• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುಡಾ ಕೇಸ್​ನಲ್ಲಿ ಸಿದ್ದರಾಮಯ್ಯ ಪರ ಆದೇಶ ಬಂದಿಲ್ಲ.. ಮತ್ತೊಂದು ಅವಕಾಶ ಅಷ್ಟೇ..

ಕೃಷ್ಣ ಮಣಿ by ಕೃಷ್ಣ ಮಣಿ
April 15, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಮುಡಾ 50 – 50 ಅನುಪಾತದಲ್ಲಿ ನಿವೇಶನ ಹಂಚಿಕೆ ಹಗರಣದ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್​ ಸಿಕ್ಕಂತಾಗಿದೆ. ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಹಾಗು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದಿಗೆ ಆದೇಶ ಕಾಯ್ದಿರಿಸಿತ್ತು.

ADVERTISEMENT

ಲೋಕಾಯುಕ್ತ ಅಧಿಕಾರಿಗಳು ಅಂತಿಮ ವರದಿ ಸಲ್ಲಿಕೆ ಮಾಡಲು ಸಮಯಾವಕಾಶ ನೀಡಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಮೇ 7ರಂದು ವಿಚಾರಣೆ ನಡೆಸುವುದಾಗಿ ತಿಳಿಸಿದೆ. ಲೋಕಾಯುಕ್ತ ಪೊಲೀಸರು ಅಂತಿಮ ವರದಿ ಸಲ್ಲಿಸಿದ ಬಳಿಕವೇ ಬಿ ರಿಪೋರ್ಟ್ ಬಗ್ಗೆ ಆದೇಶ ನೀಡುವುದಾಗಿ ಕೋರ್ಟ್​ ಹೇಳಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯಗೆ ಕೊಂಚ ರಿಲೀಫ್​ ಸಿಕ್ಕಿದೆ.

ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ಕುರಿತ ಆದೇಶ ಸದ್ಯಕ್ಕಿಲ್ಲ ಎಂದಿರುವ ಕೋರ್ಟ್​. ತನಿಖೆ ಮುಂದುವರಿಸುವಂತೆ ಲೋಕಾಯುಕ್ತ ಪೊಲೀಸರಿಗೆ ನ್ಯಾ. ಸಂತೋಷ್ ಗಜಾನನ ಭಟ್ ಅವರಿದ್ದ ಪೀಠ ಸೂಚನೆ ನೀಡಿದೆ. ಬಿ ರಿಪೋರ್ಟ್​ ವಿರುದ್ಧ ED ತಕರಾರು ಸಲ್ಲಿಸಲು ಅವಕಾಆಶ ಇಲ್ಲ ಲೋಕಾಯುಕ್ತರ ಪರ ವಾದ ಮಂಡಿಸಿದ್ದರು. ಆದರೆ ಇ.ಡಿ ಕೂಡ ತಕರಾರು ಸಲ್ಲಿಸಲು ಅವಕಾಶವಿದೆ ಎಂದು ಕೋರ್ಟ್​ ತಿಳಿಸಿದೆ.

ಲೋಕಾಯುಕ್ತ ಪೊಲೀಸರ ಅಂತಿಮ‌ ವರದಿ ಬಳಿಕವೇ ಬಿ ರಿಪೋರ್ಟ್ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ. ಲೋಕಾಯುಕ್ತ ಪೊಲೀಸರು ತನಿಖೆ ಇನ್ನೂ ಪೂರ್ಣಗೊಳಿಸದ ಹಿನ್ನೆಲೆಯಲ್ಲಿ ತನಿಖೆ ಮುಂದುವರಿಸಲು ಸೂಚನೆ ನೀಡಲಾಗಿದೆ. ಪೂರ್ಣ ವರದಿ ನೀಡಿದ ಬಳಿಕ ಬಿ ರಿಪೋರ್ಟ್ ಅರ್ಜಿ ಬಗ್ಗೆ ಆದೇಶ ನೀಡುವುದಾಗಿ ಹೇಳಿ ಮೇ 7ಕ್ಕೆ ವಿಚಾರಣೆ ಮುಂದೂಡಿದ್ದಾರೆ.

ದೂರುದಾರ ಸ್ನೇಹಮಯಿ ಕೃಷ್ಣ ಮಾತನಾಡಿ, ಲೋಕಾಯುಕ್ತ ಪೊಲೀಸರು ತನಿಖೆ ಪೂರ್ಣಗೊಳಿಸದೇ ಕೋರ್ಟ್​ಗೆ ವರದಿ ಸಲ್ಲಿಕೆ ಮಾಡಿದ್ರು. ಸಿಎಂ ಹಾಗೂ ಸಿಎಂ ಕುಟುಂಬ ಉಳಿಸಲಿಕ್ಕೆ ಐಪಿಎಸ್ ಅಧಿಕಾರಿಗಳು ಈ ರೀತಿ ಮಾಡಿದ್ರು. ಅಂತಿಮ ವರದಿ ಅಂದ್ರೆ ಏನು ಅಂತ ಐಪಿಎಸ್ ಅಧಿಕಾರಿಗಳಿಗೆ ಗೊತ್ತಿಲ್ಲ. ಅಪರಾಧ ಕೃತ್ಯ ಗೊತ್ತಿಲ್ಲ, ಸಾಕ್ಷ್ಯ ಗೊತ್ತಿಲ್ಲ.. ರಾಜ್ಯದ ಜನ ಇದನ್ನ ಗಮನಿಸಬೇಕು.. ನಮ್ಮಂಥ ಹೋರಾಟಗಾರರಿಗೆ ಅನ್ಯಾಯ ಮಾಡ್ಬೇಡಿ.. ನಾನು ಹೇಳಿ ಕೊಡ್ತೀನಿ ಬೇಕಿದ್ರೆ ಅಧಿಕಾರಿಗಳನ್ನ ನನ್ನ ಬಳಿ ಕಳುಹಿಸಿ eಂದಿರುವ ಸ್ನೇಹಮಯಿ, ಕೋರ್ಟ್ ಛೀ ಮಾರಿ ಹಾಕಿದಂತೆ ಆಗಿದೆ ಎಂದಿದ್ದಾರೆ.

Tags: B ReportCM SiddaramaiahCourtCourt stayDCM ShivakumarEDIPS OfficersKarnatakalokayukthalokayuktha policeMuda CaseSanthosh Gajanana Bhatsiddaramaiahsnehamayi krishna
Previous Post

ವಲಸೆ ಕಾರ್ಮಿಕರ ಹಿನ್ನೆಲೆ ಪರಿಶೀಲನೆಗೆ ಮುಂದಾದ ಸಚಿವ ಲಾಡ್..!

Next Post

ಒಕ್ಕಲಿಗ ಸಮುದಾಯದ ಹಿತ ಕಾಯಲು ಶತಸಿದ್ಧ – ಪರೋಕ್ಷ ಸಂದೇಶ ರವಾನಿಸಿದ ಡಿಸಿಎಂ ಡಿಕೆ ! 

Related Posts

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?
Top Story

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

by ಪ್ರತಿಧ್ವನಿ
April 22, 2026
0

ಗದಗ :  ಬೇಸಿಗೆ ಕಾಲ ಆರಂಭವಾಗಿದ್ದು, ಬಿರು ಬಿಸಿಲಿನ ಬೇಗೆಗೆ ಜನರು ತತ್ತರಿಸಿದ್ದಾರೆ. ಜಿಲ್ಲೆಯಲ್ಲಂತೂ ದಿನದಿಂದ ದಿನಕ್ಕೆ ಸೂರ್ಯ ಕಾವೇರುತ್ತಿದ್ದಾನೆ. ಬಿಸಿಲಿನ ಹೊಡೆತ ತಾಳಲಾರದೆ ಜನರು ಹೈರಾಣಾಗಿದ್ದಾರೆ. https://youtu.be/dMLKOlJu3kY?si=xK3Kdu_8RkdSidp9...

Read moreDetails
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
Next Post
ಜಾತಿಗಣತಿ ವರದಿ ಜಾರಿ ಬಗ್ಗೆ ಒಕ್ಕಲಿಗ ನಾಯಕರ ನಿಲುವೇನು..?! ಅಡ್ಡಗೋಡೆ ಮೇಲೆ ದೀಪವಿಟ್ಟ ಡಿಕೆಶಿ..! 

ಒಕ್ಕಲಿಗ ಸಮುದಾಯದ ಹಿತ ಕಾಯಲು ಶತಸಿದ್ಧ - ಪರೋಕ್ಷ ಸಂದೇಶ ರವಾನಿಸಿದ ಡಿಸಿಎಂ ಡಿಕೆ ! 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada