ಮುಡಾ 50 – 50 ಅನುಪಾತದಲ್ಲಿ ನಿವೇಶನ ಹಂಚಿಕೆ ಹಗರಣದ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಹಾಗು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದಿಗೆ ಆದೇಶ ಕಾಯ್ದಿರಿಸಿತ್ತು.

ಲೋಕಾಯುಕ್ತ ಅಧಿಕಾರಿಗಳು ಅಂತಿಮ ವರದಿ ಸಲ್ಲಿಕೆ ಮಾಡಲು ಸಮಯಾವಕಾಶ ನೀಡಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಮೇ 7ರಂದು ವಿಚಾರಣೆ ನಡೆಸುವುದಾಗಿ ತಿಳಿಸಿದೆ. ಲೋಕಾಯುಕ್ತ ಪೊಲೀಸರು ಅಂತಿಮ ವರದಿ ಸಲ್ಲಿಸಿದ ಬಳಿಕವೇ ಬಿ ರಿಪೋರ್ಟ್ ಬಗ್ಗೆ ಆದೇಶ ನೀಡುವುದಾಗಿ ಕೋರ್ಟ್ ಹೇಳಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯಗೆ ಕೊಂಚ ರಿಲೀಫ್ ಸಿಕ್ಕಿದೆ.

ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ಕುರಿತ ಆದೇಶ ಸದ್ಯಕ್ಕಿಲ್ಲ ಎಂದಿರುವ ಕೋರ್ಟ್. ತನಿಖೆ ಮುಂದುವರಿಸುವಂತೆ ಲೋಕಾಯುಕ್ತ ಪೊಲೀಸರಿಗೆ ನ್ಯಾ. ಸಂತೋಷ್ ಗಜಾನನ ಭಟ್ ಅವರಿದ್ದ ಪೀಠ ಸೂಚನೆ ನೀಡಿದೆ. ಬಿ ರಿಪೋರ್ಟ್ ವಿರುದ್ಧ ED ತಕರಾರು ಸಲ್ಲಿಸಲು ಅವಕಾಆಶ ಇಲ್ಲ ಲೋಕಾಯುಕ್ತರ ಪರ ವಾದ ಮಂಡಿಸಿದ್ದರು. ಆದರೆ ಇ.ಡಿ ಕೂಡ ತಕರಾರು ಸಲ್ಲಿಸಲು ಅವಕಾಶವಿದೆ ಎಂದು ಕೋರ್ಟ್ ತಿಳಿಸಿದೆ.

ಲೋಕಾಯುಕ್ತ ಪೊಲೀಸರ ಅಂತಿಮ ವರದಿ ಬಳಿಕವೇ ಬಿ ರಿಪೋರ್ಟ್ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ. ಲೋಕಾಯುಕ್ತ ಪೊಲೀಸರು ತನಿಖೆ ಇನ್ನೂ ಪೂರ್ಣಗೊಳಿಸದ ಹಿನ್ನೆಲೆಯಲ್ಲಿ ತನಿಖೆ ಮುಂದುವರಿಸಲು ಸೂಚನೆ ನೀಡಲಾಗಿದೆ. ಪೂರ್ಣ ವರದಿ ನೀಡಿದ ಬಳಿಕ ಬಿ ರಿಪೋರ್ಟ್ ಅರ್ಜಿ ಬಗ್ಗೆ ಆದೇಶ ನೀಡುವುದಾಗಿ ಹೇಳಿ ಮೇ 7ಕ್ಕೆ ವಿಚಾರಣೆ ಮುಂದೂಡಿದ್ದಾರೆ.

ದೂರುದಾರ ಸ್ನೇಹಮಯಿ ಕೃಷ್ಣ ಮಾತನಾಡಿ, ಲೋಕಾಯುಕ್ತ ಪೊಲೀಸರು ತನಿಖೆ ಪೂರ್ಣಗೊಳಿಸದೇ ಕೋರ್ಟ್ಗೆ ವರದಿ ಸಲ್ಲಿಕೆ ಮಾಡಿದ್ರು. ಸಿಎಂ ಹಾಗೂ ಸಿಎಂ ಕುಟುಂಬ ಉಳಿಸಲಿಕ್ಕೆ ಐಪಿಎಸ್ ಅಧಿಕಾರಿಗಳು ಈ ರೀತಿ ಮಾಡಿದ್ರು. ಅಂತಿಮ ವರದಿ ಅಂದ್ರೆ ಏನು ಅಂತ ಐಪಿಎಸ್ ಅಧಿಕಾರಿಗಳಿಗೆ ಗೊತ್ತಿಲ್ಲ. ಅಪರಾಧ ಕೃತ್ಯ ಗೊತ್ತಿಲ್ಲ, ಸಾಕ್ಷ್ಯ ಗೊತ್ತಿಲ್ಲ.. ರಾಜ್ಯದ ಜನ ಇದನ್ನ ಗಮನಿಸಬೇಕು.. ನಮ್ಮಂಥ ಹೋರಾಟಗಾರರಿಗೆ ಅನ್ಯಾಯ ಮಾಡ್ಬೇಡಿ.. ನಾನು ಹೇಳಿ ಕೊಡ್ತೀನಿ ಬೇಕಿದ್ರೆ ಅಧಿಕಾರಿಗಳನ್ನ ನನ್ನ ಬಳಿ ಕಳುಹಿಸಿ eಂದಿರುವ ಸ್ನೇಹಮಯಿ, ಕೋರ್ಟ್ ಛೀ ಮಾರಿ ಹಾಕಿದಂತೆ ಆಗಿದೆ ಎಂದಿದ್ದಾರೆ.