• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯದಲ್ಲಿ ಕೋವಿಡ್ ಕಾರಣದಿಂದಾಗಿ ಯಾವುದೇ ಸಾವುಗಳಾಗಿಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

ಪ್ರತಿಧ್ವನಿ by ಪ್ರತಿಧ್ವನಿ
June 11, 2025
in Top Story, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಕೋವಿಡ್ ಪಾಸಿಟಿವ್ ಬಂದವರಲ್ಲಿ ನಿಧನರಾದ 11 ಜನರ ಪೈಕಿ 10 ಜನರ ಡೆತ್ ಆಡಿಟ್ ಮಾಡಲಾಗಿದೆ, ಕಳೆದ 10 ದಿನಗಳಲ್ಲಿ 5 ಸಾವಿರಕ್ಕೂ ಹೆಚ್ಚು ಕೋವಿಡ್ ಟೆಸ್ಟಿಂಗ್ ನಡೆಸಲಾಗಿದೆ.

ADVERTISEMENT

ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದಾಗಿ ಯಾವುದೇ ಸಾವು ಸಂಭವಿಸಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಭೆ ಬಳಿಕ ಸಚಿವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.‌

ಕೋವಿಡ್ ಸೋಂಕು ಹತೋಟಿಯಲ್ಲಿದ್ದು ಜನರು ಆತಂಕಕ್ಕೆ ಒಳಗಾಗುವ ಸ್ಥಿತಿ ಇಲ್ಲ. ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಬಂದವರಲ್ಲಿ ಸಾವಿಗೀಡಾಗಿರುವ 11 ಜನರಲ್ಲಿ 10 ಜನರ ಡೆತ್ ಆಡಿಟ್ ರಿಪೋರ್ಟ್ ಬಂದಿದೆ. ಡೆತ್ ಆಡಿಟ್ ರಿಪೋರ್ಟ್ ಪ್ರಕಾರ 10 ಜನರು ಇತರ ಮಾರಕ ಕಾಯಿಲೆಗಳಾದ ಹೃದಯಸಂಬಂಧಿ, ಕಿಡ್ನಿ, ಅಂಗಾಂಗ ವೈಫಲ್ಯದಂತಹ ಕಾರಣಗಳಿಂದ ಸಾವನ್ನಪ್ಪಿದ್ದು, ಕೋವಿಡ್ ಕಾರಣವಲ್ಲ ಎಂಬುದು ಸ್ಪಷ್ಟವಾಗಿದೆ. ಇನ್ನು ಒಬ್ಬರ ಡೆತ್ ಆಡಿಟ್ ರಿಪೋರ್ಟ್ ಬರುವುದು ಬಾಕಿ ಇದೆ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.‌

ಡೆತ್ ಆಡಿಟ್ ರಿಪೋರ್ಟ್ ಬಳಿಕವೇ ಕೋವಿಡ್ ಡೆತ್ ರಿಪೋರ್ಟ್ ಘೋಷಿಸುವಂತೆ ಇಂದು ನಡೆದ ಸಿಎಂ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕೋವಿಡ್ ಡೆತ್ ಎಂದಾಕ್ಷಣ ಅನಗತ್ಯವಾಗಿ ಜನರು ಆತಂಕಕ್ಕೆ ಒಳಗಾಗುವುದು ಸಹಜ.. ಆದರೆ ವಾಸ್ತವ ಚಿತ್ರಣ ಬೇರೆಯೇ ಆಗಿರುತ್ತದೆ. ಈಗಿರುವ ಕೋವಿಡ್ ರೂಪಾಂತರಿ ವೈರಸ್ ಸೌಮ್ಯ ಸ್ವಭಾವದ್ದಾಗಿದೆ. 500 ಕ್ಕೂ ಹೆಚ್ಚು ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ ಕೇವಲ ಇಬ್ಬರು ಮಾತ್ರ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಆತಂಕದ ಸ್ಥಿತಿ ಇಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಆರೋಗ್ಯ ಇಲಾಖೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನ ತೆಗೆದುಕೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಟೆಸ್ಟಿಂಗ್ ಮಾಡಲಾಗುತ್ತಿದೆ. ಕಳೆದ 10 ದಿನಗಳಲ್ಲಿ 5 ಸಾವಿರಕ್ಕೂ ಹೆಚ್ಚು ಕೋವಿಡ್ ಟೆಸ್ಟಿಂಗ್ ಮಾಡಲಾಗಿದೆ. SARI ಪ್ರಕರಣಗಳಲ್ಲಿ ಕಡ್ಡಾಯವಾಗಿ ಕೋಡಿಡ್ ಟೆಸ್ಟಿಂಗ್ ನಡೆಸಲಾಗುತ್ತಿದೆ.. ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ವ್ಯವಸ್ಥೆಯನ್ನ ಕಲ್ಪಿಸಲಾಗಿದೆ. ತಜ್ಞರ ಸಮಿತಿ ಸಭೆಗಳನ್ನ ನಡೆಸುತ್ತಿದ್ದು, ಆರೋಗ್ಯ ಇಲಾಖೆ ಕೂಡ ಮೇಲ್ವಿಚಾರಣೆ ನಡೆಸುತ್ತಿದೆ. ಕೋವಿಡ್ ಗೆ ಆತಂಕಗೊಳ್ಳದೇ ಜನರು ತಮ್ಮ ಸಹಜ ಜೀವನ ನಡೆಸಬಹುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

Tags: BangaloreCovid -19Covid testDinesh GunduraoDK ShivakumarHealth MinisterKarnatakasiddaramaiah
Previous Post

ಕುಸುಮ್‌ ಸಿಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ವಿದ್ಯುತ್: ಸಿಎಂ ಸಿದ್ದರಾಮಯ್ಯ

Next Post

ವರ್ಗಾವಣೆಗೊಂಡಿದ್ದ ಐಪಿಎಸ್ ಹೇಮಂತ್ ನಿಂಬಾಳ್ಕರ್ 16ದಿನಗಳ ವಿದೇಶ ಪ್ರವಾಸಕ್ಕೆ ರಜೆ.

Related Posts

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.
ರಾಜಕೀಯ

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

by ಪ್ರತಿಧ್ವನಿ
April 12, 2026
0

ದಾವಣಗೆರೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಾಜಕೀಯ ಪೈಪೋಟಿಯಷ್ಟೇ ಅಲ್ಲದೆ, ಕಾಂಗ್ರೆಸ್ ಪಕ್ಷದ ಒಳಜಗಳದ ವೇದಿಕೆಯಾಗಿಯೂ ಪರಿಣಮಿಸಿದೆ. ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸಲು ಸಂಚು ರೂಪಿಸಿದ ಆರೋಪದ...

Read moreDetails
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
Next Post

ವರ್ಗಾವಣೆಗೊಂಡಿದ್ದ ಐಪಿಎಸ್ ಹೇಮಂತ್ ನಿಂಬಾಳ್ಕರ್ 16ದಿನಗಳ ವಿದೇಶ ಪ್ರವಾಸಕ್ಕೆ ರಜೆ.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada