• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಹುಟ್ಟಿನಿಂದ ಯಾರೂ ಮೇಧಾವಿಗಳಲ್ಲ : ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
October 29, 2023
in Top Story, ಕರ್ನಾಟಕ, ರಾಜಕೀಯ
0
ಹುಟ್ಟಿನಿಂದ ಯಾರೂ ಮೇಧಾವಿಗಳಲ್ಲ : ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ಬೆಂಗಳೂರು: ಹುಟ್ಟಿನಿಂದ ಯಾರೂ ಮೇಧಾವಿಗಳಲ್ಲ. ಅವಕಾಶ ಸಿಕ್ಕರೆ ಎಲ್ಲರೂ ಮೇಧಾವಿಗಳಾಗ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಕಾಳಿದಾಸ ಹೆಲ್ತ್ ಆಂಡ್ ಎಜುಕೇಷನ್ ಟ್ರಸ್ಟ್ ಮತ್ತು ಅಹಿಲ್ಯಾ ಫೌಂಡೇಷನ್ ಹಮ್ಮಿಕೊಂಡಿದ್ದ “ಪ್ರೇರಣಾ ಸಮಾರಂಭ” ವನ್ನು ಉದ್ಘಾಟಿಸಿ ಮಾತನಾಡಿದರು.

ADVERTISEMENT

ಪ್ರತಿಭೆ ಒಂದು ಜಾತಿ, ಧರ್ಮಕ್ಕೆ ಸೀಮಿತವಲ್ಲ. ಅವಕಾಶ ಸಿಕ್ಕರೆ, ಶಿಕ್ಷಣದ ಅನುಕೂಲಗಳು ಸಿಕ್ಕರೆ ಎಲ್ಲರ ಪ್ರತಿಭೆಗಳೂ ಹೊರಗೆ ಬರುತ್ತದೆ. ಆದ್ದರಿಂದ ಸ್ವಾಭಿಮಾನಿಗಳಾಗಿ, ಉತ್ತಮ ಪ್ರಜೆಗಳಾಗಿ ಬಾಳಲು ಶಿಕ್ಷಣ ಅತ್ಯಂತ ಅಗತ್ಯ. ಎಲ್ಲರೂ ಶಿಕ್ಷಣ ಪಡೆಯಿರಿ. ಶಿಕ್ಷಣದಿಂದ ವಂಚಿತರಾದವರಿಗೆ ಶಿಕ್ಷಣ ಪಡೆಯಲು ಸಹಕರಿಸಿ ಎಂದು ಕರೆ ನೀಡಿದರು.

ನಮಗೆ ಸಹಕರಿಸಿದ ಸಮಾಜದ ಪರವಾಗಿ ನಾವುಗಳು ಶ್ರಮಿಸಬೇಕು. ಶ್ರಮ ಮತ್ತು ಗುರಿ ಇಲ್ಲದೇ ಹೋದರೆ ಯಾರೂ ಏನನ್ನೂ ಸಾಧಿಸಲು ಸಾಧ್ಯವಿಲ್ಲ ಎಂದರು.ಬ್ರಿಟೀಷರು ಬರುವ ಮೊದಲು ಶೂದ್ರ ಸಮುದಾಯಗಳಿಗೆ ಶಿಕ್ಷಣ, ವಿದ್ಯೆ ನಿಷೇಧಿಸಲಾಗಿತ್ತು‌. ಮುಂದುವರೆದ ಜಾತಿಗಳ ಹೆಣ್ಣುಮಕ್ಕಳಿಗೂ ಮೊದಲು ವಿದ್ಯೆ ಕೊಡುವಂತಿರಲಿಲ್ಲ. ಅಂಬೇಡ್ಕರ್ ಅವರು ಶೂದ್ರ ಸಮುದಾಯ ಮತ್ತು ಹೆಣ್ಣುಮಕ್ಕಳಿಗೆ ಶಿಕ್ಷಣದ ಹಕ್ಕು ನೀಡಿದರು. ಈ ಚರಿತ್ರೆಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು ಎಂದರು.

ಸಮುದಾಯದಿಂದ ಮೆಡಿಕಲ್ ಕಾಲೇಜು ಮಾಡಬೇಕು ಎನ್ನುವುದು ಅವೈಜ್ಞಾನಿಕ. ಮೆಡಿಕಲ್ ಕಾಲೇಜು ನಡೆಸುವುದು ದುಬಾರಿ ಆದ್ದರಿಂದ ಬಡವರು ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಸೀಟು ನೀಡಿ ನೆರವಾಗಲು ಸಾಧ್ಯವಿಲ್ಲ. ಆದ್ದರಿಂದ ಪ್ಯಾರಾ ಮೆಡಿಕಲ್ ಕಾಲೇಜುಗಳನ್ನು, ಹಾಸ್ಟೆಲ್ ಗಳನ್ನು ಮತ್ತು ಐಟಿಐ ಗಳನ್ನು ಸಮಾಜದಿಂದ ಆರಂಭಿಸಿದರೆ ಬಡವರು ಮತ್ತು ಗ್ರಾಮೀಣ ಮಕ್ಕಳಿಗೆ ನೆರವಾಗುತ್ತದೆ ಎಂದರು.

ನಾನು ಬಿಎಸ್ಸಿ ಓದುವಾಗ ಹೋಟೆಲ್ ನಿಂದ ಸಾರು ತಂದು ರೂಮಲ್ಲಿ ಅನ್ನ ಮಾಡಿಕೊಂಡು ಊಟ ಮಾಡಬೇಕಿತ್ತು. ಇಂಥಾ ಸ್ಥಿತಿಯಲ್ಲಿ ಸಹಸ್ರಾರು ವಿದ್ಯಾರ್ಥಿಗಳು ಇರುವುದರಿಂದ ನಾನು ವಿದ್ಯಾಸಿರಿ ಕಾರ್ಯಕ್ರಮ ಜಾರಿಗೆ ತಂದೆ ಎಂದು ನುಡಿದರು. ಜಾತಿಗಣತಿ ವರದಿ ಸ್ವೀಕರಿಸುತ್ತೇವೆ ಇಡೀ ದೇಶದಲ್ಲಿ ಜಾತಿಗಣತಿ ಮೊದಲು ಮಾಡಿದ್ದು ನಮ್ಮ ಸರ್ಕಾರ. ನಿಖರವಾಗಿ ಪ್ರತಿ ಜಾತಿಗಳ ಆರ್ಥಿಕ, ಸಾಮಾಜಿಕ, ಆರ್ಥಿಕ ಸ್ಥಿತಿ ತಿಳಿಯುವ ಉದ್ದೇಶದಿಂದ ಜಾತಿ ಜನಗಣತಿ ಮಾಡಿಸಿದ್ದೆ. ನಂತರ ಬಂದ ಸರ್ಕಾರಗಳು ಜಾತಿಗಣತಿ ವರದಿಯನ್ನು ಸ್ವೀಕರಿಸಲಿಲ್ಲ. ಈಗ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಅವರು ಜಾತಿ ಗಣತಿ ವರದಿ ಕೊಡುತ್ತಾರೆ. ನಾವು ಸ್ವೀಕರಿಸುತ್ತೇವೆ ಎಂದರು.

ಹಿಂದುಳಿದ ವರ್ಗಗಳ ವೈದ್ಯ ವಿದ್ಯಾರ್ಥಿಗಳಿಗೆ ಸನ್ಮಾನಿಸುವ ಹಾಗೂ ವಿದ್ಯಾರ್ಥಿ ವೇತನ ವಿತರಿಸುವ ಕಾರ್ಯಕ್ರಮ ಕನಕ ಗುರುಪೀಠದ ಸಿದ್ದರಾಮಾನಂದ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ನೆರವೇರಿತು. ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಕಾರ್ಪೋರೇಟರ್ ಬಿ.ಎನ್.ನಿತೀಶ್ ಪುರುಷೋತ್ತಮ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Tags: BanglorecastcmsiddaramiaheducationKalidasa Health and Education Trust
Previous Post

ಪ್ರಜ್ವಲ್ ದೇವರಾಜ್ ನಾಯಕರಾಗಿ ಅಭಿನಯಿಸಿರುವ “ಗಣ” ಚಿತ್ರದ ರೊಮ್ಯಾಂಟಿಕ್ ಸಾಂಗ್ ಬಿಡುಗಡೆ

Next Post

ಸ್ಯಾಂಡಲ್ ವುಡ್ ಕ್ರಿಕೆಟ್ ಹಬ್ಬ: ನವೆಂಬರ್ 28 ರಿಂದ ಡಿಸೆಂಬರ್ 10 ನಡೆಯಲಿದೆ ಡಾ.ರಾಜ್ ಕಪ್ ಸೀಸನ್-6

Related Posts

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್
Top Story

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

by ಪ್ರತಿಧ್ವನಿ
June 20, 2025
0

ಭಾರತೀಯ ಚಿತ್ರರಂಗವನ್ನು ಕನ್ನಡದತ್ತ ತಿರುಗಿ ನೋಡುವಂತೆ ಮಾಡಿರುವವರ ಪೈಕಿ ನಟ ರಾಕಿಂಗ್‌ ಸ್ಟಾರ್‌ ಯಶ್‌ ಕೂಡ ಒಬ್ಬರು. ಅವರ ತಾಯಿ ಪುಷ್ಪ ಅರುಣ್ ಕುಮಾರ್ ತಮ್ಮದೇ ಪಿಎ...

Read moreDetails
ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

June 20, 2025

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

June 20, 2025
Next Post
ಸ್ಯಾಂಡಲ್ ವುಡ್ ಕ್ರಿಕೆಟ್ ಹಬ್ಬ:  ನವೆಂಬರ್ 28 ರಿಂದ ಡಿಸೆಂಬರ್ 10 ನಡೆಯಲಿದೆ ಡಾ.ರಾಜ್ ಕಪ್ ಸೀಸನ್-6

ಸ್ಯಾಂಡಲ್ ವುಡ್ ಕ್ರಿಕೆಟ್ ಹಬ್ಬ: ನವೆಂಬರ್ 28 ರಿಂದ ಡಿಸೆಂಬರ್ 10 ನಡೆಯಲಿದೆ ಡಾ.ರಾಜ್ ಕಪ್ ಸೀಸನ್-6

Please login to join discussion

Recent News

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್
Top Story

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

by ಪ್ರತಿಧ್ವನಿ
June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 
Top Story

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

by Chetan
June 20, 2025
Top Story

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

by ಪ್ರತಿಧ್ವನಿ
June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 
Top Story

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

by Chetan
June 20, 2025
ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 
Top Story

ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 

by Chetan
June 20, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

June 20, 2025
ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

June 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!