹೆಚ್.ಡಿ.ಕುಮಾರಸ್ವಾಮಿ
Share on WhatsAppShare on FacebookShare on Telegram

ತಾವು ನಿಧನರಾಗುವುದಕ್ಕೆ ಹದಿನೈದು ದಿನ ಮೊದಲು ಎಂ ಸಿ ಮನಗೂಳಿ ಅವರು ತಮ್ಮ ಮನೆಗೆ ಬಂದು ಮಕ್ಕಳನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳಬೇಕೆಂದು ಕೇಳಿದ್ದರು ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೀಡಿದ್ದ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ADVERTISEMENT

ಈ ಬಗ್ಗೆ ಇಂದು ಸರಣಿ ಟ್ವೀಟ್ ಮಾಡಿರುವ ಅವರು, ಡಿಕೆ ಶಿವಕುಮಾರ್ ಅಪ್ಪಟ ಸುಳ್ಳು ಹೇಳುತ್ತಿದ್ದಾರೆಂದು ಕಟುವಾಗಿ ಟೀಕಿಸಿದ್ದಾರೆ.

ಸುಳ್ಳು ಹೇಳುವುದಕ್ಕೂ ಮಿತಿ ಇರಬೇಕು. ವ್ಯಕ್ತಿ ಇಲ್ಲವಾದ ಮೇಲೆ ಅವರ ವಿಚಾರದಲ್ಲಿ ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸುವುದು ರಾಜಕೀಯವಾಗಿ, ವೈಯಕ್ತಿಕವಾಗಿ ʼಅನೈತಿಕʼ ಎಂಬುದು ನನ್ನ ಅಭಿಪ್ರಾಯ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ʼಅಪ್ಪಟ ಸುಳ್ಳುʼ ಹೇಳುವ ಮೂಲಕ ದಿವಂಗತ ನಾಯಕ ಎಂಸಿ ಮನಗೂಳಿ ಅವರಿಗೆ ಅಪಚಾರ ಮಾಡಿದ್ದಾರೆ  ಎಂದು ಕಿಡಿಕಾರಿದ್ದಾರೆ.

ಸುಳ್ಳು ಹೇಳುವುದಕ್ಕೂ ಮಿತಿ ಇರಬೇಕು. ವ್ಯಕ್ತಿ ಇಲ್ಲವಾದ ಮೇಲೆ ಅವರ ಬಗ್ಗೆ ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸುವುದು ರಾಜಕೀಯವಾಗಿ, ವೈಯಕ್ತಿಕವಾಗಿ ʼಅನೈತಿಕʼ ಎಂಬುದು ನನ್ನ ಅಭಿಪ್ರಾಯ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ʼಅಪ್ಪಟ ಸುಳ್ಳುʼ ಹೇಳುವ ಮೂಲಕ ದಿವಂಗತ ನಾಯಕ ಎಂಸಿ ಮನಗೂಳಿ ಅವರಿಗೆ ಅಪಚಾರ ಮಾಡಿದ್ದಾರೆ.1/6

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 9, 2021

ತಾವು ನಿಧನರಾಗುವುದಕ್ಕೆ ೧೫ ದಿನ ಮೊದಲು ಮನಗೂಳಿ ಅವರು ತಮ್ಮ ಪುತ್ರ ಅಶೋಕ್ ಅವರನ್ನು ಕರೆದುಕೊಂಡು ನಮ್ಮ ಮನೆಗೆ ಬಂದಿದ್ದರು. ನನಗೆ ವಯಸ್ಸಾಗಿದೆ, ಆರೋಗ್ಯ ಸರಿ ಇಲ್ಲ. ಎಷ್ಟು ದಿನ ಇರುತ್ತೇನೋ ಗೊತ್ತಿಲ್ಲ, ಅಶೋಕನನ್ನು ನಿಮ್ಮ ಹಾಗೂ ಸಿದ್ದರಾಮಯ್ಯ ಮಡಿಲಿಗೆ ಹಾಕುತ್ತಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷರು ಹೇಳಿದ್ದಾರೆ!

ತಾವು ನಿಧನರಾಗುವುದಕ್ಕೆ 15 ದಿನ ಮೊದಲು ಮನಗೂಳಿ ಅವರು ತಮ್ಮ ಪುತ್ರ ಅಶೋಕ್ ಅವರನ್ನು ಕರೆದುಕೊಂಡು ನಮ್ಮ ಮನೆಗೆ ಬಂದಿದ್ದರು. ನನಗೆ ವಯಸ್ಸಾಗಿದೆ, ಆರೋಗ್ಯ ಸರಿ ಇಲ್ಲ. ಎಷ್ಟು ದಿನ ಇರುತ್ತೇನೋ ಗೊತ್ತಿಲ್ಲ, ಅಶೋಕನನ್ನು ನಿಮ್ಮ ಹಾಗೂ ಸಿದ್ದರಾಮಯ್ಯ ಮಡಿಲಿಗೆ ಹಾಕುತ್ತಿದ್ದೇನೆ ಎಂದು ಡಿಕೆ ಶಿವಕುಮಾರ್‌ ಅವರಿಗೆ ಹೇಳಿದ್ದರಂತೆ!2/6

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 9, 2021

ಸುಳ್ಳುಗಳನ್ನು ಸೃಷ್ಟಿ ಮಾಡುವುದರಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು ಎನ್ನುವುದಕ್ಕೆ ಇದಕ್ಕಿಂತ ಅತ್ಯುತ್ತಮ ಉದಾಹರಣೆ ಬೇರೆ ಇಲ್ಲ. ಸತ್ಯ ಏನೆಂದರೆ; ಕೋವಿಡ್ ಸೋಂಕಿತರಾಗಿದ್ದ ಮನಗೂಳಿ ಅವರನ್ನು ಬೆಂಗಳೂರಿನ ಅಪೊಲೋ ಆಸ್ಪತ್ರೆಗೆ ನಾವೇ ಸೇರಿಸಿದ್ದೆವು. ೧೯ ದಿನಗಳ ಕಾಲ ಅವರು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿದ್ದರು.

ಸುಳ್ಳುಗಳನ್ನು ಸೃಷ್ಟಿ ಮಾಡುವುದರಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು ಎನ್ನುವುದಕ್ಕೆ ಇದಕ್ಕಿಂತ ಅತ್ಯುತ್ತಮ ಉದಾಹರಣೆ ಬೇರೆ ಇಲ್ಲ. ಸತ್ಯ ಏನೆಂದರೆ; ಕೋವಿಡ್ ಸೋಂಕಿತರಾಗಿದ್ದ ಮನಗೂಳಿ ಅವರನ್ನು ಬೆಂಗಳೂರಿನ ಅಪೊಲೋ ಆಸ್ಪತ್ರೆಗೆ ನಾವೇ ಸೇರಿಸಿದ್ದೆವು. 19 ದಿನಗಳ ಕಾಲ ಅವರು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿದ್ದರು.3/6

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 9, 2021

ಜನವರಿ ೯ರಂದು ಮನಗೂಳಿ ಅವರು ಅಪೊಲೋ ಆಸ್ಪತ್ರೆಗೆ ದಾಖಲಾಗಿ, ಜನವರಿ ೨೮ರಂದು ಅಲ್ಲಿಯೇ  ನಿಧನರಾದರು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮನಗೂಳಿ ಅವರನ್ನು ನಾನೂ ಸೇರಿ ಅವರ ಮಕ್ಕಳೂ ನೋಡಲಾಗಲಿಲ್ಲ. ಅದಕ್ಕೂ ಮೊದಲು ಅವರು ಒಂದೂವರೆ ತಿಂಗಳು ವಿಜಯಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.

ಜನವರಿ 9ರಂದು ಮನಗೂಳಿ ಅವರು ಅಪೊಲೋ ಆಸ್ಪತ್ರೆಗೆ ದಾಖಲಾಗಿ, ಜನವರಿ 28ರಂದು ಅಲ್ಲಿಯೇ ನಿಧನರಾದರು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮನಗೂಳಿ ಅವರನ್ನು ನಾನೂ ಸೇರಿ ಅವರ ಮಕ್ಕಳೂ ನೋಡಲಾಗಲಿಲ್ಲ. ಅದಕ್ಕೂ ಮೊದಲು ಅವರು ಒಂದೂವರೆ ತಿಂಗಳ ಕಾಲ ವಿಜಯಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.4/6

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 9, 2021

ಹಾಗಾದರೆ, ಮನಗೂಳಿ ಅವರು ಡಿಕೆ ಶಿವಕುಮಾರ್ ಮನೆಗೆ ಹೋಗಿದ್ದು ಯಾವಾಗ? ಮಕ್ಕಳನ್ನು ಮಡಿಲಿಗೆ ಹಾಕಿಕೊಳ್ಳಿ ಎಂದಿದ್ದು ಎಂದು? ಅವರ ʼಹಸಿಸುಳ್ಳುಗಳು ಅಸಹ್ಯ ಹುಟ್ಟಿಸುವಂತಿವೆʼ. ನಮ್ಮ ಪಕ್ಷದ ಅಭ್ಯರ್ಥಿಯಾಗಬೇಕಿದ್ದ ಅಶೋಕ್ ಮನಗೂಳಿ ಅವರನ್ನು ಹೈಜಾಕ್ ಮಾಡಿಕೊಂಡು ಹೋಗಿದ್ದಲ್ಲದೆ, ಈಗ ಸುಳ್ಳುಗಳ ಸರಮಾಲೆ ಹಣೆಯುತ್ತಾ ಜನರಿಗೆ ಟೋಪಿ ಹಾಕಲು ಹೊರಟಿದ್ದಾರೆ ಎಂದು ಟೀಕಿಸಿದ್ದಾರೆ.

ಹಾಗಾದರೆ, ಮನಗೂಳಿ ಅವರು ಡಿಕೆ ಶಿವಕುಮಾರ್ ಮನೆಗೆ ಹೋಗಿದ್ದು ಯಾವಾಗ? ಮಕ್ಕಳನ್ನು ಮಡಿಲಿಗೆ ಹಾಕಿಕೊಳ್ಳಿ ಎಂದಿದ್ದು ಎಂದು? ಅವರ ʼಹಸಿಸುಳ್ಳುಗಳು ಅಸಹ್ಯ ಹುಟ್ಟಿಸುವಂತಿವೆʼ. ನಮ್ಮ ಪಕ್ಷದ ಅಭ್ಯರ್ಥಿಯಾಗಬೇಕಿದ್ದ ಅಶೋಕ್ ಮನಗೂಳಿ ಅವರನ್ನು ಹೈಜಾಕ್ ಮಾಡಿದ್ದಲ್ಲದೆ, ಈಗ ಸುಳ್ಳುಗಳ ಸರಮಾಲೆ ಹಣೆಯುತ್ತಾ ಜನರಿಗೆ ಟೋಪಿ ಹಾಕಲು ಹೊರಟಿದ್ದಾರೆ.5/6

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 9, 2021

ಸಿಂಧಗಿ ಜನತೆಗೆ ಯಾಮಾರಿಸುವ ಪ್ರಯತ್ನ ಬೇಡ. ಅಭ್ಯರ್ಥಿಗೆ ದಿಕ್ಕಿಲ್ಲದ ಕಾಂಗ್ರೆಸ್ ಪಕ್ಷದ ನಾಯಕರು ಈಗ ದಿಕ್ಕು ತೋಚದ ಸ್ಥಿತಿಯಲ್ಲಿದ್ದಾರೆ. ನಮ್ಮ ಪಕ್ಷ ಹಾಗೂ ಮಾನ್ಯ ದೇವೇಗೌಡರ ಬಗ್ಗೆ ಅಚಲ ನಿಷ್ಠೆ ಹೊಂದಿದ್ದ ದಿವಂಗತ ಮನಗೂಳಿ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಪ್ರಯತ್ನ ಬೇಡ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಸಿಂಧಗಿ ಜನತೆಗೆ ಯಾಮಾರಿಸುವ ಪ್ರಯತ್ನ ಬೇಡ. ಅಭ್ಯರ್ಥಿಗೆ ದಿಕ್ಕಿಲ್ಲದ ಕಾಂಗ್ರೆಸ್ ಪಕ್ಷದ ನಾಯಕರು ಈಗ ದಿಕ್ಕು ತೋಚದ ಸ್ಥಿತಿಯಲ್ಲಿದ್ದಾರೆ. ನಮ್ಮ ಪಕ್ಷ ಹಾಗೂ ಮಾನ್ಯ ಹೆಚ್.ಡಿ.ದೇವೇಗೌಡರ ಬಗ್ಗೆ ಅಚಲ ನಿಷ್ಠೆ ಹೊಂದಿದ್ದ ದಿವಂಗತ ಮನಗೂಳಿ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಪ್ರಯತ್ನ ಸರಿಯಲ್ಲ.6/6

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 9, 2021
Tags: ashok managuliBJPByElectionCongress PartyCovid 19cs managuliD K ShivakumarhangalJDSJDS KarnatakaLiesindhagiಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬಿಎಸ್ ವೈ ಆಪ್ತರ ಮೇಲಿನ ದಾಳಿಯ ಹಿಂದಿನ ಆರ್ ಎಸ್ ಎಸ್ ಲೆಕ್ಕಾಚಾರಗಳೇನು?

Next Post

ತೆಲಂಗಾಣದ ವಿವಿಧ ಕಡೆ ಭೀಕರ ಮಳೆ : ಜಲಾವೃತಗೊಂಡ ಕಟ್ಟಡಗಳು, ರೆಸ್ಟೋರೆಂಟ್‌ಗಳು

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ತೆಲಂಗಾಣದ ವಿವಿಧ ಕಡೆ ಭೀಕರ ಮಳೆ : ಜಲಾವೃತಗೊಂಡ ಕಟ್ಟಡಗಳು, ರೆಸ್ಟೋರೆಂಟ್‌ಗಳು

ತೆಲಂಗಾಣದ ವಿವಿಧ ಕಡೆ ಭೀಕರ ಮಳೆ : ಜಲಾವೃತಗೊಂಡ ಕಟ್ಟಡಗಳು, ರೆಸ್ಟೋರೆಂಟ್‌ಗಳು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada