• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಯಾರು ಏನೇ ಬಯ್ಯಲಿ ನೀರಿನ ದರ ಏರಿಕೆ ಖಚಿತ: ಡಿಸಿಎಂ ಡಿ.ಕೆ ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
August 22, 2024
in Top Story, ಇತರೆ / Others, ಕರ್ನಾಟಕ
0
ಯಾರು ಏನೇ ಬಯ್ಯಲಿ ನೀರಿನ ದರ ಏರಿಕೆ ಖಚಿತ: ಡಿಸಿಎಂ ಡಿ.ಕೆ ಶಿವಕುಮಾರ್
Share on WhatsAppShare on FacebookShare on Telegram

ಬೆಂಗಳೂರು: ಸಾರ್ವಜನಿಕರು, ಮಾಧ್ಯಮಗಳು ಏನೇ ಬಯ್ಯಲಿ, ವಿರೋಧ ಪಕ್ಷಗಳು ವಿರೋಧಿಸಿದರು ನೀರಿನ ದರ ಏರಿಕೆ ಮಾಡುವುದು ಖಚಿತ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಗುರುವಾರ ಹೇಳಿದ್ದಾರೆ.ಡಿಕೆ.ಶಿವಕುಮಾರ್ ಅವರು ಇಂದು ವಿಧಾನನಸೌಧದ ಮುಂಭಾಗದಲ್ಲಿ 110 ಹಳ್ಳಿಗೆ ಕಾವೇರಿ ಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಿದರು.

ADVERTISEMENT

ಜೊತೆಗೆ ಮಳೆ ನೀರು ಕೊಯ್ಲು ಜಾಗೃತಿ ಅಭಿಯಾನ ಹಾಗೂ ವರುಣಮಿತ್ರ ತರಬೇತಿ ಹಾಗೂ ಯುನೈಟೆಡ್ ನೇಷನ್ ಇನೋವೇಷನ್ ಪ್ರಾಜೆಕ್ಟ್ ಫಾರ್ ವಾಟರ್ ಸೆಕ್ಯುರಿಟಿ ಇನ್ ಬೆಂಗಳೂರು ಸಿಟಿ ಯೋಜನೆ ಯೋಜನೆಗಳಿಗೂ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ವಾಟರ್-ಪವರ್ ಈ ಎರಡು ಪ್ರಮುಖವಾಗಿದ್ದು, ಎರಡು ಇಲಾಖೆ ನಾನು ನೋಡ್ತಾ ಇದ್ದೇನೆ. ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಅವಧಿಯಲ್ಲಿ ನಾನು ನಗರಾಭಿವೃದ್ಧಿ ಸಚಿವನಾಗಿದ್ದಾಗ ನೀರು ಸರಬರಾಜು ಖಾಸಗೀಕರಣ ಚರ್ಚೆ ನಡೆದಿತ್ತು. ನಮ್ಮ ರಾಜ್ಯದಲ್ಲಿ ಇದು ಕಷ್ಟವಾಗಲಿದೆ ಎಂದು ಮಾಹಿತಿ ನೀಡಿದ್ದೆ. ಇದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ನಂತರ ಯೋಜನೆ ಕೈ ಬಿಟ್ಟಿದ್ದೆವು. ಈಗ ನಾನು ಸಚಿವನಾದ ಮೇಲೆ ಮತ್ತೆ ಕೆಲವರು ಖಾಸಗೀಕರಣದ ಬಗ್ಗೆ ಬಂದು ಮಾತಾಡಿದ್ದರು. ನಾನು ಇದು ಆಗಲ್ಲ ಎಂದು ಹೇಳಿದ್ದೇನೆಂದು ಹೇಳಿದರು.

ನೀರಿನ ದರ ಸಾಕಷ್ಟು ವರ್ಷದಿಂದ ಏರಿಸಿಲ್ಲ. 1.40 ಕೋಟಿ ಜನಸಂಖ್ಯೆ ಬೆಂಗಳೂರಿನಲ್ಲಿ ಇದೆ‌. ಮೇಕೆದಾಟುವಿನ ಮೇಲೆ ಭರವಸೆ ಇದೆ‌. ಆದಷ್ಟು ಬೇಗ ಅದು ಆಗಲಿದೆ. ಶರಾವತಿ ಕುಡಿಯುವ ನೀರಿನ ಯೋಜನೆಯು ಇದೆ. ಅದಕ್ಕೆ ಆ ಭಾಗದಲ್ಲಿ ವಿರೋಧವಿದೆ‌. ನೀರಾವರಿ ಯೋಜನೆಯಲ್ಲಿ ಹೊಸ ಬಿಲ್ ತಂದಿದ್ದೇವೆ. ನೀರಿನ ಕಾಲುವೆಗಳ ಅಕ್ಕಪಕ್ಕ ಅರ್ಧ ಕಿಮೀ ಯಾರು ಬೋರ್ ವೆಲ್ ಹಾಕುವಂತಿಲ್ಲ. ಯಾರು ಕಾಲುವೆಗಳಿಂದ ನೇರವಾಗಿ ನೀರು ಟ್ಯಾಪ್ ಮಾಡುವಂತಿಲ್ಲ. ಹೊಸ ಕಾನೂನು ಬಂದಿದೆ. ರಾಜ್ಯಪಾಲರು ಇದಕ್ಕೆ ಸಹಿ ಹಾಕಿದ್ದಾರೆ ಎಂದು ತಿಳಿಸಿದರು. ಈ ಮೂಲಕ ಸದ್ಯದಲ್ಲೇ ನೀರಿನ ಬೆಲೆ ಹೆಚ್ಚಳದ ಬಗ್ಗೆ ಡಿಸಿಎಂ ಸೂಚನೆ ಕೊಟ್ಟರು.

ಇದೇ ವೇಳೆ ನೀರಿನ ದರದ ಬಗ್ಗೆ ಮಾಹಿತಿಯನ್ನು ನೀಡುವಂತೆ ಬಿಡಬ್ಲ್ಯೂಎಸ್‍ಎಸ್‍ಬಿ ಡಿಸಿಎಂ ಸೂಚನೆ ನೀಡಿದರು. ನೀರಿಗೆ ಎಷ್ಟು ಖರ್ಚಾಗುತ್ತಿದೆ. ಎಷ್ಟು ಜನ ನೀರಿನ ಬಿಲ್ ಕಟ್ಟಿಲ್ಲ, ಎಷ್ಟು ವರ್ಷಗಳಿಂದ ನೀರಿನ ದರ ಹೆಚ್ಚಳ ಮಾಡಿಲ್ಲ ಎಲ್ಲಾ ಮಾಹಿತಿ ಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ವಿಧಾನಸೌಧದಲ್ಲಿ ಇಂದು ಯುನೈಟೆಡ್ ನೇಷನ್ಸ್ ಇನೋವೇಷನ್ಸ್ ಪ್ರಾಜೆಕ್ಟ್‌ ಫಾ‌ರ್ ವಾಟ‌ರ್ ಸೆಕ್ಯೂರಿಟಿ ಇನ್ ಬೆಂಗಳೂರು ಯೋಜನೆ ಹಾಗೂ ಮಳೆನೀರು ಕೊಯ್ಲು ಜಾಗೃತಿ ಅಭಿಯಾನ, ವರುಣಮಿತ್ರ ತರಬೇತಿ ಕಾರ್ಯಕ್ರಮ ಮತ್ತು 110 ಹಳ್ಳಿಗಳಿಗೆ ಕಾವೇರಿ ಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದೆ.

ನೀರು ಮತ್ತು ಇಂಧನ ಈ ಎರಡು ಪ್ರಮುಖವಾದ ಇಲಾಖೆಗಳು. ಎರಡು… pic.twitter.com/3MtazFLCLp

— DK Shivakumar (@DKShivakumar) August 22, 2024

ಜಲಮಂಡಳಿ ಉಳಿಸಬೇಕು ಅಂದ್ರೆ ನೀರಿನ ಬಿಲ್ ಏರಿಕೆ ಅನಿವಾರ್ಯ. ಇದರ ಬಗ್ಗೆ ಬಿಡಬ್ಲ್ಯೂಎಸ್‍ಎಸ್‍ಬಿ ಜನರಿಗೆ ಜಾಗೃತಿ‌ ಮೂಡಿಸಬೇಕು. ನೀರಿದ ದರ 8-9 ವರ್ಷದಿಂದ ಏರಿಕೆ ಮಾಡಿಲ್ಲ. ನೀರಿನ‌ ದರ ಹೆಚ್ಚಿಸಬೇಕು, ಅಂತರ್ಜಲ ಹೆಚ್ಚಳ ಆಗ್ಬೇಕು. ಮಂಡಳಿ ನಷ್ಟದಲ್ಲಿ ನಡೆಯುತ್ತಿದೆ. ಸಂಬಳ ಕೊಡೋಕೆ‌ ಆಗುತ್ತಿಲ್ಲ. ಮಂಡಳಿಯು ವಿದ್ಯುತ್ ದರವೂ ಪಾವತಿ ಮಾಡಲು ಆಗುತ್ತಿಲ್ಲ. ಕೆಲವು ಸೆಕ್ಷನ್ ಗೆ ನೋಡಿ ದರ ನಿಗದಿ ಮಾಡಬೇಕು. ಎಷ್ಟು ದರ ಏರಿಕೆ ಮಾಡ್ಬೇಕು ಅಂತ ನಿರ್ಧಾರ ಮಾಡಿಲ್ಲ. ಕಮಿಟಿ‌ ಸಭೆ ಮತ್ತು ಕ್ಯಾಬಿನೆಟ್ ನಲ್ಲಿ ತೀರ್ಮಾನ ಮಾಡುತ್ತೇವೆ ಎಂದರು.

Tags: CM Siddaramaiah‌Congress PartyDCM DK Shivakumar
Previous Post

ಸಿಬಿಐ, ಲೋಕಾಯುಕ್ತದಿಂದ ಸ್ನೇಹಿತರು, ಕುಟುಂಬಸ್ಥರಿಗೆ ಕಿರುಕುಳ:ಡಿಸಿಎಂ ಡಿ.ಕೆ.ಶಿವಕುಮಾರ್

Next Post

ನೀರಿನ ದರ ಏರಿಸಿಯೇ ಏರಿಸುತ್ತೇವೆ: ಡಿಕೆಶಿ..!

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post

ನೀರಿನ ದರ ಏರಿಸಿಯೇ ಏರಿಸುತ್ತೇವೆ: ಡಿಕೆಶಿ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada