• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಚಲನೆಯಿಲ್ಲದ ಸಾಮಾಜಿಕ ವ್ಯವಸ್ಥೆಯಲ್ಲಿ ಬದಲಾವಣೆ ಸಾಧ್ಯವಿಲ್ಲ: ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
October 16, 2023
in Top Story, ಕರ್ನಾಟಕ
0
ಚಲನೆಯಿಲ್ಲದ ಸಾಮಾಜಿಕ ವ್ಯವಸ್ಥೆಯಲ್ಲಿ ಬದಲಾವಣೆ ಸಾಧ್ಯವಿಲ್ಲ: ಸಿದ್ದರಾಮಯ್ಯ
Share on WhatsAppShare on FacebookShare on Telegram

ಮೈಸೂರು: ವೈಚಾರಿಕ , ವೈಜ್ಞಾನಿಕ ಚಿಂತನೆಗೆ ಶಿಕ್ಷಣ ಅಗತ್ಯ. ಮೌಢ್ಯ ಹಾಗೂ ಕಂದಾಚಾರದಿಂದ ಸಮಾಜದ ಹಿನ್ನಡೆಯಾಗುತ್ತದೆ. ಶಿಕ್ಷಣ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಸಾಧನವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ತಿಳಿಸಿದರು.

ADVERTISEMENT

ಅವರು ಇಂದು ಮೈಸೂರು ವಿಶ್ವವಿದ್ಯಾಲಯದ ಯುವರಾಜ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘ (ರಿ) ವತಿಯಿಂದ ಕಾಲೇಜಿನ ಅಮೃತ ಮಹೋತ್ಸವ ಸಭಾಂಗಣದಲ್ಲಿ ಆಯೋಜಿಸಿರುವ “ 20ನೆಯ ವಾರ್ಷಿಕ ಸರ್ವ ಸದಸ್ಯರ ಮಹಾಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಜ್ಞಾನ ವಿಕಾಸವಾಗಲು ಶಿಕ್ಷಣ ಅಗತ್ಯ. ನಾವೂ ಅನಕ್ಷರಸ್ಥರಂತೆ ನಡೆದುಕೊಳ್ಳುವುದಾದರೆ ಶಿಕ್ಷಣದ ಅಗತ್ಯವೇ ಇಲ್ಲ. ಸಮಾಜದಲ್ಲಿ ಜಾತಿ ವ್ಯವಸ್ಥೆಯಿದೆ. ಜಾತಿಯಿಂದಲೇ ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆಯಿದೆ. ಶೂದ್ರರು, ಮಹಿಳೆಯರು ಶಿಕ್ಷಣದಿಂದ ವಂಚಿತರಾಗಿದ್ದರು. ಸಮಾಜದಲ್ಲಿ ಅವಕಾಶಗಳಿಂದ, ನ್ಯಾಯದಿಂದ ವಂಚಿತರಾಗಿದ್ದರೆ, ಅವರ ಪರಿಸ್ಥಿತಿಯನ್ನು ಸುಧಾರಿಸಬೇಕು. ವೈಚಾರಿಕ , ವೈಜ್ಞಾನಿಕ ಚಿಂತನೆಗೆ ಶಿಕ್ಷಣ ಅಗತ್ಯ. ಮೌಢ್ಯಗಳು, ಕಂದಾಚಾರದಿಂದ ಸಮಾಜದ ಹಿನ್ನಡೆಯಾಗಿದೆ. ಶಿಕ್ಷಿತರು ಸಮಾಜದಲ್ಲಿ ಬದಲಾವಣೆಯನ್ನು ತರಲು ಪ್ರಯತ್ನಿಸಬೇಕು. ಚಲನೆಯಿಲ್ಲದ ಸಾಮಾಜಿಕ ವ್ಯವಸ್ಥೆಯಲ್ಲಿ ಬದಲಾವಣೆ ಸಾಧ್ಯವಿಲ್ಲ. ಶಿಕ್ಷಣದಿಂದ ಸಮಾಜಕ್ಕೆ ಚಲನೆ ದೊರೆತು ಆರ್ಥಿಕ, ಸಾಮಾಜಿಕ ಸಬಲತೆ ಸಾಧ್ಯವಾಗುತ್ತದೆ. ಇಂತಹ ಶಿಕ್ಷಣ, ಕಾಲೇಜುಗಳಲ್ಲಿ ದೊರೆಯಬೇಕು. ವಿಜ್ಞಾನದ ಜೊತೆಗೆ ಮೌಢ್ಯ, ಕಂದಾಚಾರಗಳಿಗೆ ಅವಕಾಶವಿಲ್ಲ. ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಸಾಧನ ಶಿಕ್ಷಣವಾಗಬೇಕು ಎಂದು ತಿಳಿಸಿದರು.

ನಾನು ಸಾಮಾಜಿಕ ನ್ಯಾಯದ ಪರ ಜಾತಿವಿರೋಧಿ ಎಂಬ ಆರೋಪ ನನ್ನ ಮೇಲಿದೆ. ಆದರೆ ನಾನು ಯಾವ ಜಾತಿಯ ವಿರೋಧಿಯೂ ಅಲ್ಲ. ನಾನು ಸಾಮಾಜಿಕ ನ್ಯಾಯದ ಪರವಾಗಿದ್ದು, ಮನುಷ್ಯ ಜಾತಿಯ ಪರವಾಗಿದ್ದೇನೆ. ಕುವೆಂಪು ಹೇಳಿದಂತೆ, ಹುಟ್ಟುವಾಗ ಎಲ್ಲರೂ ವಿಶ್ವಮಾನವರಾಗಿದ್ದು, ಬೆಳೆದಂತೆ ಅಲ್ಪಮಾನವರಾಗುತ್ತೇವೆ. ನಾವೆಲ್ಲರೂ ವಿಶ್ವಮಾನವರಾಗಿಯೇ ಉಳಿದುಕೊಳ್ಳುವುದೇ ಶಿಕ್ಷಣದ ಗುರಿಯಾಗಬೇಕು. ಸಂವಿಧಾನದ ವಿರುದ್ಧ ಮಾತನಾಡುವವರಿಗೆ ಕೆಲವು ವಿದ್ಯಾವಂತರು ಚಪ್ಪಾಳೆ ತಟ್ಟುವುದು ವಿಷಾದನೀಯ. ಅವಕಾಶವಂಚಿತರಿಗೆ ಸಮಾನತೆಯ ಅವಕಾಶ ದೊರೆಕಿಸಿಕೊಡುವುದೇ ಶಿಕ್ಷಣದ ಗುರಿಯಾಗಬೇಕು ಎಂದರು.

ಮೈಸೂರಿನ ಅಭಿವೃದ್ಧಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಕೊಡುಗೆ ಅನನ್ಯ : ಹಳೆಯ ವಿದ್ಯಾರ್ಥಿ ಸಂಘಕ್ಕೆ 20ನೇ ವರ್ಷದ ಸಮಾರಂಭಕ್ಕೆ ನಾನು ಹಳೆಯ ವಿದ್ಯಾರ್ಥಿಯಾಗಿ ಭಾಗವಹಿಸಿದ್ದೇನೆ. ಮೈಸೂರು ವಿಶ್ವವಿದ್ಯಾಲಯ ಪ್ರಾರಂಭವಾಗಿ ಶತಮಾನ ಕಳೆದಿದೆ. ಶಿಕ್ಷಣ ಸಂಸ್ಥೆ, ಕೈಗಾರಿಕೆ, ಕಲೆ, ಸಾಹಿತ್ಯ ಸಾಂಸ್ಕೃತಿಕ ಕ್ಷೇತ್ರ ಹೀಗೆ ಮೈಸೂರಿನ ಸರ್ವತೋಮುಖ ಅಭಿವೃದ್ಧಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಕಾರಣರಾಗಿದ್ದಾರೆ. ಆ ಕಾಲದಲ್ಲಿ ದಿವಾನರಾಗಿದ್ದ ಮಿರ್ಜಾ ಇಸ್ಮಾಯಿಲ್, ಸರ್.ಎಂ.ವಿಶ್ವೇಶ್ವರಯ್ಯ ಬಹಳ ಪ್ರಗತಿಪರರಾಗಿದ್ದರು. ಕೆಆರ್ ಎಸ್ ಜಲಾಶಯ ಕೃಷ್ಣರಾಜ ಒಡೆಯರ್ ಹಾಗೂ ಸರ್ ಎಂವಿ ಅವರ ಕನಸಿನ ಯೋಜನೆ. ಕಾವೇರಿ ನೀರು ನಮಗೆ ದೊರೆಯದೇ , ಮಂಡ್ಯದಲ್ಲಿ ಕಬ್ಬು, ಭತ್ತ ಬೆಳೆಯಲು ಸಾಧ್ಯವಾಗುತ್ತಿರಲಿಲ್ಲ. ಆದ್ದರಿಂದ ಡಾ.ಅಂಬೇಡ್ಕರ್ ಅವರು’ಇತಿಹಾಸ ತಿಳಿಯದವರು ಭವಿಷ್ಯ ನಿರ್ಮಿಸಲು ಸಾಧ್ಯವಿಲ್ಲ’ ಎಂದಿದ್ದರು.

ಯುವರಾಜ ಕಾಲೇಜಿನಲ್ಲಿ ವ್ಯಾಸಂಗ:
ಯುವರಾಜ ಕಾಲೇಜಿನಲ್ಲಿ ವ್ಯಾಸಂಗ ಮಾಡುವಾಗ, ಮುಖ್ಯಮಂತ್ರಿಯಾಗುವ ಕಲ್ಪನೆಯೂ ಇರಲಿಲ್ಲ. ನಾನು ವೈದ್ಯನಾಗಬೇಕೆಂಬ ಆಸೆ ತಂದೆಯವರದಾಗಿತ್ತು. ಆದ್ದರಿಂದ ಈ ಕಾಲೇಜಿನಲ್ಲಿ ವ್ಯಾಸಂಗ ಮಾಡಿದೆ. 1968 ರಲ್ಲಿ ಬಿಎಸ್ ಸಿ ಪದವಿ ಪಡೆದು, ನಾಲ್ಕು ವರ್ಷಗಳ ಕಾಲ ಯುವರಾಜ ಕಾಲೇಜಿನಲ್ಲಿ ವ್ಯಾಸಂಗ ಮಾಡಿರುವುದಾಗಿ ತಮ್ಮ ಕಾಲೇಜಿನ ದಿನಗಳ ನೆನಪುಗಳನ್ನು ಹಂಚಿಕೊಂಡರು.

Tags: educationMysurusiddaramaiahYuvaraja College
Previous Post

ನಕಲಿ ಸ್ವಾಮಿ, ಲೂಟಿ ರವಿ, ಮಾಜಿ ಸಿಎಂ, ಬ್ಲಾಕ್ ಮೇಲರ್ ಎಲ್ಲರಿಗೂ ಉತ್ತರ ಕೊಡ್ತಿನಿ: ಡಿಸಿಎಂ ಡಿಕೆಶಿ ಗರಂ

Next Post

ಯಾರಪ್ಪನ ದುಡ್ಡು ಅಲ್ಲ, ಗುತ್ತಿಗೆದಾರರದು ಅಥವಾ ರಾಜಕಾರಣಿಗಳ ಹಣವಲ್ಲ: ಹೆಚ್.ಡಿ.ಕುಮಾರಸ್ವಾಮಿ

Related Posts

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

by ಪ್ರತಿಧ್ವನಿ
July 5, 2025
0

https://youtube.com/live/MVIPvxtGf0k

Read moreDetails
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025
Next Post
ಯಾರಪ್ಪನ ದುಡ್ಡು ಅಲ್ಲ, ಗುತ್ತಿಗೆದಾರರದು ಅಥವಾ ರಾಜಕಾರಣಿಗಳ ಹಣವಲ್ಲ: ಹೆಚ್.ಡಿ.ಕುಮಾರಸ್ವಾಮಿ

ಯಾರಪ್ಪನ ದುಡ್ಡು ಅಲ್ಲ, ಗುತ್ತಿಗೆದಾರರದು ಅಥವಾ ರಾಜಕಾರಣಿಗಳ ಹಣವಲ್ಲ: ಹೆಚ್.ಡಿ.ಕುಮಾರಸ್ವಾಮಿ

Please login to join discussion

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

by ಪ್ರತಿಧ್ವನಿ
July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

July 5, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!