ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ (Cm race) ಪ್ರಶ್ನೆಯೇ ಇಲ್ಲ.ಈ ಬಗ್ಗೆ ಏನೇ ಅಭಿಪ್ರಾಯಗಳಿದ್ದರೂ ಕಾಂಗ್ರೆಸ್ ಹೈಕಮಾಂಡ್ (Congress high command) ತೀರ್ಮಾನ ಕೈಗೊಳ್ಳುತ್ತದೆ ಎಂದು ಮೈಸೂರಿನಲ್ಲಿ (Mysuru) ಸಿಎಂ ಸಿದ್ದರಾಮಯ್ಯ (Cm siddaramaiah) ಮತ್ತೊಮ್ಮೆ ಸಿಎಂಬದಲಾವಣೆ ಚರ್ಚೆಯನ್ನು ತಳ್ಳಿ ಹಾಕಿದ್ದಾರೆ.

ಈ ಬಗ್ಗೆ ಬಿಜೆಪಿಯವರು ಬಹಳ ಕಾಲದಿಂದಲೂ ಸಿಎಂ ಬದಲಾವಣೆ ಅಂತ ಮಾತನಾಡ್ತಿದ್ದಾರೆ.ಮೊದಲು ಅವರ ಪಕ್ಷದಲ್ಲಿರುವ ಸಮಸ್ಯೆಗಳನ್ನು ಸರಿಪಡಿಸಿಕೊಳ್ಳಲಿ. ಬಿಜೆಪಿಯವರು ಪ್ರತಿನಿತ್ಯ ಒಬ್ಬರ ಮೇಲೊಬ್ಬರು ಹೇಳಿಕೆ ನೀಡುತ್ತಿದ್ದಾರೆ.ಆರೋಪ ಪ್ರತ್ಯಯ ರೂಪಗಳನ್ನು ಮಾಡಿಕೊಳ್ಳುತ್ತಿದ್ದಾರೆ ಎಂದಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಯತ್ನಾಳ್ ಮತ್ತು ಸುಧಾಕರ್ ಬಹಿರಂಗವಾಗಿ ಮಾತನಾಡುತ್ತಿದ್ದಾರೆ. ಆದರೂ ಕ್ರಮ ಕೈಗೊಳ್ಳಲು ಅವರ ಪಕ್ಷದ ಹೈಕಮಾಂಡ್ ಗೆ ಸಾಧ್ಯವಾಗಿಲ್ಲ. ಅದನ್ನು ಮೊದಲು ಸರಿಪಡಿಸಿಕೊಳ್ಳಲಿ ಎಂದು ಹೇಳಿದ್ದಾರೆ.