• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

‘ಬಿಜೆಪಿ-ಜೆಡಿಎಸ್ ಪಾದಯಾತ್ರೆಯಲ್ಲಿ ರೈತರಿಲ್ಲ, ನಿಖಿಲ್ ರಾಜಕೀಯ ಭವಿಷ್ಯಕ್ಕಾಗಿ ಹೋರಾಟ’: ಡಿ.ಕೆ ಶಿವಕುಮಾರ್‌

ಪ್ರತಿಧ್ವನಿ by ಪ್ರತಿಧ್ವನಿ
August 11, 2026
in Top Story
0
‘ಬಿಜೆಪಿ-ಜೆಡಿಎಸ್ ಪಾದಯಾತ್ರೆಯಲ್ಲಿ ರೈತರಿಲ್ಲ, ನಿಖಿಲ್ ರಾಜಕೀಯ ಭವಿಷ್ಯಕ್ಕಾಗಿ ಹೋರಾಟ’: ಡಿ.ಕೆ ಶಿವಕುಮಾರ್‌
Share on WhatsAppShare on FacebookShare on Telegram

ಬೆಂಗಳೂರು, ಆಗಸ್ಟ್ 10: ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಬಿಜೆಪಿ-ಜೆಡಿಎಸ್ ನಡೆಸುತ್ತಿರುವ ಪಾದಯಾತ್ರೆಯಲ್ಲಿ ನಿಜವಾದ ರೈತರು ಭಾಗವಹಿಸಿಲ್ಲ. ನಿಖಿಲ್ ಕುಮಾರಸ್ವಾಮಿ ಅವರ ರಾಜಕೀಯ ಭವಿಷ್ಯಕ್ಕಾಗಿ ಈ ಹೋರಾಟ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಪಿಸಿದರು.ಮಾಲೂರಿನಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಬಿಡದಿ ಟೌನ್‌ಶಿಪ್ ವಿರೋಧಿಸಿ ಬಿಜೆಪಿ-ಜೆಡಿಎಸ್ ಮಾಡುತ್ತಿರುವ ಪಾದಯಾತ್ರೆಯಲ್ಲಿ ಯಾವ ರೈತರೂ ಇಲ್ಲ. ತಮ್ಮ ಮನೆಯ ಹುಡುಗನ ರಾಜಕೀಯ ಭವಿಷ್ಯಕ್ಕಾಗಿ ಮಾಡುತ್ತಿರುವ ಹೋರಾಟ ಇದು” ಎಂದು ಟೀಕಿಸಿದರು.

ADVERTISEMENT
ಕೋಲಾರ ಜಿಲ್ಲೆಯ ರೈತರನ್ನು ಹಾಡಿಹೊಗಳಿದ ಸಿಎಂ ಡಿಕೆಶಿ..! | DK Shivakumar | Pratidhvani

ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ನಡೆಯುತ್ತಿರುವ ಪಾದಯಾತ್ರೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಭಾಗವಹಿಸಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, ಬೇರೆ ಕ್ಷೇತ್ರಗಳ ಪಕ್ಷದ ಕಾರ್ಯಕರ್ತರನ್ನು ಕರೆತಂದು ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮತ್ತು ಹೋರಾಟ ನಡೆಸುವುದು ಪ್ರತಿಪಕ್ಷಗಳ ಹಕ್ಕು. ಅದನ್ನು ತಾನು ಪ್ರಶ್ನಿಸುವುದಿಲ್ಲ ಎಂದರು.“ಅವರು ಮಾಡಿದ ಯೋಜನೆಯನ್ನೇ ನಾವು ಮುಂದುವರಿಸಿದ್ದೇವೆ. ಅವರು ₹25 ಲಕ್ಷ ಪರಿಹಾರ ನೀಡುತ್ತೇವೆ ಎಂದಿದ್ದರು. ನಾವು ₹2.50 ಕೋಟಿಯಿಂದ ₹3 ಕೋಟಿವರೆಗೆ ಪರಿಹಾರ ನೀಡುತ್ತಿದ್ದೇವೆ” ಎಂದು ಶಿವಕುಮಾರ್ ವಿವರಿಸಿದರು.

ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬಿಡದಿ ಟೌನ್‌ಶಿಪ್‌ ಯೋಜನೆಗೆ ಮರುಜೀವ ನೀಡಲಾಗುತ್ತದೆ #pratidhvani

ನೈಸ್ ಯೋಜನೆ ಮತ್ತು ಬಿಡದಿ ಟೌನ್‌ಶಿಪ್ ಯೋಜನೆ ಒಂದೇ ರೀತಿಯದ್ದಾಗಿವೆ ಎಂಬ ಎಚ್.ಡಿ. ಕುಮಾರಸ್ವಾಮಿ ಅವರ ಆರೋಪದ ಕುರಿತು ಪ್ರತಿಕ್ರಿಯಿಸಿದ ಡಿಕೆಶಿ, ಎರಡೂ ಯೋಜನೆಗಳಿಗೆ ಸಹಿ ಹಾಕಿದವರು ಅವರೇ ಎಂದು ಹೇಳಿದರು.

GD Harish Gowda : ರೈತರನ್ನ ಇಷ್ಟು ಕೆಟ್ಟದಾಗಿ ನಡೆಸಿಕೊಳ್ಳೋದು ಯಾವ ಸರ್ಕಾರಕ್ಕೂ ಒಳ್ಳೇದಲ್ಲ |TownShip Padayatra

“ನೈಸ್ ಯೋಜನೆ ಮಾಡಿದವರು ಯಾರು? ಅವರೇ ಮಾಡಿದ್ದು. ಆದರೆ ಅದರಿಂದ ಒಳ್ಳೆಯದಾಗಿದೆ. ರಸ್ತೆ ನಿರ್ಮಾಣವಾಗಿರುವುದರಿಂದ ಬೆಂಗಳೂರು ಇಂದು ಉಳಿದುಕೊಂಡಿದೆ. ಅವರು ಮಾಡಿದ್ದು ತಪ್ಪು ಎಂದು ನಾನು ಹೇಳುತ್ತಿಲ್ಲ. ಆದರೆ ಅದರಲ್ಲಿ ಅವರ ಸ್ವಾರ್ಥವಿದೆ. ಸಮಯ ಬಂದಾಗ ಎಲ್ಲವನ್ನೂ ಮಾತನಾಡುತ್ತೇನೆ” ಎಂದು ಹೇಳಿದರು. ಸಚಿವರಿಗೆ ಖಾತೆ ಹಂಚಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಈ ಕುರಿತು ಈಗಾಗಲೇ ದೆಹಲಿಯಲ್ಲಿ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಿರುವುದಾಗಿ ತಿಳಿಸಿದರು.

“ಶನಿವಾರ ಸಂಜೆ ದೆಹಲಿಯಲ್ಲಿ ವರಿಷ್ಠರೊಂದಿಗೆ ಖಾತೆ ಹಂಚಿಕೆ ಬಗ್ಗೆ ಚರ್ಚೆ ಮಾಡಿ ಬಂದಿದ್ದೇನೆ. ಬಹುಶಃ ಇಂದು ಸಂಜೆ ಈ ವಿಚಾರ ಬಗೆಹರಿಯಲಿದೆ” ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

Tags: Bidadi FarmersBidadi NewsBidadi TownshipBidadi Township ProjectBJP JDS PadayatraBJP JDS Protestbjp karnatakaDK Shivakumardk shivakumar newsFarmers protestHD Deve GowdaHD KumaraswamyJDS KarnatakaKarnataka cabinetKARNATAKA CMKarnataka GovernmentKarnataka PoliticsMinister Portfolio AllocationNICE ProjectNice RoadNikhil Kumaraswamy
Previous Post

ಗಂಗೂಲಿ ಕುಟುಂಬಕ್ಕೆ ಬೆದರಿಕೆ ಹಾಕಿದವರು ಯಾರು? ಪತ್ರದ ಜಾಡು ಹಿಡಿದ ಪೊಲೀಸರು

Next Post

ಖಾಲಿ ಸೈಟ್‌ ಸ್ವಚ್ಛಗೊಳಿಸಲು GBA ಡೆಡ್‌ಲೈನ್‌: ಇಲ್ಲದಿದ್ರೆ ಭಾರೀ ದಂಡ..!

Related Posts

ಎಸ್ಐಆರ್ ಪ್ರಕ್ರಿಯೆ: ಪ್ರಜಾಪ್ರಭುತ್ವ ಮತ್ತು ಸಮಾಜದ ಮೇಲೆ ಪರಿಣಾಮ
Top Story

ರಿಹಾಬ್ ಕೇಂದ್ರದ ರೋಗಿಗಳನ್ನು SIR ಪ್ರಕ್ರಿಯೆಯಲ್ಲಿ ಸೇರಿಸಿ: ಮೋಹನ್ ಕುಮಾರ್ ದಾನಪ್ಪ ಆಗ್ರಹ

by ಪ್ರತಿಧ್ವನಿ
August 13, 2026
0

ಬೆಂಗಳೂರು: ಮದ್ಯವ್ಯಸನ ಚಿಕಿತ್ಸಾ/ಪುನರ್ವಸತಿ ಕೇಂದ್ರಗಳಲ್ಲಿ (De-addiction & Rehabilitation Centres) ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಗಳನ್ನು ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸೇರಿಸಬೇಕು ಎಂದು ಕರ್ನಾಟಕ ರಾಜ್ಯ...

Read moreDetails
ವಾಲ್ಮೀಕಿ ಸಮಾಜದ ಬಗ್ಗೆ ಗೌರವ ಇದ್ರೆ ಬಿ.ನಾಗೇಂದ್ರ ರಾಜೀನಾಮೆ ಕೊಡಲಿ- ಬಿ.ವೈ ವಿಜಯೇಂದ್ರ

ವಾಲ್ಮೀಕಿ ಸಮಾಜದ ಬಗ್ಗೆ ಗೌರವ ಇದ್ರೆ ಬಿ.ನಾಗೇಂದ್ರ ರಾಜೀನಾಮೆ ಕೊಡಲಿ- ಬಿ.ವೈ ವಿಜಯೇಂದ್ರ

August 13, 2026
ಪ್ರದೋಷ್‌ ಮಾಫಿ ಸಾಕ್ಷಿ ಪ್ರಕರಣ: ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್‌

ಪ್ರದೋಷ್‌ ಮಾಫಿ ಸಾಕ್ಷಿ ಪ್ರಕರಣ: ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್‌

August 13, 2026
ವಿರೋಧ ಪಕ್ಷಗಳಿಗೆ ಮಾತಿನಲ್ಲೇ ಚಡಿ ಏಟು ಕೊಟ್ಟ ಪ್ರಿಯಾಂಕ್​ ಖರ್ಗೆ..

RSS ಕೇಂದ್ರ ಕಚೇರಿಯಿಂದಲೇ ‘ಹರ್ ಘರ್ ತಿರಂಗಾ’ ಆರಂಭಿಸಿ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಸವಾಲು

August 13, 2026
ಮೊಬೈಲ್ ಪತ್ತೆ ಕೇಸ್: ಪ್ರಜ್ವಲ್ ರೇವಣ್ಣ VIP ಸೆಲ್‌ನಿಂದ ಸಾಮಾನ್ಯ ಸೆಲ್‌ಗೆ ಶಿಫ್ಟ್

ಮೊಬೈಲ್ ಪತ್ತೆ ಕೇಸ್: ಪ್ರಜ್ವಲ್ ರೇವಣ್ಣ VIP ಸೆಲ್‌ನಿಂದ ಸಾಮಾನ್ಯ ಸೆಲ್‌ಗೆ ಶಿಫ್ಟ್

August 13, 2026
Next Post
ಖಾಲಿ ಸೈಟ್‌ ಸ್ವಚ್ಛಗೊಳಿಸಲು GBA ಡೆಡ್‌ಲೈನ್‌: ಇಲ್ಲದಿದ್ರೆ ಭಾರೀ ದಂಡ..!

ಖಾಲಿ ಸೈಟ್‌ ಸ್ವಚ್ಛಗೊಳಿಸಲು GBA ಡೆಡ್‌ಲೈನ್‌: ಇಲ್ಲದಿದ್ರೆ ಭಾರೀ ದಂಡ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada