ರಾಜ್ಯದಲ್ಲಿ ಕರೋನ ಹೆಚ್ಚುತ್ತಿರುವ ಸಂದರ್ಭದಲ್ಲಿ ರಾಜ್ಯದಲ್ಲಿ 1 ರಿಂದ 9ನೇ ತರಗತಿ ಪರೀಕ್ಷೆ ನಡೆಸೋದು ಕಷ್ಟ ಎಂಬುದಾಗಿ ತಜ್ಞರ ಅಭಿಪ್ರಯಾ ಪಟ್ಟ ಹಿನ್ನಲೆ, ಸಾರ್ವಜನಿಕ ಶಿಕ್ಷಣ ಇಲಾಖೆ, 1 ರಿಂದ 9ನೇ ತರಗತಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡುವುದಾಗಿ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕರೋನ ಎರಡನೇ ಅಲೆ ಹೆಚ್ಚಾಗುತ್ತಿದೆ. ಇದರ ನಡುವೇ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಕರೋನ ಸೊಂಕು ತಗಲುವ ಸಾದ್ಯತೆ ಹೆಚ್ಚಿದೆ ಎಂಬ ತಜ್ಞರು ಅಭಿಪ್ರಾಯ ಪಟ್ಟ ಆಧಾರದಲ್ಲಿ 1 ರಿಂದ 9ನೇ ತರಗತಿ ಎಲ್ಲಾ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಪಾಸ್ ಮಾಡುವುದಾಗಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಒಂದರಿಂದ ಏಳನೇ ತರಗತಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಮೇ 1ರಿಂದ ಜೂನ್ 6ರವರೆಗೆ ಬೇಸಿಗೆ ರಜೆ ಎಂದು ಘೋಷಿಸಲಾಗಿದೆ. ಜೂನ್ 15ರಿಂದ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ. ಹಾಗೆಯೇ, ಎಂಟು ಮತ್ತು ಒಂಬತ್ತನೇ ತರಗತಿಯ ಮಕ್ಕಳಿಗೆ ಮೇ 1ರಿಂದ ಜುಲೈ 14ರವರೆಗೆ ಬೇಸಿಗೆ ರಜೆ ಇದೆ. ಜುಲೈ 15ರಿಂದ ಮುಂದಿನ ಶೈಕ್ಷಣಿಕ ವರ್ಷ ಪ್ರಾರಂಭವಾಗುತ್ತದೆ ಎಂದು ತಿಳಿಸಲಾಗಿದೆ.
ಆದರೆ, ಈ ವೇಳಾಪಟ್ಟಿ ಕೇವಲ ತಾತ್ಕಾಲಿಕವಾಗಿದ್ದು, ಕೋವಿಡ್ ಸೋಂಕಿನ ಸ್ಥಿತಿಗತಿ ಅನುಸಾರ ಬದಲಾಗುವ ಸಾಧ್ಯತೆ ಇದೆ ಎಂದು ತಿಳಿಸಿರುವ ಶಿಕ್ಷಣ ಇಲಾಖೆ, ಜೂನ್ 21ರಿಂದ ಜುಲೈ 5ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿದೆ ಎಂದು ಸ್ಪಷ್ಟಪಡಿಸಿದೆ.
24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 9,618 ಜನರು ಸೇರಿದಂತೆ ರಾಜ್ಯಾಧ್ಯಂತ 15,785 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 11,76,850ಕ್ಕೆ ಏರಿಕೆಯಾಗಿದೆ. ಇವರಲ್ಲಿ ಇಂದು 7098 ಜನರು ಸೇರಿದಂತೆ ಇದುವರೆಗೆ 10,21,250 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ 1,42,084 ಸಕ್ರೀಯ ಸೋಂಕಿತರಿದ್ದಾರೆ. ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 97 ಜನರು ಸೇರಿದಂತೆ ರಾಜ್ಯಾಧ್ಯಂತ ಸೋಂಕಿತರಾದಂತ 146 ಜನರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇದರಿಂದಾಗಿ ಕಿಲ್ಲರ್ ಕೊರೋನಾಗೆ ಬಲಿಯಾದವರ ಸಂಖ್ಯೆ 13,497ಕ್ಕೆ ಗಣನೀಯವಾಗಿ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಿತು.