ರಾಜ್ಯ ಕಾಂಗ್ರೆಸ್ ಶಾಸಕರಿಂದ ರಣದೀಪ್ ಸಿಂಗ್ ಸುರ್ಜೇವಾಲ (Randeep sing surjewala) ಅಭಿಪ್ರಾಯ ಸಂಗ್ರಹ ಮಾಡುತ್ತಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಡಿಸಿಎಂ ಡಿಕೆ ಶಿವಕುಮಾರ್ (Dcm Dk Shivakumar) ಪ್ರತಿಕ್ರಿಯಿಸಿದ್ದು, ನಮ್ಮ ಶಾಸಕರಿಗೆಯಾವ ಅಸಮಾಧಾನವೂ ಇಲ್ಲ..ಏನು ಇಲ್ಲ ಎಂದಿದ್ದಾರೆ.

ಇನ್ನು ಶಾಸಕ ಇಕ್ಬಾಲ್ ಹುಸೇನ್ ಗೆ ಪಕ್ಷ ನೊಟೀಸ್ ಜಾರಿ ಮಾಡಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತಮಾಡಿದ ಅವರು,ಇಕ್ಬಾಲ್ ಹುಸೇನ್ ಗೂ ನೋಟಿಸ್ ಕೊಡ್ತೀನಿ, ಬೇರೆ ಅವರಿಗೂ ನೊಟೀಸ್ ಕೊಡಬೇಕಾಗುತ್ತದೆ ಎಂದು ವಾರ್ನಿಂಗ್ ಕೊಟ್ಟಿದ್ದಾರೆ.

ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಲ್ಲಿ ಇರುವಾಗ ಬೇರೆ ಯಾರೂ ಆ ಬಗ್ಗೆ ಅಪಸ್ವರ ಎತ್ತಬಾರದು.ಪಕ್ಷದ ಶಿಸ್ತು ಯಾರು ಉಲ್ಲಂಘನೆ ಮಾಡಬಾರದು, ಪಕ್ಷದಲ್ಲಿ ಶಿಸ್ತು ಮುಖ್ಯ.ಪಕ್ಷಕ್ಕೆ ಎಲ್ಲರೂ ಕಷ್ಟಪಟ್ಟಿದ್ದಾರೆ.ನನ್ನಂತ ನೂರಾರು ಕಾರ್ಯಕರ್ತರು ಕಷ್ಟ ಪಟ್ಟಿದ್ದಾರೆ, ನಾನು ಒಬ್ಬನೇ ಕಷ್ಟಪಟ್ಟಿದ್ದೀನಾ? ಎಂದಿದ್ದಾರೆ.

ಇನ್ನು ಸಿಎಂ ಸಿದ್ದರಾಮಯ್ಯ ಬಗ್ಗೆ ಬಿ.ಆರ್. ಪಾಟೀಲ್ ವೀಡಿಯೋ ವಿಚಾರಕ್ಕೆ ಸಂಬಂಧಪಟ್ಟಂತೆ, ರಿಯಾಕ್ಟ್ ಮಾಡಲು ಡಿಸಿಎಂ ಡಿ.ಕೆ ಶಿವಕುಮಾರ್ ನಕಾರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದೆ ಡಿಸಿಎಂ ಡಿಕೆಶಿ ತೆರಳಿದ್ದಾರೆ.