• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯದಲ್ಲಿ ಈವರೆಗೆ ಮಂಕಿ ಫಾಕ್ಸ್‌ ಪ್ರಕರಣ ಕಂಡುಬಂದಿಲ್ಲ : ಸಚಿವ ಡಾ.ಕೆ. ಸುಧಾಕರ್‌

ಪ್ರತಿಧ್ವನಿ by ಪ್ರತಿಧ್ವನಿ
August 6, 2022
in ಕರ್ನಾಟಕ
0
ಈ ನೆಲದ ಕಾನೂನು ಗೌರವಿಸಲೇಬೇಕು,  ಪ್ರತಿಭಟನೆ ಹೆಸರಿನಲ್ಲಿ ದಾಂಧಲೆ ಸರಿಯಲ್ಲ : ಸಚಿವ ಸುಧಾಕರ್‌
Share on WhatsAppShare on FacebookShare on Telegram

ರಾಜ್ಯದಲ್ಲಿ ಈವರೆಗೆ ಮಂಕಿ ಫಾಕ್ಸ್‌ ಪ್ರಕರಣ ಕಂಡುಬಂದಿಲ್ಲ. ಆರಂಭದಿಂದಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಸ್ಪಷ್ಟಪಡಿಸಿದರು.

ADVERTISEMENT

ವಿಶ್ವ ವ್ಯಾಸ್ಕ್ಯುಲರ್‌ ದಿನ ಪ್ರಯುಕ್ತ, ವ್ಯಾಸ್ಕ್ಯುಲರ್‌ ಸರ್ಜನ್ಸ್‌ ಅಸೋಸಿಯೇಶನ್‌ ವತಿಯಿಂದ ಆಯೋಜಿಸಿದ್ದ, ಟೌನ್‌ಹಾಲ್‌ನಿಂದ ಕಂಠೀರವ ಸ್ಟೇಡಿಯಂವರೆಗಿನ ಜಾಗೃತಿ ನಡಿಗೆ ಕಾರ್ಯಕ್ರಮದಲ್ಲಿ ಸಚಿವರು ಪಾಲ್ಗೊಂಡರು. ಬಳಿಕ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಮಂಕಿ ಫಾಕ್ಸ್‌ ಹಿನ್ನೆಲೆಯಲ್ಲಿ ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಆಸ್ಪತ್ರೆಗಳಲ್ಲೂ ಚಿಕಿತ್ಸೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಂತಾರಾಷ್ಟ್ರೀಯ ಪ್ರಯಾಣಿಕರು ರಾಜ್ಯಕ್ಕೆ ಬಂದಾಗ ಮಾರ್ಗಸೂಚಿಯನ್ನು ಪಾಲಿಸಬೇಕು. ಇಥಿಯೋಪಿಯಾದಿಂದ ಬಂದಿದ್ದ ವ್ಯಕ್ತಿಯೊಬ್ಬರಿಗೆ ಮಂಕಿ ಫಾಕ್ಸ್‌ ಇರುವ ಅನುಮಾನದ ಮೇಲೆ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆದರೆ ಅದು ಮಂಕಿ ಫಾಕ್ಸ್‌ ಅಲ್ಲ, ಸ್ಮಾಲ್‌ ಫಾಕ್ಸ್‌ ಎಂದು ದೃಢಪಟ್ಟಿದೆ ಎಂದರು.

ವಿಮಾನ ನಿಲ್ದಾಣ ಹಾಗೂ ಬಂದರುಗಳಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು 24 ಗಂಟೆಯೂ ಪಾಳಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮೂರು ಬಗೆಯ ಪಾಳಿಯನ್ನು ನಿಗದಿ ಮಾಡಲಾಗಿದೆ. ಬೇರೆ ರಾಜ್ಯಗಳಲ್ಲೂ ಈ ಪ್ರಕರಣ ಕಂಡುಬಂದರೂ, ರಾಜ್ಯದಲ್ಲಿ ಈವರೆಗೆ ಪ್ರಕರಣ ಕಂಡುಬಂದಿಲ್ಲ. ಸ್ಕಿನ್‌ ರಾಶಸ್‌ ಸೇರಿದಂತೆ ಹಲವಾರು ಲಕ್ಷಣಗಳಿಂದ ಮಂಕಿ ಫಾಕ್ಸ್‌ ಗೊತ್ತಾಗುತ್ತದೆ. ಆದರೂ ಕೋವಿಡ್‌ನಂತೆಯೇ ಇದು ಕೂಡ ಮೂರು ನಾಲ್ಕು ದಿನಗಳಾದ ನಂತರ ಪತ್ತೆಯಾಗುತ್ತದೆ. ಇದು ಒಂದು ಚಿಂತಿಸುವ ವಿಷಯ ಎಂದರು.


ಅರಿವು ಅಗತ್ಯ

ದೇಶದಲ್ಲಿ ವ್ಯಾಸ್ಕ್ಯುಲರ್‌ ತಜ್ಞರು ಬಹಳ ಕಡಿಮೆ ಇದ್ದಾರೆ. ಈ ಆರೋಗ್ಯದ ಸಮಸ್ಯೆ ಬಗ್ಗೆ ನಗರ ಪ್ರದೇಶಗಳಲ್ಲಿ ಹೆಚ್ಚು ಜಾಗೃತಿ ಮೂಡಿಸಬೇಕಿದೆ. ವ್ಯಾಸ್ಕ್ಯುಲರ್‌ ಸಮಸ್ಯೆಗಳು ಬೇರೆ ಅನಾರೋಗ್ಯಕ್ಕೂ ದಾರಿ ಮಾಡಿಕೊಡುತ್ತವೆ. ಯುವಜನರಲ್ಲಿ ಹಾಗೂ ವೃತ್ತಿಪರರಿಗೆ ಈ ವಿಚಾರದಲ್ಲಿ ನೆರವಾಗಬೇಕಿದೆ. ಟ್ರಾಫಿಕ್‌ ಪೊಲೀಸರು ಸಾಮಾನ್ಯ ಜನರಿಗಿಂತ ಹೆಚ್ಚು ಕಾಲ ನಿಂತುಕೊಳ್ಳುತ್ತಾರೆ. ಹಾಗೆಯೇ ಶಿಕ್ಷಕರು, ಸರ್ಜನ್‌ಗಳು ಮತ್ತಿತರರು ಕೂಡ ಹೆಚ್ಚು ಸಮಯ ನಿಂತುಕೊಳ್ಳುತ್ತಾರೆ. ಇದರಿಂದಾಗಿ ವ್ಯಾಸ್ಕ್ಯುಲರ್‌ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಜಗತ್ತಿನಲ್ಲಿ ಪ್ರತಿ 6 ಸೆಕೆಂಡ್‌ಗೆ ಒಬ್ಬ ವ್ಯಕ್ತಿ ಕಾಲನ್ನು ಕಳೆದುಕೊಳ್ಳುವ ಸ್ಥಿತಿ ಇದೆ ಎಂದು ಅಂದಾಜಿಸಲಾಗಿದೆ. ರಕ್ತನಾಳದ ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಬೇಕು. ಲಘು ವ್ಯಾಯಾಮವನ್ನು ಮಾಡುವಂತೆ ಎಲ್ಲರಿಗೂ ಉತ್ತೇಜಿಸಬೇಕು. ವಿಶೇಷವಾಗಿ ಮಧುಮೇಹಿಗಳು ಈ ಬಗ್ಗೆ ಗಮನಹರಿಸಬೇಕು ಎಂದರು.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಉಪರಾಷ್ಟ್ರಪತಿ ಚುನಾವಣೆಯ ಮತದಾನ ಆರಂಭ!

Next Post

ಸುಪ್ರೀಂಕೋರ್ಟ್ ಎದುರು ಬೆಂಕಿ ಹಚ್ಚಿಕೊಂಡಿದ್ದ ಸಂತ್ರಸ್ತೆ‌ : ಅತ್ಯಾಚಾರ ಪ್ರಕರಣದಲ್ಲಿ BSP ಸಂಸದ ಖುಲಾಸೆ!

Related Posts

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ
Top Story

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

by ಪ್ರತಿಧ್ವನಿ
August 28, 2026
0

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಬಿ.ನಾಗೇಂದ್ರ ಇಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. https://youtu.be/D9zRrwpvJbo?si=Vddh0WKRsWbVVQ6U ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಕ್ಷಕ್ಕೆ...

Read moreDetails
ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

August 28, 2026
OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

August 28, 2026
ರೈಲ್ವೆ ಚತುಷ್ಪಥ ಯೋಜನೆಯಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ: ಸಚಿವ ಎಂ.ಬಿ ಪಾಟೀಲ್‌ ಖಂಡನೆ

ರೈಲ್ವೆ ಚತುಷ್ಪಥ ಯೋಜನೆಯಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ: ಸಚಿವ ಎಂ.ಬಿ ಪಾಟೀಲ್‌ ಖಂಡನೆ

August 28, 2026
ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ರಿಷಬ್ ಶೆಟ್ಟಿ: ಕನ್ನಡದ ತಾರೆಗೆ ಜಾಗತಿಕ ಮನ್ನಣೆ

ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ರಿಷಬ್ ಶೆಟ್ಟಿ: ಕನ್ನಡದ ತಾರೆಗೆ ಜಾಗತಿಕ ಮನ್ನಣೆ

August 28, 2026
Next Post
ಸುಪ್ರೀಂಕೋರ್ಟ್ ಎದುರು ಬೆಂಕಿ ಹಚ್ಚಿಕೊಂಡಿದ್ದ ಸಂತ್ರಸ್ತೆ‌ : ಅತ್ಯಾಚಾರ ಪ್ರಕರಣದಲ್ಲಿ BSP ಸಂಸದ ಖುಲಾಸೆ!

ಸುಪ್ರೀಂಕೋರ್ಟ್ ಎದುರು ಬೆಂಕಿ ಹಚ್ಚಿಕೊಂಡಿದ್ದ ಸಂತ್ರಸ್ತೆ‌ : ಅತ್ಯಾಚಾರ ಪ್ರಕರಣದಲ್ಲಿ BSP ಸಂಸದ ಖುಲಾಸೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada