• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶಾಸಕ ಸುನೀಲ್ ಕುಮಾರ್ ಅವರಿಂದ ನೈತಿಕ ಪಾಠ ಕಲಿಬೇಕಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು

ಪ್ರತಿಧ್ವನಿ by ಪ್ರತಿಧ್ವನಿ
June 21, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram
ADVERTISEMENT
  • ಉಡುಪಿ: ಶಾಸಕ ಸುನೀಲ್ ಕುಮಾರ್ ಅವರಿಂದ ನೈತಿಕ ಪಾಠ ಕಲಿಯಬೇಕಿಲ್ಲ.‌ ನೈತಿಕ ಅಧಿಕಾರ ಎಂದರೇನು?. ಅವರು ಮೊದಲು ನೈತಿಕತೆಯ ಬಗ್ಗೆ ತಿಳಿದುಕೊಂಡು ಮಾತನಾಡಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು ನೀಡಿದ್ದಾರೆ.

ಚಕ್ರವರ್ತಿ ಸೂಲಿಬೆಲೆ ಬಗ್ಗೆ ಮಾತನಾಡುವ ಸಚಿವರಿಗೆ ನೈತಿಕತೆ ಇಲ್ಲ ಎಂಬ ಸುನೀಲ್ ಕುಮಾರ್ ಅವರ ಆರೋಪಕ್ಕೆ ಶನಿವಾರ ಪ್ರತಿಕ್ರಿಯಿಸಿದ ಸಚಿವರು, ಉಸ್ತುವಾರಿ ಸಚಿವೆಗೆ ನೈತಿಕತೆ ಇಲ್ಲ ಅಂದರೆ ಏನು. ಸುನೀಲ್ ಕುಮಾರ್ ಬಹಳ ಚಂದ ಮಾತುಗಾರರು, ಅವರನ್ನು ಅವರೇ ಬುದ್ಧಿವಂತ, ಸರ್ವಜ್ಞ ಎಂದು ತಿಳಿದುಕೊಂಡಿದ್ದಾರೆ. ಬೇರೆಯವರನ್ನು ದಡ್ಡರು ಎಂದು ತಿಳಿದುಕೊಂಡಿದ್ದಾರೆ ಎಂದು ಕಿಡಿ ಕಾರಿದರು‌.

HD Kumaraswamy: ಉಕ್ಕು ಕಾರ್ಖಾನೆಯಲ್ಲಿ ಯೋಗದಿನ ಆಚರಿಸಿದ ಕೇಂದ್ರ ಸಚಿವ HDK..!

ಸಚಿವರು ತಮ್ಮ ಇಲಾಖೆ ವ್ಯಾಪ್ತಿಗೆ
ಎಷ್ಟು ಅಂಗನವಾಡಿಗಳಿವೆ ಲೆಕ್ಕ ಕೊಡಿ ಎಂದು ಸುನೀಲ್ ಕುಮಾರ್ ಕೇಳಿದ್ದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ರಾಜ್ಯದಲ್ಲಿ ಸುಮಾರು 69,000 ಅಂಗನವಾಡಿ ಕಟ್ಟಡ ಇದೆ, 12,000 ಕಟ್ಟಡ ಬಾಡಿಗೆಯಲ್ಲಿದೆ. ಸುನೀಲ್ ಕುಮಾರ್ ಬಗ್ಗೆ ನಾನು ಎಲ್ಲಾ ಮಾತನಾಡಬೇಕಾ?. ನನ್ನ ಇಲಾಖೆ ಬಗ್ಗೆ ಕೇಳ್ತೀರಾ? ಬನ್ನಿ ನಿಮಗೆ ನಾನು ಎಲ್ಲಾ ಡೀಟೇಲ್ಸ್ ಕೊಡುತ್ತೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸವಾಲು ಹಾಕಿದರು.

ರಾಜ್ಯದಲ್ಲಿ ಅಂಗನವಾಡಿಗಳು ಎಷ್ಟಿವೆ. ಕಾರ್ಯಕರ್ತರು ಎಷ್ಟಿದ್ದಾರೆ ಎಲ್ಲಾ ನನಗೆ ಗೊತ್ತು. ಬಾಡಿಗೆ ಕಟ್ಟಡ ಎಷ್ಟು? ಸ್ವಂತ ಕಟ್ಟಡ ಎಷ್ಟು? ಹಳ್ಳಿಯಲ್ಲಿ ಎಷ್ಟಿದೆ! ಪೇಟೆಯಲ್ಲಿ ಎಷ್ಟಿದೆ ಎಷ್ಟು ಸೋರುತ್ತಿದೆ ಎಲ್ಲವೂ ಗೊತ್ತು. ನಿಮ್ಮ ಕ್ಷೇತ್ರದಲ್ಲಿ ಎಷ್ಟು ಇದೆ ಅನ್ನೋದು ಗೊತ್ತು ಎಂದರು‌.

  • ಪ್ರತಿಭಟನೆ ಸಂವಿಧಾನ ಬದ್ಧ ಹಕ್ಕು

ಪ್ರತಿಭಟನೆಗೆ ಪ್ರಾಮುಖ್ಯತೆ ಇದೆ, ವಿರೋಧ ಪಕ್ಷಕ್ಕೆ ಮಾಡಲು ಬೇರೆ ಕೆಲಸ ಇಲ್ಲ ಪ್ರತಿಭಟನೆ ಮಾಡಲಿ, ಜಿ ಎಸ್ ಟಿ ತರಲು ಆಗಿಲ್ಲ. ಅಭಿವೃದ್ಧಿಯಲ್ಲಿ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಅದರ ವಿರುದ್ಧ ಪ್ರತಿಭಟನೆ ಮಾಡಲಿ, ಅಸಮರ್ಥ ಸಂಸದರ ಬಗ್ಗೆ ಪ್ರತಿಭಟನೆ ಮಾಡಲಿ ಎಂದರು.

ನರೇಗಾ ಹಣ ಬಿಡುಗಡೆಯಾಗಿಲ್ಲ, ಅದರ ಬಗ್ಗೆ ಪ್ರತಿಭಟನೆ ಮಾಡಲು ಸಾಧ್ಯವೇ, ಜನರ ದಿಕ್ಕು ತಪ್ಪಿಸುವ ಕೆಲಸ ಬಿಜೆಪಿ ಮಾಡುತ್ತಿದೆ. ಪಕ್ಷದ ಆಂತರಿಕ ಕಚ್ಚಾಟಗಳನ್ನು ಮುಚ್ಚಿಹಾಕಲು ಪ್ರತಿಭಟನೆ ಮಾಡುತ್ತಿದ್ದಾರೆ. ಇದು ಬಿಜೆಪಿಯ ಡ್ರಾಮಾ.‌ ಬಿಜೆಪಿಯ ಕಾರ್ಯಕರ್ತರೇ ಬೇಸತ್ತು ಹೋಗಿದ್ದಾರೆ. ಹೋದಲ್ಲಿ ಬಂದಲ್ಲಿ ಬಿಜೆಪಿ ಕಾರ್ಯಕರ್ತರು ತಮ್ಮ ನಾಯಕರ ವಿರುದ್ಧ ಅಸಮಾಧಾನ ಹೊರಹಾಕುತ್ತಿದ್ದಾರೆ.‌ ಜನರ‌ ದಿಕ್ಕು ತಪ್ಪಿಸಲು ಹೋರಾಟ, ಪ್ರತಿಭಟನೆ ಮಾಡಿ, ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಸಚಿವರು ಆರೋಪಿಸಿದರು.

  • ಸರ್ಕಾರ ಯಾರನ್ನು ಟಾರ್ಗೆಟ್ ಮಾಡುತ್ತಿಲ್ಲ

ಹಿಂದೂ ಜಾಗರಣ ವೇದಿಕೆ ಮುಖಂಡ ಶ್ರೀಕಾಂತ್ ಶೆಟ್ಟಿ ಗೆ ಬಾಗಲಕೋಟೆಗೆ ಮೂರು ತಿಂಗಳು ಬ್ಯಾನ್ ಮಾಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಯಾವ ವಾಗ್ಮಿಗಳನ್ನು, ಭಾಷಣಕಾರರನ್ನು ನಾವು ಟಾರ್ಗೆಟ್ ಮಾಡುತ್ತಿಲ್ಲ‌. ಯಾವುದೇ ವಿಷಯಗಳು ವಿಷಯಧಾರಿತವಾಗಿರಬೇಕು, ವಿಷಯಾಂತರ ಆಗಬಾರದು ಎಂದರು‌.

ಸಮಾಜದ ಕೋಮು ಸೌಹಾರ್ದತೆ ಕೆಡಿಸಬಾರದು ಹಿತಾಸಕ್ತಿ ಕಾಪಾಡಬೇಕು. ವಿಷ ಬೀಜ ಬಿತ್ತಿ ಸಮಾಜ ಒಡೆಯಬಾರದು. ಅಂತವರ ವಿರುದ್ಧ ಕಾನೂನು ಕ್ರಮ ಆಗುತ್ತದೆ. ಶ್ರೀಕಾಂತ ಶೆಟ್ಟಿ ಹಿಂದಿನ ಭಾಷಣಗಳನ್ನು ತೆಗೆದು ನೋಡಬೇಕು. ಆಗ ಎಲ್ಲ ವಿಚಾರ ಅರಿವಾಗುತ್ತೆ ಎಂದು ಹೇಳಿದರು ‌

Public Relation on BBMP : ಸರ್ಕಾರ ಬಿಬಿಎಂಪಿ ಎರಡು ಒಂದೇ ಕೆಲ್ಸ ಮಾಡೋಲ್ಲ #pratidhvani #publicreaction #bbmp
Tags: Gruha Lakshmi SchemeLakshmi hebbalkarlakshmi hebbalkar brotherlakshmi hebbalkar car accidentlakshmi hebbalkar car driverlakshmi hebbalkar cricketlakshmi hebbalkar interviewlakshmi hebbalkar latest newslakshmi hebbalkar livelakshmi hebbalkar newslakshmi hebbalkar news todaylakshmi hebbalkar press meet on gruha lakshmilakshmi hebbalkar speachlakshmi hebbalkar speechlakshmi hebbalkar today newslakshmi hebbalkharMinisterMLA sunil kumarUdupi
Previous Post

ಪವರ್ ಸ್ಟಾರ್ ಪವನ್ ಕಲ್ಯಾಣ್ ಫ್ಯಾನ್ಸ್‌ಗೆ ಗುಡ್ ನ್ಯೂಸ್..’ಹರಿ ಹರ ವೀರ ಮಲ್ಲು ರಿಲೀಸ್ ಗೆ ರೆಡಿ..

Next Post

ಯೋಗಕ್ಕೆ ಸಾವನ್ನು ಜಯಿಸುವ ಶಕ್ತಿ ಇದೆ

Related Posts

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್
Top Story

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

by ಪ್ರತಿಧ್ವನಿ
April 17, 2026
0

ವಿಶೇಷ ಲೇಖನ : ನಾ ದಿವಾಕರ (ಕೃಪೆ : ಭೀಮವಾದ ವಿಶೇಷ ಸಂಚಿಕೆ ಏಪ್ರಿಲ್‌ 2026) ಡಾ. ಬಿ.ಆರ್. ಅಂಬೇಡ್ಕರ್‌ ಕರ್ನಾಟಕಕ್ಕೆ ಭೇಟಿ ನೀಡಿದ ಚಾರಿತ್ರಿಕ ಸಂದರ್ಭಗಳನ್ನು...

Read moreDetails
ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

April 17, 2026
ಲಾಹೋರ್‌ನಲ್ಲಿ ಸ್ಫೋಟಕ ಬೆಳವಣಿಗೆ: ಲಷ್ಕರ್ ಸಹ-ಸ್ಥಾಪಕನಿಗೆ ಗುಂಡೇಟು

ಲಾಹೋರ್‌ನಲ್ಲಿ ಸ್ಫೋಟಕ ಬೆಳವಣಿಗೆ: ಲಷ್ಕರ್ ಸಹ-ಸ್ಥಾಪಕನಿಗೆ ಗುಂಡೇಟು

April 17, 2026
ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

April 16, 2026
114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

April 16, 2026
Next Post
ಯೋಗಕ್ಕೆ ಸಾವನ್ನು ಜಯಿಸುವ ಶಕ್ತಿ ಇದೆ

ಯೋಗಕ್ಕೆ ಸಾವನ್ನು ಜಯಿಸುವ ಶಕ್ತಿ ಇದೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada