ಮೈಸೂರು: ದರ್ಶನ್ (Actor Darshan) ಪ್ರರಕಣದಲ್ಲಿ ಪ್ರಭಾವ ಬೀರಲು ಯಾರೂ ಯತ್ನಿಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದಲ್ಲಿ ಪ್ರಭಾವ ಬೀರುವುದಕ್ಕೆ ನನ್ನ ಬಳಿ ಯಾರಾದರೂ ಬಂದಿದ್ದಾರೆ ಎನ್ನುವುದು ಸತ್ಯಕ್ಕೆ ದೂರವಾದ ಮಾತು. ಯಾರು ಕೂಡ ನನ್ನ ಹತ್ತಿರ ಬಂದಿಲ್ಲ. ಯಾವ ಪ್ರಭಾವವೂ ಬೀರಿಲ್ಲ ಎಂದು ಹೇಳಿದ್ದಾರೆ.
ದರ್ಶನ್ ಇದ್ದ ಠಾಣೆಗೆ ಶಾಮಿಯಾನ ಕಟ್ಟಿರುವ ವಿಚಾರವಾಗಿ, ಪೊಲೀಸರು ಏನು ಮಾಡಿದ್ದಾರೆ ಅದು ನನಗೆ ಗೊತ್ತಿಲ್ಲ. ಅವರು ನಮ್ಮನ್ನ ಕೇಳಿ ಏನನ್ನೂ ಮಾಡುವುದಿಲ್ಲ. ಸಾರ್ವಜನಿಕರಿಗೆ ಅದರಿಂದ ತೊಂದರೆಯಾಗಿರುವುದರ ಬಗ್ಗೆ ನನಗೆ ಮಾಹಿತಿ ಇಲ್ಲ. ಸಾರ್ವಜನಕರು ನನಗೆ ದೂರು ಕೊಟ್ಟಿಲ್ಲ ಎಂದು ಹೇಳಿದ್ದಾರೆ.
ಯಡಿಯೂರಪ್ಪ ಪ್ರಕರಣದಲ್ಲಿ ಕೋರ್ಟ್‌ನ ಆದೇಶದ ಬಗ್ಗೆ ನಾನು ಮಾತನಾಡುವುದಿಲ್ಲ. ಕಾಂಗ್ರೆಸ್ ಯಾವತ್ತೂ ದ್ವೇಷದ ರಾಜಕಾರಣ ಮಾಡಲ್ಲ. ಕಾನೂನು ರೀತಿ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ. ನಾವು ಗ್ಯಾರಂಟಿ ಯೋಜನೆ ಜಾರಿಗೆ ತಂದಿದ್ದೇವೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲುವುದಿಲ್ಲ. ವೋಟಿಗಾಗಿ ನಾವು ಅದನ್ನ ಜಾರಿಗೆ ತಂದಿಲ್ಲ. ಬಡವರಿಗಾಗಿ ನಾವು ಗ್ಯಾರಂಟಿ ಯೋಜನೆ ಜಾರಿಗೆ ತಂದಿದ್ದೇವೆ ಎಂದು ಹೇಳಿದ್ದಾರೆ.